ಅಮಿತ್ ಶಾ ನಿರ್ದೇಶನದಂತೆ ದೇವರಾಜೇಗೌಡ ಮಾತು ಆಡುತ್ತಿದ್ದಾರೆ: ಸಚಿವ ಪ್ರಿಯಾಂಕ್‌ ಖರ್ಗೆ ಆರೋಪ

Date:

Advertisements

ರಾಜ್ಯ ಭೀಕರ ಬರವನ್ನು ಎದುರಿಸುತ್ತಿದೆ. ದೇವರಾಜೇಗೌಡ ಉಲ್ಲೇಖಿಸಿದ ನಾಲ್ವರು ಸಚಿವರಿಗೆ ಬೇರೆ ಕೆಲಸ ಇಲ್ವಾ? ಇದನ್ನೆಲ್ಲಾ ನಿರ್ದೇಶನ ಮಾಡುತ್ತಿರುವುದು ಅಮಿತ್ ಶಾ ಎಂದು ದೇವರಾಜೇಗೌಡ ಈ ಹಿಂದೆ ಹೇಳಿದ್ದರು. ಹೀಗಿರುವಾಗ, ಅಮಿತ್ ಶಾ ಅವರೇ ದೇವರಾಜೇಗೌಡರ ಬಾಯಿಯಿಂದ ಈ ಎಲ್ಲ ಮಾತನ್ನು ಹೇಳಿಸಿರುವ ಸಾಧ್ಯತೆ ಇಲ್ಲ ಎಂದು ಹೇಗೆ ಹೇಳಲು ಸಾಧ್ಯ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಮುಖಂಡ ದೇವರಾಜೇಗೌಡನ ಹೇಳಿಕೆಗೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಪ್ರಿಯಾಂಕ್‌ ಖರ್ಗೆ, “ದೇವರಾಜೇಗೌಡರು ವಕೀಲರು, ನ್ಯಾಯಾಧೀಶರ ಮುಂದೆನೇ ಸಾಕ್ಷಿ ಸಮೇತ ಹೇಳಿಕೆಯನ್ನು ನೀಡಬಹುದಾಗಿತ್ತಲ್ಲವೇ? ಮಾಧ್ಯಮಗಳ ಮುಂದೆ ಒಂದು, ಕೋರ್ಟ್ ನಲ್ಲಿ ಇನ್ನೊಂದು ಹೇಳಿಕೆಯನ್ನು ನೀಡಿದರೆ, ಇವರ ಮಾತನ್ನು ನಂಬಲು ಸಾಧ್ಯ?” ಎಂದರು.

“ನೂರು ಕೋಟಿ ಏನು ಹುಡುಗಾಟವಲ್ಲ. ಅಮಿತ್ ಶಾ ಅವರಿಗೆ ಈ ರೀತಿ ಆಫರ್ ಇದೆ, ಇಡಿ ಅಥವಾ ಐಟಿ ದಾಳಿ ನಡೆಸಿ ಎಂದು ಮನವಿ ಮಾಡಬೇಕಾಗಿತ್ತು. ಬಿಜೆಪಿ ಅಥವಾ ಜೆಡಿಎಸ್ ಅವರಿಗೆ ಇದು ಬರೀ ರಾಜಕೀಯ. ಕುಟುಂಬಕ್ಕೆ ಅಂಟಿರುವ ಕಳಂಕವನ್ನು ದೂರ ಮಾಡಬೇಕು ಎಂದು ಅವರಿಗಿಲ್ಲ” ಎಂದು ಪರೋಕ್ಷವಾಗಿ ದೇವೇಗೌಡರ ಕುಟುಂಬದ ವಿರುದ್ದ ವಾಗ್ದಾಳಿ ನಡೆಸಿದರು.

Advertisements

“ಎಸ್‌ಐಟಿ ಒಂದು ಸರ್ಕಾರಿ ಸಂಸ್ಥೆ, ಸಿಬಿಐನಿಂದ ಮಾತ್ರ ನ್ಯಾಯ ಸಿಗುತ್ತದೆ ಎನ್ನುವುದು ತಪ್ಪಲ್ಲವೇ, ಅಮಿತ್ ಶಾ ಜೊತೆ ನೇರ ಸಂಪರ್ಕದಲ್ಲಿ ಅವರಿದ್ದಾರಲ್ಲವೇ, ನೂರು ಕೋಟಿ ಆಫರ್ ಬಗ್ಗೆ ಅವರಿಗೆ ತಿಳಿಸಬೇಕಾಗಿತ್ತು” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ಲೈಂಗಿಕ ಹಗರಣ | ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ 

ದೇವರಾಜೇಗೌಡ ಆರೋಪವೇನು?

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವೇಳೆಯಲ್ಲಿಯೇ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, “ಎಲ್.ಆರ್. ಶಿವರಾಮೇಗೌಡ ಮೂಲಕ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜೊತೆಗೆ ಮಾತನಾಡಿಲ್ಲ” ಎಂದು ಹೇಳಿದರು.

“ಡಿ ಕೆಶಿವಕುಮಾರ್ ಅವರು ನನ್ನನ್ನು ಕರೆಸಿ ಮಾತನಾಡಿದ್ದರು. ನೀನು ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಹೇಳು. ಪೆನ್‌ಡ್ರೈವ್‌ನ ಕುಮಾರಸ್ವಾಮಿ ಹಂಚಿದ್ದರು ಅಂತ ಹೇಳು. ನಿನಗೆ ಸಮಸ್ಯೆ ಆಗಲ್ಲ. ಸೆಕ್ಯೂರ್ ಮಾಡ್ತೀನಿ ಅಂತ ಭರವಸೆ ನೀಡಿದ್ದರು” ಎಂದು ದೇವರಾಜೇಗೌಡ ಆರೋಪಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X