ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ: ಬಿ ವೈ ವಿಜಯೇಂದ್ರ

Date:

Advertisements

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋಧನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ಪ್ರಾಥಮಿಕ ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಕೆಯಲ್ಲ ನಾಳಿನ ಪ್ರಜೆಗಳ ಭವ್ಯ ಭವಿಷ್ಯ ರೂಪಿಸುವ ನೈಜ ಅಡಿಪಾಯ. ಒಂದು ಸರ್ಕಾರ ಶಿಕ್ಷಣವನ್ನು ಆಲಕ್ಷಿಸಿದರೆ ದೇಶದ ಭವಿಷ್ಯವನ್ನು ಗಂಡಾಂತರಕ್ಕೆ ತಳ್ಳುವ ನೀಚ ಪ್ರವೃತ್ತಿಯಾಗುತ್ತದೆ” ಎಂದಿದ್ದಾರೆ.

“ಕಾಂಗ್ರೆಸ್ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಇಂತಹ ಪ್ರವೃತ್ತಿ ಮೇಳೈಸುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಶಿಕ್ಷಣ ಅರಾಜಕತೆಯತ್ತ ಸಾಗಿದೆ, ಇದನ್ನು ಮುಖ್ಯಮಂತ್ರಿಗಳು ಇಂದು ಒಪ್ಪಿಕೊಂಡು ಕೃಪಾಂಕ ನೀಡುವಷ್ಟು ತಳಮಟ್ಟಕ್ಕೆ ಕುಸಿದಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಬಗ್ಗೆ ಅಸಹಾಯಕತೆಯಿಂದ ಕೋಪೋದ್ರಿಕ್ತರಾಗಿದ್ದಾರೆ” ಎಂದು ಹೇಳಿದ್ದಾರೆ.

Advertisements

“ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಿಗೆ ಸರಿಸುವ ವಿದ್ವತ್ತು ಪ್ರದರ್ಶಿಸಲು ಹೋಗಿ ನೈಜ ಶಿಕ್ಷಣ ವ್ಯವಸ್ಥೆಯನ್ನು ದಮನ ಮಾಡಲು ಹೊರಟ ಸರ್ಕಾರ ‘ಚಾಲನೆಯ ಅನುಭವವಿಲ್ಲದ ಚಾಲಕನೊಬ್ಬ ವಾಹನ ಅಥವಾ ರೈಲು ಮುನ್ನಡೆಸಿದರೆ ಯಾವ ಸ್ಥಿತಿ ಉಂಟಾಗಬಹುದು’ ಅಂತದ್ದೇ ಸ್ಥಿತಿ ಇಂದು ರಾಜ್ಯದ ಪ್ರಾಥಮಿಕ ಹಾಗೂ ಶಿಕ್ಷಣ ಇಲಾಖೆಗೆ ಒದಗಿ ಬಂದಿದೆ. ‘ಮೇಟಿ ವಿದ್ಯೆಗೆ ರೈತ, ಅಕ್ಷರ ವಿದ್ಯೆಗೆ ವಿನಯವಂತನಿದ್ದರೆ ಕೃಷಿ-ಶಿಕ್ಷಣ ಎರಡೂ ಸಮೃದ್ಧವಾಗುತ್ತದೆ'” ಎಂದು ತಿಳಿಸಿದ್ದಾರೆ.

“ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ವಿವೇಕ ಬಳಸದೆ ವಿದ್ಯಾ ಇಲಾಖೆಯನ್ನು ವಿಧೇಯತೆ ಗೊತ್ತಿಲ್ಲದವರ ಕೈಗೆ ಒಪ್ಪಿಸಿದ್ದ ಕಾರಣಕ್ಕಾಗಿ ಇಂದು ಅವರೇ ಪಶ್ಚಾತಾಪ ಪಡುವಂತಹ ಪರಿಸ್ಥಿತಿ ಉದ್ಭವಿಸಿದೆ. ಈಗಲಾದರೂ ಈ ನಾಡನ್ನು ಹಾಗೂ ದೇಶವನ್ನು ಭವಿಷ್ಯತ್ತಿನಲ್ಲಿ ಕಟ್ಟುವ ಲಕ್ಷಾಂತರ ಮಕ್ಕಳ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳಲ್ಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯನ್ನು ಸರಿ ದಾರಿಗೆ ತರುವ ಕಟ್ಟುನಿಟ್ಟಿನ ಕ್ರಮ ವಹಿಸಲಿ. ಶಿಕ್ಷಣ ಬದ್ಧತೆ ಇದ್ದವರ ಕೈಗೆ ಇಲಾಖೆಯ ಸಾರಥ್ಯ ವಹಿಸಿಕೊಡಲಿ” ಎಂದು ಒತ್ತಾಯಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X