ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯಿಂದ ಆಕಾಂಕ್ಷಿಯಾಗಿದ್ದು ಮೊನ್ನೆ ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಹೀಗಾಗಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ ಎಂದು ಸುರೇಶ್ ಸಜ್ಜನ್ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರ್ಗಿಗೆ ತೆರಳಿ ನಾಮಪತ್ರ ವಾಪಸ್ ಪಡೆಯುವೆ” ಎಂದರು.
“ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ರಾಜುಗೌಡ, ಎನ್.ರವಿಕುಮಾರ್, ಗೋವಿಂದ ಕಾರಜೋಳ ಅವರ ಆಶೀರ್ವಾದ ಪಡೆಯಲು ನಿಯೋಗದೊಂದಿಗೆ ಇಲ್ಲಿಗೆ ಬಂದಿದ್ದೆ. ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆ” ಎಂದು ತಿಳಿಸಿದರು.
“ರಾಜ್ಯಾಧ್ಯಕ್ಷರು ಪಕ್ಷಕ್ಕಾಗಿ ಮಾಡುತ್ತಿರುವ ಹೋರಾಟ, ಸಂಘಟನಾ ಕಾರ್ಯಕ್ಕೆ ಅವರು ಮೆಚ್ಚುಗೆ ಸೂಚಿಸಿದರು. ನನಗೆ ಟಿಕೆಟ್ ಮುಖ್ಯವಲ್ಲ; ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದು ಅವರು ನುಡಿದರು. ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಂದೆ ಮುಖ್ಯಮಂತ್ರಿಯಾಗಲು ಅವರ ಕೈ ಬಲಪಡಿಸುವ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.
ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರನ್ನು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಪಕ್ಷದ ಮುಖಂಡರಾದ ಶ್ರೀ ಸುರೇಶ್ ಸಜ್ಜನ್ ಅವರು ಭೇಟಿಯಾದರು.
ಭೇಟಿಯ ವೇಳೆ ನಾಮಪತ್ರ ವಾಪಸ್ ಪಡೆದು ಎನ್ಡಿಎ ಅಭ್ಯರ್ಥಿ ಶ್ರೀ ಅಮರನಾಥ ಪಾಟೀಲ್ ಅವರನ್ನು ಬೆಂಬಲಿಸುವಂತೆ ರಾಜ್ಯಾಧ್ಯಕ್ಷರು ಮನವಿ… pic.twitter.com/0TtQNqOqCW
— BJP Karnataka (@BJP4Karnataka) May 18, 2024
