ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ 40 ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಂಡಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಚುನಾವಣಾ ಇಲಾಖೆ ತಿಳಿಸಿದೆ.
ನಾಲ್ಕು ಉದ್ಯೋಗಿಗಳನ್ನು ಅಮಾನತುಗೊಳಿಸಲಾಗಿದ್ದು ಒಬ್ಬರನ್ನು ಉದ್ಯೋಗದಿಂದಲೇ ತೆಗೆದುಹಾಕಲಾಗಿದೆ. ಇನ್ನೊಬ್ಬರ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಲಾಗಿದೆ. ಉಳಿದಂತೆ 34 ಮಂದಿಯ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ.
ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ | 370ನೇ ವಿಧಿ ರದ್ಧತಿ ಮೋದಿಯವರ ಸಾಧನೆಯಾಗಿದ್ದರೆ, ಕಾಶ್ಮೀರದಲ್ಲಿ ಬಿಜೆಪಿ ಯಾಕೆ ಕಣದಲ್ಲಿಲ್ಲ?
ಶ್ರೀನಗರ ಜಿಲ್ಲೆಯಿಂದ ಅತಿ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ. ಕುಲ್ಗಾಮ್ ಮತ್ತು ರಾಜೌರಿ ಎರಡನೇ ಅತಿ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆ ನಡೆದಿರುವ ಸ್ಥಳವಾಗಿದೆ. ಮೂರನೇ ಸ್ಥಾನದಲ್ಲಿ ಉಧಮ್‌ಪುರ ಮತ್ತು ಗಂದರ್‌ಬಾಲ್ ಜಿಲ್ಲೆಗಳಿದೆ. ಇನ್ನು ಕಿಶ್ತ್ವಾರ್, ಬಂಡಿಪೋರಾ, ರಿಯಾಸಿ ಮತ್ತು ಸಾಂಬಾ ಜಿಲ್ಲೆಗಳಲ್ಲಿ ಅತಿ ಕಡಿಮೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿದೆ.
ಕುಪ್ವಾರದಲ್ಲಿ ಇಬ್ಬರು, ಗಂದರ್‌ಬಲ್‌ನಲ್ಲಿ ಒಬ್ಬರು ಮತ್ತು ದೋಡಾ ಜಿಲ್ಲೆಯಲ್ಲಿ ಒಬ್ಬರನ್ನು ವಿಚಾರಣೆ ನಡೆಯುವವರೆಗೂ ಅಮಾನತುಗೊಳಿಸಲಾಗಿದೆ. ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕಾರಣ ಒಬ್ಬ ಉದ್ಯೋಗಿಯ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.
ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ| ಭಯೋತ್ಪಾದಕ ದಾಳಿ; ಬಿಜೆಪಿಯ ಮಾಜಿ ಸರಪಂಚ ಹತ್ಯೆ, ಪ್ರವಾಸಿಗರಿಗೆ ಗಾಯ
ಹೆಚ್ಚುವರಿಯಾಗಿ, ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಒಬ್ಬ ಚೌಕಿದಾರನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ದೂರುಗಳ ಆಧಾರದಲ್ಲಿ ಈ ಎಲ್ಲ ನೌಕರರ ವಿರುದ್ಧ ಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.