ಪತಂಜಲಿ ‘ಸೋನ್ ಪಾಪ್ಡಿ’ ಆಹಾರ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ; ಮೂವರಿಗೆ ಜೈಲು

Date:

Advertisements

ಪತಂಜಲಿಯ ಎಲೈಚಿ (ಏಲಕ್ಕಿ) ‘ಸೋನ್ ಪಾಪ್ಡಿ’ ತಯಾರಿಕೆಯಲ್ಲಿ ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಉತ್ತರಾಖಂಡದ ನ್ಯಾಯಾಲಯವು ಮೂವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಪಿಥೋರಗಢ್ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಸಂಜಯ್ ಸಿಂಗ್ ಅವರು ಶನಿವಾರ ಜೈಲು ಶಿಕ್ಷೆಯ ಜೊತೆಗೆ 5-25 ಸಾವಿರ ರೂಪಾಯಿವರೆಗೆ ದಂಡ ವಿಧಿಸಿದ್ದಾರೆ ಎಂದು ಅಧಿಕಾರಿ ರಿತೇಶ್ ವರ್ಮಾ ತಿಳಿಸಿದ್ದಾರೆ.

ಪಿಥೋರಗಢ್‌ನ ಬೇರಿನಾಗ್ ಪಟ್ಟಣದ ಅಂಗಡಿಯ ವ್ಯಾಪಾರಿ ಲೀಲಾಧರ್ ಪಾಠಕ್‌ಗೆ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ಮತ್ತು ಉತ್ಪನ್ನವನ್ನು ಮಾರಾಟ ಮಾಡಿದ್ದಕ್ಕಾಗಿ ಐದು ಸಾವಿರ ರೂಪಾಯಿ ದಂಡ ವಿಧಿಸಿದೆ ಎಂದು ವರ್ಮಾ ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಬಿಜೆಪಿ ಆಡಳಿತವಿರುವ ಉತ್ತರಾಖಂಡದಲ್ಲಿ ರಾಮ್‌ದೇವ್‌ಗೆ ದೊಡ್ಡ ಹಿನ್ನಡೆ: 14 ಪತಂಜಲಿ ಉತ್ಪನ್ನಗಳ‌ ಲೈಸೆನ್ಸ್ ರದ್ದು

ನೈನಿತಾಲ್‌ನ ರಾಮನಗರದಲ್ಲಿರುವ ಪತಂಜಲಿಯ ಅಧಿಕೃತ ಪ್ರತಿನಿಧಿ ಕನ್ಹಾಜಿ ಡಿಸ್ಟ್ರಿಬ್ಯೂಟರ್ಸ್ ಪ್ರೈವೇಟ್ ಲಿಮಿಟೆಡ್‌ನ ಸಹಾಯಕ ವ್ಯವಸ್ಥಾಪಕ ಅಜಯ್ ಜೋಶಿ ಅವರಿಗೆ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ. ಕಂಪನಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಅಭಿಷೇಕ್ ಕುಮಾರ್ ಅವರಿಗೆ 25 ಸಾವಿರ ರೂಪಾಯಿ ದಂಡ ಮತ್ತು ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ 2006ರ ಅಡಿಯಲ್ಲಿ ಮೂವರನ್ನು ಅಪರಾಧಿಗಳೆಂದು ಘೋಷಿಸಲಾಗಿದೆ ಎಂದು ರಿತೇಶ್ ವರ್ಮಾ ಹೇಳಿದರು.

ಸೆಪ್ಟೆಂಬರ್ 17, 2019 ರಂದು ಪಾಠಕ್ ಅವರ ಅಂಗಡಿಯಿಂದ ಪತಂಜಲಿ ಎಲೈಚಿ ನವರತ್ನ ಸೋನ್ ಪಾಪ್ಡಿ ಮಾದರಿಗಳನ್ನು ಸಂಗ್ರಹಿಸಿ ಅದನ್ನು ಪರೀಕ್ಷೆಗಾಗಿ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ರಾಷ್ಟ್ರೀಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮಾದರಿಗಳು ಆಹಾರ ಸುರಕ್ಷತಾ ಮಾನದಂಡಗಳನ್ನು ಪೂರೈಸಿಲ್ಲ ಎಂದು ತಿಳಿದು ಬಂದಿದೆ. 2021ರಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36...

ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

Download Eedina App Android / iOS

X