ಕೊಪ್ಪಳ ನಗರದ ಮಧ್ಯಭಾಗದಲ್ಲಿರುವ ವಾಣಿಜ್ಯ ಮಳಿಗೆಗೆ ಸೋಮವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದರು.
ನಗರದ ಕೇಂದ್ರೀಯ ಬಸ್ ನಿಲ್ದಾಣದ ಎದುರು ಇರುವ ವರ್ಣೇಕರ್ ಕಾಂಪ್ಲೆಕ್ಸ್ ಮಾರ್ಗದಿಂದ ರೈಲ್ವೆ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪೇಯಿಂಟ್ ಮಾರಾಟದ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಒಂದೂವರೆ ತಾಸಿನಿಂದ ಪ್ರಯತ್ನ ಮಾಡಿದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ.
ಅಕ್ಕಪಕ್ಕದ ಅಂಗಡಿಗಳಿಗೂ ವೇಗವಾಗಿ ಬೆಂಕಿ ಹರಡುತ್ತಿರುವ ಕಾರಣ ವ್ಯಾಪಾರಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಬೆಂಕಿ ಹೊತ್ತಿಕೊಂಡ ಪಕ್ಕದ ಮಳಿಗೆಯಲ್ಲಿ ಎಸ್‌ಬಿಐ ಎಟಿಎಂ ಕೇಂದ್ರ, ಅದರ ಪಕ್ಕದಲ್ಲಿ ಬ್ಯಾಟರಿಗಳ ಮಾರಾಟದ ಜೈಲಕ್ಷ್ಮಿ ಎಂಟರ್ ಪ್ರೈಸಸ್ ಅಂಗಡಿ ಇದೆ. ಅದರಲ್ಲಿರುವ ಬ್ಯಾಟರಿಗಳನ್ನು ಹೊರಗಡೆ ತರಲು ಅಂಗಡಿಯವರು ಹಾಗೂ ಸಾರ್ವಜನಿಕರು ಕಸರತ್ತು ನಡೆಸಿದರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | 25, 26ರಂದು 10ನೇ ಮೇ ಸಾಹಿತ್ಯ ಸಮ್ಮೇಳನ: ಬಸವರಾಜ್ ಸೂಳಿಬಾವಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಜನರನ್ನು ನಿಯಂತ್ರಿಸಲು ಖುದ್ದಾಗಿ ಅವರೇ ಲಾಠಿ ಹಿಡಿದು ಕೆಲಸ ನಿರ್ವಹಿಸಿದರು
