ಮೇ 21ರಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಬಿಡುಗಡೆ ಮಾಡಲಿದೆ. ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ಜಾಲತಾಣದಲ್ಲಿ ನೋಡಬಹುದಾಗಿದೆ.
ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ಹಂಚಿಕೊಂಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಏ.29ರಿಂದ ಮೇ 16ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಗೆ 1,9,300 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.
ಫಲಿತಾಂಶ ಮೇ 21ರ ಮಧ್ಯಾಹ್ನ 3 ಗಂಟೆಗೆ ವೆಬೈಸೈಟನ್‌ನಲ್ಲಿ https;//karresults.nic.in ಪ್ರಕಟವಾಗಲಿದೆ.
ಈಗಾಗಲೇ, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದರೆ, ಮೊದಲ ಹಂತದಲ್ಲಿ ಅನುತ್ತೀರ್ಣರಾಗಿ ಎರಡನೇ ಬಾರಿಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಇಂದು ಬಿಡುಗಡೆಯಾಗಲಿದೆ. ದ್ವಿತೀಯ ಪಿಯುಸಿ 2ರ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯಗೊಂಡಿದೆ.
ಈ ಸುದ್ದಿ ಓದಿದ್ದೀರಾ? ಪ್ರತಿಭಟನೆಗೆ ಮಣಿದ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ: ವಾಹನಗಳ ಪ್ರವೇಶ ಶುಲ್ಕ ರದ್ದು
ಈ ವರ್ಷದಿಂದಲೇ 3 ಬಾರಿ ಪರೀಕ್ಷೆ ಬರೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ.
ಫಲಿತಾಂಶ ನೋಡುವುದು ಹೇಗೆ?
karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ, ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ ನಂತರ ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ. ಬಳಿಕ ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶ ಸ್ಕ್ರೀನ್ ಮೇಲೆ ಕಾಣಿಸುತ್ತದೆ. ಈಗ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.