ಬೆಂಗಳೂರು | ಫಾರ್ಮ್‌ಹೌಸ್‌ನಲ್ಲಿ ರೇವ್ ಪಾರ್ಟಿ; ಐವರ ಬಂಧನ

Date:

Advertisements

ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಠಾಣೆ ವ್ಯಾಪ್ತಿಯಲ್ಲಿರುವ ಜಿ.ಆರ್. ಫಾರ್ಮ್‌ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

ಈ ಬಗ್ಗೆ ಮಂಗಳವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, “ಈ ರೇವ್ ಪಾರ್ಟಿಯಲ್ಲಿ ತೆಲುಗಿನ ಪೋಷಕ ನಟಿ ಭಾಗಿಯಾಗಿದ್ದರು. ಆದರೆ, ಯಾವುದೇ ಜನಪ್ರತಿಧಿಗಳು ಭಾಗಿಯಾಗಿರಲಿಲ್ಲ” ಎಂದು ತಿಳಿಸಿದ್ದಾರೆ.

“ಪಾರ್ಟಿ ನಡೆಯುತ್ತಿರುವುದರ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸ್ಥಳೀಯ ಪೊಲೀಸರೊಂದಿಗೆ ಸೇರಿ ದಾಳಿ ನಡೆಸಿದ್ದಾರೆ. ಈ ವೇಳೆ, ಮಾದಕ ವಸ್ತು ಪತ್ತೆಗೆ ತರಬೇತಿ ಪಡೆದಿರುವ ಶ್ವಾನದಳದ ನೆರವು ಪಡೆಯಲಾಗಿದೆ. ನೂರಕ್ಕೂ ಅಧಿಕ ಜನ ಈ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ದಾಳಿ ವೇಳೆ ಮಾದಕ ವಸ್ತುಗಳು ಪತ್ತೆಯಾಗಿವೆ. ಕೆಲವರು ಬಳಸುತ್ತಿದ್ದ ಮಾದಕ ಪದಾರ್ಥಗಳನ್ನು ಸ್ವಿಮ್ಮಿಂಗ್ ಪೂಲ್ ಮತ್ತಿತರ ಕಡೆ ಎಸೆದಿದ್ದಾರೆ” ಎಂದಿದ್ದಾರೆ.

Advertisements

“ಈ ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರನ್ನು ಬಂಧಿಸಲಾಗಿದೆ. ಘಟನಾ ಸ್ಥಳ ಬೆಂಗಳೂರು ಗ್ರಾಮಾಂತರದ ಹೆಬ್ಬಗೋಡಿ ಠಾಣಾ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಅಲ್ಲಿಗೆ ವರ್ಗಾವಣೆ ಮಾಡಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಿದ ಎನ್​ಐಎ ಅಧಿಕಾರಿಗಳು

“ಅಲ್ಲದೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಎಲ್ಲರನ್ನೂ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದ್ದು, ಅದರ ವರದಿ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ. ದಾಳಿ ಸಂದರ್ಭದಲ್ಲಿ ಪೋಷಕ ನಟಿಯೊಬ್ಬರು ಯಾವ ಸಂದರ್ಭದಲ್ಲಿ ವಿಡಿಯೋ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಆ ಬಗ್ಗೆ ಸಹ ತನಿಖೆ ಮಾಡಲಾಗುತ್ತಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ‌.

ಗೋಪಾಲ್ ರೆಡ್ಡಿ ಎಂಬುವವರಿಗೆ ಸೇರಿದ್ದ ಜಿ.ಆರ್. ಫಾರ್ಮ್‌ ಹೌಸ್‌ನಲ್ಲಿ ‘ಸನ್‌ಸೆಟ್‌ ಟು ಸನ್‌ರೈಸ್ ವಿಕ್ಟರಿ’ ಹೆಸರಿನಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಸಿಸಿಬಿ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ, ಫಾರ್ಮ್‌ ಹೌಸ್ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿ ಡ್ರಗ್ಸ್ ಜಪ್ತಿ ಮಾಡಿತ್ತು.

ಡ್ರಗ್ಸ್ ಪೂರೈಕೆ ಮಾಡಿದ್ದ ಪೆಡ್ಲರ್ ಸೇರಿ ಐವರನ್ನು ಬಂಧಿಸಲಾಗಿದೆ. ಫಾರ್ಮ್‌ ಹೌಸ್‌ನಲ್ಲಿ ಎಂಡಿಎಂಎ, ಕೊಕೇನ್, ಹೈಡ್ರೊ ಗಾಂಜಾ ಪತ್ತೆಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X