ಪ್ರಜ್ವಲ್‌ ಪ್ರಕರಣ | ಡಿಕೆಶಿ ಪಾತ್ರ ಸ್ಪಷ್ಟವಿದೆ, ಸಿಎಂ ಕೂಡಲೇ ಸಂಪುಟದಿಂದ ವಜಾ ಮಾಡಲಿ: ಕುಮಾರಸ್ವಾಮಿ ಆಗ್ರಹ

Date:

Advertisements

ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇರವಾಗಿ ಭಾಗಿಯಾಗಿದ್ದು, ಕೂಡಲೇ ರಾಜೀನಾಮೆ ಕೊಡಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಆಡಿಯೋ ಸಂಭಾಷಣೆಯಲ್ಲಿ ಡಿ ಕೆ ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದರು.

“ಪೆನ್‌ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು ಈ ವಿಡಿಯೋಗಳನ್ನು ತಂದು ಕೊಟ್ಟಿದ್ದೆ ಡಿಕೆಶಿಗೆ. ಆ ಸಂದರ್ಭದಲ್ಲಿ ಅವರ ಪಕ್ಷದ ಹಾಸನದ ಅಭ್ಯರ್ಥಿಯೂ ಇದ್ದರು. ಪ್ರಕರಣದಲ್ಲಿ ಇಷ್ಟೆಲ್ಲ ಭಾಗಿಯಾದ ಮೇಲೂ ಅವರನ್ನು ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಸರ್ಕಾರ ಇಂತಹ ತಪ್ಪಿತಸ್ಥರಿಗೆ ರಕ್ಷಣೆ ಕೊಡಬಾರದು, ದುರಂತಕ್ಕೆ ಸಿಎಂ ಸೇರಿದಂತೆ ಇಡಿ ಸರ್ಕಾರವೇ ಅವರ ರಕ್ಷಣೆಗೆ ನಿಂತಿದೆ” ಎಂದು ಆರೋಪಿಸಿದರು.

Advertisements

“ರಾಜಕೀಯ ಸ್ವಾರ್ಥಕ್ಕಾಗಿ, ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಬೇಕೆಂಬ ಕಾರಣಕ್ಕೆ ಡಿಕೆಶಿ ಹೂಡಿರುವ ಸಂಚು ಏನು ಎಂಬುದು ಜಗಜ್ಜಾಹೀರಾಗಿದೆ. ಇಡೀ ದೇಶವೇ ಆ ವ್ಯಕ್ತಿಯ ಹೀನ ಕೆಲಸದ ಬಗ್ಗೆ ಮಾತನಾಡುತ್ತಿದೆ. ನೊಂದ ಮಹಿಳೆಯರ ಜೀವನಕ್ಕೆ ಕೊಳ್ಳಿ ಇಟ್ಟ ಈ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಇಂದು ವೇಳೆ ಸರ್ಕಾರ ಈ ಕಳಂಕಿತ ಸಚಿವನನ್ನು ರಕ್ಷಣೆ ಮಾಡಿದರೆ ಭಾರೀ ದೊಡ್ಡ ಬೆಲೆ ತೆರಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ದೇವರಾಜೇಗೌಡ, ಶಿವರಾಮೇಗೌಡ ನಡುವಿನ ಮೊಬೈಲ್ ಸಂಭಾಷಣೆ ಹೊರಬಂದಾಗಿನಿಂದ ಡಿಕೆಶಿ ಮಾತನಾಡುತ್ತಿಲ್ಲ. ಅದಕ್ಕೆ ನಾನು ಕೇಳಿದ್ದು, ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು. ಆದರೆ, ಈ ವಿಷಯದಲ್ಲಿ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ನೋಡರೆ ದೇವೆಗೌಡರ ಕುಟುಂಬವನ್ನು ರಾಜಕೀಯವಾಗಿ ನಿರ್ನಾಮ ಮಾಡಬೇಕು ಎಂದು ಸಂಚು ನಡೆಯುತ್ತಿದೆ” ಎಂದು ದೂರಿದರು.

“ಈ ನೆಲದ ಕಾನೂನಿನ ಪ್ರಕಾರ ಯಾರೇ ಆದರೂ ನ್ಯಾಯಕ್ಕೆ ತಲೆ ಬಾಗಲೇಬೇಕು. ನಿತ್ಯವೂ ಹಣ, ಅಧಿಕಾರದ ದುರುಪಯೋಗ ಮಾಡಿಕೊಂಡು ಮೆರೆಯುವ ವ್ಯಕ್ತಿಗಳು ಬಹಳ ದಿನ ಮೆರೆಯುವುದಕ್ಕೆ ಸಾಧ್ಯ ಇಲ್ಲ. ಪ್ರತಿಯೊಂದಕ್ಕೂ ಅಂತಿಮ ದಿನಗಳು ಬಂದೇ ಬರುತ್ತವೆ” ಎಂದು ಕಿಡಿಕಾರಿದರು.

“ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಿಬಿಐ ತನಿಖೆ ನಡೆಯಬೇಕು. ನಾವು ಕೂಡ ಏನು ಮಾಡಬೇಕು ಎಂಬ ಬಗ್ಗೆ ಕಾನೂ‌ನು ತಜ್ಞರ ಜತೆ ಚರ್ಚೆ ಮಾಡುತ್ತೇವೆ. ಈ ವಿಷಯದಲ್ಲಿ ಕಾನೂನು ಚೌಕಟ್ಟಿನಲ್ಲಿ, ದೇಶದ ಕಾನೂನು ವ್ಯವಸ್ಥೆಯಲ್ಲಿ ಸತ್ಯಾಂಶ ಹೊರಗೆ ತರಲು ಏನೇನು ಕ್ರಮ ತೆಗೆದುಕೊಳ್ಳಬೇಕೋ ಕೈಗೊಳ್ಳುತ್ತೇವೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದೇವೇರಾಜೇಗೌಡರಿಗೆ ಜೈಲಿನಲ್ಲಿ ಜೀವ ಭಯ

“ಜೈಲಿನಲ್ಲಿ ವಕೀಲ ದೇವೇರಾಜೇಗೌಡರಿಗೆ ಜೀವ ಭಯ ಇದೆ. ಈ ಸರ್ಕಾರದಲ್ಲಿ ಇರುವ ಬಹಳ ಜನರು ಯಾವ ಹಿನ್ನೆಲೆಯಿಂದ ಬಂದಿದ್ದಾರೆ ಎನ್ನುವ ಹಿನ್ನಲೆಯಲ್ಲಿ ನೋಡಿದರೆ ನಿಜ ಇರಬಹುದು. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಮಾಜಿ ಶಾಸಕ ಸುರೇಶ್ ಗೌಡ ಅವರು ಹೇಳಿರಬಹುದು” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X