ಎರಡು ಜಿಲ್ಲೆಗಳಲ್ಲಿ ಹಜ್ ಭವನಕ್ಕಾಗಿ ಅನುದಾನ: ಹಜ್ ಯಾತ್ರಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಿಎಂ ಭರವಸೆ

Date:

Advertisements

“ಎಲ್ಲ ಧರ್ಮದವರೂ ಒಂದು ತಾಯಿಯ ಮಕ್ಕಳಂತೆ ಇರಲು ಎಲ್ಲ ಧರ್ಮದವರಲ್ಲೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಹೆಗಡೆ ನಗರದಲ್ಲಿರುವ ಹಜ್ ಭವನದಲ್ಲಿ ಆಯೋಜಿಸಲಾಗಿದ್ದ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“10,168 ಹಜ್ ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಕೋರಿದ್ದೇನೆ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ನೆಲಸಲಿ ಎಂದು ಪ್ರಾರ್ಥಿಸುವಂತೆ ತಿಳಿಸಿದ್ದೇನೆ. ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದಂತೆ ಹಿಂದೂ, ಮುಸ್ಲಿ, ಕ್ರಿಶ್ಚಿಯನ್, ಭೌದ್ಧ, ಸಿಖ್ ಧರ್ಮದವರೆಲ್ಲಾ ಒಂದು ತಾಯಿಯ ಮಕ್ಕಳಂತೆ ಇರಬೇಕು. ಅಂಥ ವಾತಾವರಣ ನಿರ್ಮಾಣವಾಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ಬಂದು ಎಲ್ಲರೂ ಸಬಲರಾಗಬೇಕು. ಅದಕ್ಕೆ ಹಜ್ ಯಾತ್ರಿಗಳು ಪ್ರಾರ್ಥಿಸಲಿ” ಎಂದು ಸಿದ್ದರಾಮಯ್ಯ ತಿಳಿಸಿದರು.

Advertisements

“ಪ್ರಸ್ತುತ ಆರ್ಥಿಕ ವರ್ಷದಲ್ಲಿ ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆ ಬರಲಿ, ನಾಡು ಸಮೃದ್ಧವಾಗಲಿ ಎಂದು ಪ್ರಾರ್ಥಿಸುವಂತೆ ಎಲ್ಲಾ ಯಾತ್ರಾರ್ಥಿಗಳಲ್ಲಿ ಮನವಿ ಮಾಡುತ್ತೇನೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ

ಮಂಗಳೂರು ಮತ್ತು ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ ಒದಗಿಸಲಾಗಿದೆ. ಕಲಬುರಗಿಯಲ್ಲಿ ಸ್ಥಳ ಸಿಗದೇ ವಿಳಂಬವಾಗಿದೆ. ಮಂಗಳೂರಿನಲ್ಲಿ ಸ್ಥಳ ಗುರುತಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಮುಗಿದ ಮೇಲೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪ್ರತಿ ದಿನ ಹಜ್‌ಗೆ ತೆರಳುವವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸಚಿವ ಜಮೀರ್ ಅಹಮ್ಮದ್ ಅವರನ್ನು ಮುಖ್ಯಮಂತ್ರಿಗಳು ಇದೇ ವೇಳೆ ಶ್ಲಾಘಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X