ರಾಮನಗರ | ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ ನರ್ಸ್‌ ಸಾವು ; ಜಂಗಲ್ ಟ್ರೈಲ್ ರೆಸಾರ್ಟ್‌ಗೆ ಬೀಗ

Date:

Advertisements

ಹಾರೋಹಳ್ಳಿ ತಾಲೂಕಿನ ಗೊಟ್ಟಿಗೆಹಳ್ಳಿಯಲ್ಲಿ ಜಂಗಲ್‌ ಟ್ರೈಲ್ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ 35 ವರ್ಷದ ನರ್ಸ್‌ವೊಬ್ಬರು ಮೇ 18ರಂದು ಸಾವನ್ನಪ್ಪಿದ್ದರು. ಪ್ರವಾಸೋದ್ಯಮ ಇಲಾಖೆಯ ಅನುಮತಿ ಪಡೆಯದೇ ಅಕ್ರಮವಾಗಿ ರೆಸಾರ್ಟ್‌ ನಡೆಸುತ್ತಿದ್ದ ಹಿನ್ನೆಲೆ, ಅಧಿಕಾರಿಗಳು ರೆಸಾರ್ಟ್‌ ಮಾಲೀಕರಿಗೆ ನೋಟಿಸ್ ನೀಡಿ ರೆಸಾರ್ಟ್‌ಗೆ ಬೀಗ ಹಾಕಿ ಬಂದ್ ಮಾಡಿದ್ದಾರೆ.

ರಂಜಿನಿ ಸಾವನ್ನಪ್ಪಿದ ಮಹಿಳೆ. ನಗರದ ಸೂರ್ಯಸಿಟಿ 3 ನೇ ಹಂತದ ನಿವಾಸಿ. ಅವರು ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ವಾರಾಂತ್ಯದಲ್ಲಿ ರಾಮನಗರ ಜಿಲ್ಲೆಯ ಹಾರೋಹಳ್ಳಿಯಲ್ಲಿರುವ ರೆಸಾರ್ಟ್‌ಗೆ ವಿಹಾರಕ್ಕೆಂದು ಸಹೋದ್ಯೋಗಿಗಳೊಂದಿಗೆ ತೆರಳಿದ್ದರು. ಈ ವೇಳೆ, ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿದೆ. ರಂಜಿನಿ ಇತರ ಮೂವರೊಂದಿಗೆ ನೆಲಕ್ಕೆ ಬಿದಿದ್ದಾರೆ.

ಗಾಯಾಳುಗಳನ್ನು ಖಾಸಗಿ ವಾಹನದಲ್ಲಿ ದಯಾನಂದ ಸಾಗರ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಹೆಚ್ಚಿನ ರಕ್ತಸ್ರಾವದಿಂದ ರಂಜಿನಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದರು. ಇನ್ನುಳಿದವರು ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Advertisements

ಈ ಸಂಬಂಧ ರಂಜಿನಿ ಅವರ ಸಹೋದ್ಯೋಗಿ ನಿರ್ಮಲ್ ವೆಂಕಟೇಶ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಮ್ಮ ದೂರಿನಲ್ಲಿ, ಚಟುವಟಿಕೆಯಲ್ಲಿ ಸುರಕ್ಷತಾ ಕ್ರಮಗಳ ಕೊರತೆಯಿದೆ ಎಂದು ಆರೋಪಿಸಿದ್ದಾರೆ.

“ಜಿಪ್‌ಲೈನ್ ಆಡುವಾಗ ಆಟಗಾರರಿಗೆ ರೆಸಾರ್ಟ್‌ನವರು ಹೆಲ್ಮೆಟ್ ಸಹ ನೀಡಲಿಲ್ಲ. ಪ್ರಥಮ ಚಿಕಿತ್ಸೆ ಕಿಟ್ ಇರಲಿಲ್ಲ. ಅಲ್ಲದೇ, ಆವರಣದಲ್ಲಿ ಆಂಬ್ಯುಲೆನ್ಸ್ ಸಹ ಇರಲಿಲ್ಲ. ಗಾಯಾಳುಗಳನ್ನು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಬೇಕಾಯಿತು” ಎಂದು ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ, ಹಾರೋಹಳ್ಳಿ ಪೊಲೀಸರು ರೆಸಾರ್ಟ್ ಮ್ಯಾನೇಜರ್, ಪುಟ್ಟಮಾದು ಅವರನ್ನು ಬಂಧಿಸಿ, ಆಡಳಿತ ಮಂಡಳಿಯ ವಿರುದ್ಧ ಸೆಕ್ಷನ್ 304 (ಕೊಲೆಗೆ ಸಮನಾಗಿರುವುದಿಲ್ಲ) ಮತ್ತು 337 (ಇತರರ ಜೀವ ಮತ್ತು ಸುರಕ್ಷತೆಗೆ ಅಪಾಯ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಇನ್ಸ್​ಪೆಕ್ಟರ್​, ಎಸಿಪಿಗೆ ಪೊಲೀಸ್​ ಪೇದೆಯಿಂದ ಕೊಲೆ ಬೆದರಿಕೆ; ಪ್ರಕರಣದ ತನಿಖೆ ಸಿಸಿಬಿಗೆ

ಜಿಲ್ಲಾಧಿಕಾರಿ ಸೂಚನೆಯಂತೆ ಜಂಗಲ್ ಟ್ರೈಲ್ ರೆಸಾರ್ಟ್‌ಗೆ ಮಂಗಳವಾರ ಭೇಟಿ ನೀಡಿದ್ದ ರಾಮನಗರ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು, ರೆಸಾರ್ಟ್‌ ಮಾಲೀಕರಿಗೆ ನೋಟಿಸ್ ನೀಡಿ, ರೆಸಾರ್ಟ್‌ಗೆ ಬಿಗಮುದ್ರೆ ಹಾಕಿ ಬಂದ್ ಮಾಡಿದ್ದಾರೆ.

ರೆಸಾರ್ಟ್‌ ಮಾಲೀಕರು ಅನುಮತಿ ಪಡೆಯದೆ ಅಕ್ರಮವಾಗಿ ರೆಸಾರ್ಟ್‌ ನಡೆಸುತ್ತಿದ್ದಾರೆ ಎಂದು ರಾಮನಗರ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಕಯ ನಿರ್ದೇಶಕರು ತಿಳಿಸಿದ್ದಾರೆ.

ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವವರೆಗೆ ರೆಸಾರ್ಟ್‌ನಲ್ಲಿ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X