ಪ್ರಜ್ವಲ್ ಬಗ್ಗೆ ಶಿವಮೊಗ್ಗ, ರಾಯಚೂರಿನಲ್ಲಿ ಭಾಷಣ: ರಾಹುಲ್ ವಿರುದ್ಧ ಜೆಡಿಎಸ್ ದೂರು

Date:

Advertisements

ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ಮೇ.2 ರಂದು ಚುನಾವಣಾ ರ್ಯಾಲಿಯಲ್ಲಿ ಭಾಷಣ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್‌ ದೂರು ದಾಖಲಿಸಿದೆ.

ಬೆಂಗಳೂರು ಘಟಕದ ಜೆಡಿಎಸ್‌ ಅಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್‌ ಸದಸ್ಯರಾದ ಹೆಚ್‌ ಎಂ ರಮೇಶ್ ಗೌಡ ಅವರು ರಾಜ್ಯ ಡಿಜಿಪಿ, ಶಿವಮೊಗ್ಗ ಹಾಗೂ ರಾಯಚೂರು ಎಸ್‌ಪಿ ಅವರಿಗೆ ದೂರು ದಾಖಲಿಸಿದ್ದಾರೆ.

ರಾಹುಲ್ ಗಾಂಧಿ ಹೇಳಿದಂತೆ ಪ್ರಜ್ವಲ್‌ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರವೆಸಗಿದ್ದರೆ, ಅತ್ಯಾಚಾರಕ್ಕೊಳಗಾದವರ ಬಗ್ಗೆ ರಾಹುಲ್‌ ಗಾಂಧಿಗೆ ಮಾಹಿತಿ ಗೊತ್ತಿರಬೇಕು. ಅವರು ಉದ್ದೇಶಪೂರ್ವಕವಾಗಿ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ. ಇದು ಐಪಿಸಿ ಸೆಕ್ಷನ್ 202ರ ಪ್ರಕಾರ ಅಪರಾಧವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ಒಂದು ವರ್ಷ, ಸಮರ್ಥನೀಯವಲ್ಲದ ನಡೆ

ಕರ್ನಾಟಕ ಸರ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಏ.28ರಂದು ಎಸ್‌ಐಟಿ ರಚಿಸಿದ್ದು, ಇಲ್ಲಿಯವರೆಗೂ ರಾಹುಲ್‌ ಗಾಂಧಿ ನೀಡಿರುವ ಹೇಳಿಕೆಯ ಬಗ್ಗೆ ಮಾಹಿತಿ ಪಡೆಯಲು ಅವರಿಗೆ ಯಾವುದೇ ನೋಟಿಸ್ ನೀಡಿಲ್ಲ. 400 ಮಹಿಳೆಯರು ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಹೇಳಿಕೆ ನೀಡಿರುವ ರಾಹುಲ್‌ ಗಾಂಧಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.

‘ಪ್ರಜ್ವಲ್‌ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರವೆಸಗಿ ವಿಡಿಯೋ ಮಾಡಿದ್ದಾನೆ. ಇದು ಸೆಕ್ಸ್ ಹಗರಣವಲ್ಲ ಸಮೂಹ ಅತ್ಯಾಚಾರ. ಪ್ರಧಾನ ಮಂತ್ರಿ ಆತನ ಪರವಾಗಿ ಮತಯಾಚಿಸಿದ್ದಾರೆ. ನೀವು ಸಮೂಹ ಅತ್ಯಾಚಾರಿಗೆ ಮತ ನೀಡಿದರೆ ಆತನಿಗೆ ಸಹಾಯ ಮಾಡಿದಂತಾಗುತ್ತದೆ’ ಎಂದು ರಾಹುಲ್ ಗಾಂಧಿ ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ಮೇ.2 ರಂದು ಚುನಾವಣಾ ರ್ಯಾಲಿಯಲ್ಲಿ ಭಾಷಣ ಮಾಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಆಗಸ್ಟ್ 23ರಿಂದ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು...

Download Eedina App Android / iOS

X