ಮಂಗಳವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ನ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ವೀಕ್ಷಿಸಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಾರುಖ್ ಖಾನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮಾಲೀಕರೂ ಆಗಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ನಿನ್ನೆ ಸೋಲಿಸುವ ಮೂಲಕ ಕೋಲ್ಕತ್ತಾ ತಂಡ 4ನೇ ಬಾರಿಗೆ ಐಪಿಎಲ್ ಟೂರ್ನಿಯ ಫೈನಲ್ ಪ್ರವೇಶಿಸಿತ್ತು. ನಿನ್ನೆಯ ಪಂದ್ಯ ಮುಗಿದ ಬಳಿಕ ಕ್ರೀಡಾಂಗಣದ ಸುತ್ತ ನೆರೆದಿದ್ದ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದರು.
Shah Rukh Khan’s health deteriorated, and he was admitted to KD Hospital in Ahmedabad pic.twitter.com/Lh2iHdDNiM
— IANS (@ians_india) May 22, 2024
“ಹೀಟ್ ಸ್ಟ್ರೋಕ್‌ನಿಂದಾಗಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಟ ಶಾರೂಖ್ ಖಾನ್ ಅಹ್ಮದಾಬಾದ್‌ನಲ್ಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ” ಎಂದು ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ ಮಾಡಿದೆ.
#WATCH | Gujarat: Actor Juhi Chawla and her husband Jay Mehta leave from KD Hospital, in Ahmedabad.
Actor Shah Rukh Khan has been admitted to the hospital. Details awaited. pic.twitter.com/osyGyAmwp2
— ANI (@ANI) May 22, 2024
“ಅಹ್ಮದಾಬಾದ್‌ನಲ್ಲಿ 45 ಡಿಗ್ರಿ ಸೆಲ್ಸಿಯಸ್‌ನ ಅಧಿಕ ತಾಪಮಾನದ ನಡುವೆ ನಟ ನಿರ್ಜಲೀಕರಣದಿಂದ ಬಳಲುತ್ತಿದ್ದರು. ಅವರ ಆರೋಗ್ಯ ಸ್ಥಿರವಾಗಿದ್ದರೂ ಕೂಡ ವೈದ್ಯರ ತಂಡ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ. ಆಸ್ಪತ್ರೆಯ ಸುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
When King Khan rejoices, the world celebrates too! 💜 pic.twitter.com/cxoDwER9no
— KolkataKnightRiders (@KKRiders) May 22, 2024
ನಟಿ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸಹ ಮಾಲೀಕರಾಗಿರುವ ಜೂಹಿ ಚಾವ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ನಟ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ವಿವರಗಳನ್ನು ಆಸ್ಪತ್ರೆಯ ವೈದ್ಯರ ತಂಡ ಇನ್ನೂ ಅಧಿಕೃತ ಹೇಳಿಕೆಯನ್ನು ನೀಡಿಲ್ಲ ಎಂದು ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ ಮಾಡಿದೆ.
