‘ನಾನು ಜೈವಿಕವಾಗಿ ಜನಿಸಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು’ ಎಂದ ಪ್ರಧಾನಿ ಮೋದಿ!

Date:

Advertisements

ದ್ವೇಷ ಭಾಷಣಗಳ ಮೂಲಕವೇ ಸುದ್ದಿಯಾಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಈಗ “ನಾನು ಜೈವಿಕವಾಗಿ ಜನಿಸಿಲ್ಲ, ದೇವರೇ ನನ್ನನ್ನು ಕಳುಹಿಸಿದ್ದು” ಎಂದು ಹೇಳುವ ಮೂಲಕ ಟ್ರೋಲ್ ಆಗಿದ್ದಾರೆ.

ನ್ಯೂಸ್‌18ನ ರುಬಿಕಾ ಲಿಯಾಖತ್ ಜೊತೆ ಸಂದರ್ಶನದಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ ಈ ಹೇಳಿಕೆಯನ್ನು ನೀಡಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಕೂಡಾ ಆಗುತ್ತಿದ್ದು, ನೆಟ್ಟಿಗರು ಇದನ್ನು ಆತ್ಮರತಿ ಎಂದು ಗೇಲಿ ಮಾಡಿಕೊಳ್ಳುತ್ತಿದ್ದಾರೆ.

ರುಬಿಕಾ ಲಿಯಾಖತ್ “ನಿಮಗೆ ಸುಸ್ತು ಅನ್ನೋದೆ ಆಗುದಿಲ್ವೆ” ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ಮೋದಿ, ತನ್ನನ್ನು ದೇವರೇ ಕಳುಹಿಸಿದ್ದು ಎಂದಿದ್ದಾರೆ.

Advertisements

“ನನ್ನ ತಾಯಿ ಜೀವಂತವಾಗಿರುವವರೆಗೂ ನಾನು ಜೈವಿಕವಾಗಿ ಜನಿಸಿದ್ದೇನೆ ಎಂದು ನಾವು ನಂಬಿದ್ದೆ. ನನ್ನ ತಾಯಿ ಮರಣ ಹೊಂದಿದ ಬಳಿಕ ನಾನು ನನ್ನ ಎಲ್ಲಾ ಅನುಭವಗಳನ್ನು ಜೊತೆಗೂಡಿಸಿ ನೋಡುತ್ತೇನೆ. ನನ್ನನ್ನು ಪರಮಾತ್ಮನೇ ಕಳುಹಿಸಿದ್ದು ಎಂದು ನನಗೆ ಮನವರಿಕೆಯಾಗಿದೆ” ಎಂದು ಮೋದಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಕಾಂಗ್ರೆಸ್, ಸಮಾಜವಾದಿ ಪಕ್ಷವು ಪಾಕಿಸ್ತಾನದ ಹಿತೈಷಿಗಳು- ಮತ್ತೆ ಪ್ರಧಾನಿ ಮೋದಿ ದ್ವೇಷ ಭಾಷಣ

“ಈ ಶಕ್ತಿ ನನಗೆ ಜೈವಿಕ ದೇಹದಿಂದ ಸಿಗುವುದಲ್ಲ. ಈ ಶಕ್ತಿ ನನಗೆ ದೇವರಿಂದ ನನಗೆ ದಯಪಾಲಿಸಲಾಗಿದೆ. ದೇವರು ತನ್ನ ಕೆಲಸವನ್ನು ನನ್ನ ಮೂಲಕ ಮಾಡಿಸಲು ನನಗೆ ಶಕ್ತಿ, ಸಾಮರ್ಥ್ಯ, ಉದ್ದೇಶವನ್ನು, ಪ್ರೇರಣೆಯನ್ನು ನನಗೆ ನೀಡಿದ್ದಾನೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಹಿಟ್ಲರ್‌ನ ಸರ್ವಾಧಿಕಾರ ಮತ್ತು ಮೂರ್ಖತನದ ಸಿದ್ಧಾಂತ: ಇಲ್ಲಿದೆ ಸಮಗ್ರ ವಿವರ | Theary Of Stupidity | Hitlar

“ನಾನು ಸಾಧನವಲ್ಲದೆ ಬೇರೇನೂ ಅಲ್ಲ. ನನ್ನ ಮೂಲಕ ದೇವರು ತನ್ನ ಕಾರ್ಯ ಮಾಡಲು ನಿರ್ಧರಿಸಿದ್ದಾರೆ. ಅದಕ್ಕಾಗಿ ನಾನು ಯಾವ ಕಾರ್ಯವನ್ನು ಮಾಡುವಾಗಲೂ ದೇವರೇ ನನ್ನ ಬಳಿ ಮಾಡಿಸುತ್ತಿದ್ದಾನೆ ಚಿಂತೆ ಬೇಡ ಎಂದು ಆಲೋಚಿಸುತ್ತೇನೆ” ಎಂದೂ ಹೇಳಿಕೊಂಡಿದ್ದಾರೆ.

“ನಾನು ದೇವರಿಗೆ ಸಮರ್ಪಿತ. ಆದರೆ ಆ ದೇವರನ್ನು ನಾನು ನೋಡಲು ಸಾಧ್ಯವಿಲ್ಲ. ನಾನೂ ಕೂಡಾ ಓರ್ವ ಪೂಜಾರಿ, ನಾನು ಕೂಡಾ ಓರ್ವ ಭಕ್ತ, ನಾನು 40 ಕೋಟಿ ದೇಶವಾಸಿಗಳನ್ನೇ ಈಶ್ವರನ ರೂಪ ಎಂದು ಭಾವಿಸುತ್ತೇನೆ. ಅವರೇ ನನ್ನ ದೇವರು” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಅಹಂಕಾರವೊ , ದುರಹಂಕಾರವೊ , ಅಧಿಕಾರದ ಮದವೊ , ಸೋಲಿನ ಭಯವೊ , ನಿರಾಶೆಯೊ, ಜಿಗುಪ್ಸೆಯೊ , ಭಯವೊ , ಭೀತಿಯೊ…?

    ಎಲ್ಲವೂ…!!!

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X