ಡಿಸಿ, ಸಿಇಒ ಜೊತೆ ಸಿಎಂ ಸಂವಾದ | ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಲು ಸಿದ್ದರಾಮಯ್ಯ ಸೂಚನೆ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಗುರುವಾರ (ಮೇ 23) ವಿಡಿಯೋ ಸಂವಾದ ನಡೆಸಿದರು.

ವಿಡಿಯೋ ಸಂವಾದದಲ್ಲಿ ಮಾತು ಆರಂಭಿಸಿದ ಸಿದ್ದರಾಮಯ್ಯ ಅವರು, “ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು” ಎಂದು ಸೂಚಿಸಿದರು.

“ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ 6 ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು” ಎಂದರು.

Advertisements

“ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು” ಎಂದು ಹೇಳಿದರು.

ಮೈಸೂರಲ್ಲಿ ಕಾಲರಾ; ಅಧಿಕಾರಿಗಳ ನಿರ್ಲಕ್ಷ್ಯ

“ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ. ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು. ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆ. ಕಾಲರ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್ ಕೆ ಪಾಟೀಲ್‌, ಕೆ.ಹೆಚ್.‌ ಮುನಿಯಪ್ಪ, ಚೆಲುವರಾಯಸ್ವಾಮಿ, ಬೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್.‌ ಎಸ್.‌ ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X