ಎಸ್‌ಸಿಒ ಶೃಂಗಸಭೆ | ಭಾಗವಹಿಸುವಿಕೆ ಖಚಿತಪಡಿಸಿದ ಚೀನಾ ರಕ್ಷಣಾ ಸಚಿವ ಲಿ ಶಾಂಗ್‌ಫು

Date:

Advertisements
  • ಎಸ್‌ಸಿಒ ಶೃಂಗಸಭೆ ಚರ್ಚೆಗಳಲ್ಲಿ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಭಾಗಿ
  • ಏಪ್ರಿಲ್‌ 27 ಮತ್ತು 28ರಂದು ಎರಡು ದಿನ ದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆ

ಶಾಂಘೈ ಸಹಕಾರ ಸಂಘಟನೆ ಅಥವಾ ಎಸ್‌ಸಿಒ ಶೃಂಗಸಭೆ ಚರ್ಚೆಗಳಲ್ಲಿ ಭಾಗವಹಿಸುವುದಾಗಿ ಚೀನಾದ ರಕ್ಷಣಾ ಸಚಿವ ಲಿ ಶಾಂಗ್‌ಫು ಮತ್ತು ರಷ್ಯಾದ ರಕ್ಷಣಾ ಸಚಿವ ಸೆರ್ಗೆಯ್‌ ಶೋಯಿಗು ಅವರು ಖಚಿತಪಡಿಸಿದ್ದಾರೆ.

ಮುಂದಿನ ವಾರ ದೆಹಲಿಯಲ್ಲಿ ಈ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯು ನಡೆಯುತ್ತದೆ. ಇಲ್ಲಿ ಎಸ್‌ಸಿಒನ ಎಲ್ಲ ಸದಸ್ಯ ರಾಷ್ಟ್ರಗಳೂ ಭಾಗವಹಿಸಲಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಏಪ್ರಿಲ್ 27 ಮತ್ತು 28ರಂದು ಸಂಘಟನೆಯ ಎಲ್ಲ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಈ ಎಸ್‌ಸಿಒ ಶೃಂಗಸಭೆ ಚರ್ಚೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

Advertisements

ರಕ್ಷಣಾ ಸಚಿವರ ಈ ಶೃಂಗಸಭೆಯಲ್ಲಿ ಚೀನಾ ಹಾಗೂ ರಷ್ಯಾ ದೇಶಗಳ ರಕ್ಷಣಾ ಸಚಿವರು ಭಾಗವಹಿಸಲಿದ್ದಾರೆ.

2020ರ ಗಾಲ್ವಾನ್ ಕಣಿವೆ ಘರ್ಷಣೆಯ ನಂತರ ಚೀನಾದ ರಕ್ಷಣಾ ಸಚಿವ ಲಿ ಶಾಂಗ್‌ಫು ದೆಹಲಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಈ ಹಿನ್ನೆಲೆ ಲಿ ಅವರ ಭಾರತ ಭೇಟಿ ಮಹತ್ವ ಪಡೆದಿದೆ.

ಎಸ್‌ಸಿಒ ಶೃಂಗಸಭೆ ಎರಡು ದಿನ ನಡೆಯಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಭಯೋತ್ಪಾದನೆ, ಪ್ರಾದೇಶಿಕ ಭದ್ರತೆ ಮತ್ತು ಅಫ್ಘಾನಿಸ್ತಾನದ ಭದ್ರತಾ ಪರಿಸ್ಥಿತಿಗೆ ಸಂಬಂಧಿಸಿದ ವಿಷಯಗಳು ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರನ್ನು ಸಹ ಶೃಂಗಸಭೆಗೆ ಆಹ್ವಾನಿಸಲಾಗಿದೆ. ಆದರೆ ಅವರು ಸಭೆಯಲ್ಲಿ ಪಾಲ್ಗೊಳ್ಳುವುದನ್ನು ಇನ್ನೂ ದೃಢೀಕರಿಸಿಲ್ಲ.

ಎಸ್‌ಸಿಒ ಶೃಂಗಸಭೆ ನಂತರ ಮೇ 5ರಂದು ಗೋವಾದಲ್ಲಿ ವಿದೇಶಾಂಗ ಸಚಿವರ ಸಭೆ ನಡೆಯಲಿದೆ. ಇದರಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಭಾಗವಹಿಸುವುದಾಗಿ ಖಚಿತಪಡಿಸಿದ್ದಾರೆ.

ಪೂರ್ವ ಲಡಾಖ್‌ನಲ್ಲಿರುವ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಕೆಲವು ಘರ್ಷಣೆಯ ಸ್ಥಳಗಳಲ್ಲಿ ನಿರ್ಲಿಪ್ತತೆಯ ಹೊರತಾಗಿಯೂ ಭಾರತ ಹಾಗೂ ಚೀನಾ ದೇಶಗಳ ನಡುವಿನ ಗಡಿ ಉದ್ವಿಗ್ನತೆಯು ಇನ್ನೂ ಮುಂದುವರಿದಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಅರುಣಾಚಲ ಪ್ರದೇಶದ ತವಾಂಗ್ ವಲಯದ ಯಾಂಗ್‌ತ್ಸೆಯಲ್ಲಿ ಚೀನಾ ಮತ್ತು ಭಾರತೀಯ ಸೈನಿಕರ ನಡುವೆ ಘರ್ಷಣೆ ನಡೆಯಿತು.

ಕಳೆದ ವರ್ಷ ರಷ್ಯಾ-ಉಕ್ರೇನ್ ಸಂಘರ್ಷ ಪ್ರಾರಂಭವಾದ ನಂತರ ರಷ್ಯಾದ ರಕ್ಷಣಾ ಸಚಿವ ಶೋಯಿಗು ಅವರ ಮೊದಲ ಭಾರತ ಭೇಟಿ ಇದಾಗಿದೆ.

ಈ ಸುದ್ದಿ ಓದಿದ್ದೀರಾ? ಎಐಸಿಸಿ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ್‌ ಬಂಧಿಸಲು ರಾಜ್ಯಕ್ಕೆ ಬಂದ ಅಸ್ಸಾಂ ಪೊಲೀಸರು

24ನೇ ಭಾರತ-ರಷ್ಯಾ ಮಾತುಕತೆಗಾಗಿ ರಷ್ಯಾದ ಉಪ ಪ್ರಧಾನಿ ಡೆನಿಸ್ ಮಂಟುರೊವ್ ಅವರ ಭೇಟಿಯಂತಹ ಎರಡು ದೇಶಗಳ ನಡುವಿನ ಉನ್ನತ ಮಟ್ಟದ ಸರಣಿ ಕಾರ್ಯಕ್ರಮಗಳ ನಡುವೆ ರಷ್ಯಾ ರಕ್ಷಣಾ ಸಚಿವರು ಭೇಟಿ ನೀಡುತ್ತಿದ್ದಾರೆ.

ಎಸ್‌ಸಿಒ ಶೃಂಗಸಭೆ ನಡೆಸಲು ಎಲ್ಲ ಸದಸ್ಯ ರಾಷ್ಟ್ರಗಳನ್ನೂ ಆಹ್ವಾನಿಸಲಾಗಿದೆ. ಭಾರತ, ರಷ್ಯಾ, ಚೀನಾ, ಕಿರ್ಗಿಜ್ ಗಣರಾಜ್ಯ, ಕಜಕಿಸ್ತಾನ್, ತಜಕಿಸ್ತಾನ್, ಉಜ್ಬೇಕಿಸ್ತಾನ್ ಮತ್ತು ಪಾಕಿಸ್ತಾನ ಎಸ್‌ಸಿಒ ಸದಸ್ಯ ರಾಷ್ಟ್ರಗಳಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X