ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಯರಗನಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಇಡೀ ಕುಟುಂಬ ಮೃತಪಟ್ಟ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ, ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು. ಸ್ಥಳದಲ್ಲೇ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಮೃತರಿಗೆ ತಲಾ 3 ಲಕ್ಷ ರೂ. ನಂತೆ ಕುಟುಂಬಕ್ಕೆ 12 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಯರಗನಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಇಡೀ ಕುಟುಂಬ ಮೃತಪಟ್ಟ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು. ಮೃತರಿಗೆ ತಲಾ 3 ಲಕ್ಷ ರೂನಂತೆ ಕುಟುಂಬಕ್ಕೆ 12 ಲಕ್ಷ ರೂ ಪರಿಹಾರ ಘೋಷಿಸಿದರು.@siddaramaiah pic.twitter.com/awxhetBYTL
— eedina.com ಈ ದಿನ.ಕಾಮ್ (@eedinanews) May 23, 2024
ಈ ಸಂದರ್ಭದಲ್ಲಿ ಸಚಿವರಾದ ಕೆ ವೆಂಕಟೇಶ್,ರಹೀಂ ಖಾನ್, ಶಾಸಕ ತನ್ವೀರ್ ಸೇಠ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಲುಷಿತ ನೀರು ಕುಡಿದು ಮೃತಪಟ್ಟ ವ್ಯಕ್ತಿಯ ಮನೆಗೂ ಸಿಎಂ ಭೇಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ತಾಲೂಕಿನ ಜಯಪುರದ ಕೆ.ಸಾಲುಂಡಿ ಗ್ರಾಮಕ್ಕೆ ಭೇಟಿನೀಟಿ ಕಲುಷಿತ ನೀರು ಕುಡಿದು ಮೃತಪಟ್ಟ ಕಾಂತರಾಜು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ವೈಯುಕ್ತಿಕವಾಗಿ ನಗದು ಪರಿಹಾರ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಮೃತ ಕಾಂತರಾಜು ಅವರ ಪುತ್ರ ರವಿಗೆ ಕೆಲಸ ಕೊಡಿಸುವ ಭರವಸೆ ನೀಡಿದರು.
