ದಾವಣಗೆರೆ | ಸ್ಮಾರ್ಟ್‌ ಸಿಟಿ ರಿಂಗ್‌ ರೋಡ್‌; ಸ್ಥಳಾಂತರಗೊಂಡವರ ಬದುಕು ದುಸ್ತರ

Date:

Advertisements

ಸ್ಮಾರ್ಟ್‌ ಸಿಟಿ ರಿಂಗ್‌ ರೋಡ್‌ಗಾಗಿ ನಮ್ಮ ಮನೆಗಳನ್ನು ವಶಪಡಿಸಿಕೊಂಡು, ನಮ್ಮನ್ನು ಒಕ್ಕಲೆಬ್ಬಿಸಿದರು. ಒಂದು ತಿಂಗಳಲ್ಲಿ ಸಂಪೂರ್ಣವಾಗಿ ಪುನರ್ವಸತಿ ಕಲ್ಪಿಸುವುದಾಗಿ ಹೇಳಿದ್ದರು. ಆದರೆ, ಈಗ ಆರು ತಿಂಗಳು ಕಳೆದಿವೆ. ನಮಗೆ ಯಾವುದೇ ಪುನರ್ವಸತಿ, ಮೂಲ ಸೌಕರ್ಯ ತೊರೆದಿಲ್ಲ. ಬದುಕು ದುಸ್ತರವಾಗಿದೆ. ಬಿಸಿಲು, ಗಾಳಿ, ಮಳೆಯ ನಡುವೆ ವಿಷಜಂತುಗಳ ಆತಂಕದಲ್ಲಿ ದಿನನಿತ್ಯ ಬದುಕುವುಂತಾಗಿದೆ – ಇದು ದಾವಣಗೆರೆಯಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ರಸ್ತೆಗಾಗಿ ತಮ್ಮ ಮನೆಗಳನ್ನು ಕಳೆದುಕೊಂಡ ರಾಮಕೃಷ್ಣ ಹೆಗಡೆ ನಗರದ ನಿವಾಸಿಗಳ ಗೋಳು.

ದಾವಣಗೆರೆಯಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ರಿಂಗ್‌ ರೋಡ್ ನಿರ್ಮಾಣ ಮಾಡಲಾಗುತ್ತಿದೆ. ಅದಕ್ಕಾಗಿ, ರಾಮಕೃಷ್ಣ ಹೆಗಡೆ ನಗರದಲ್ಲಿ ಹಲವಾರು ಮನೆಗಳ ಭೂಮಿಯನ್ನು ಜಿಲ್ಲಾಡಳಿತ ಮತ್ತು ಸ್ಮಾರ್ಟ್‌ ಸಿಟಿ ಪ್ರಾಧಿಕಾರ ಸ್ವಾಧೀನಪಡಿಸಿಕೊಂಡಿವೆ. ಅಲ್ಲಿದ್ದ ನಿವಾಸಿಗಳನ್ನು ದೊಡ್ಡಬಾತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾಲಿ ಜಾಗದಲ್ಲಿ ತಾತ್ಕಾಲಿಕ ಶೆಡ್ಡುಗಳಿವೆ ಸ್ಥಳಾಂತರಿಸಿದೆ. ಆದರೆ, ಆ ಶೆಡ್ಡುಗಳಲ್ಲಿ ವಾಸಿಸುತ್ತಿರುವ ಜನರ ಬದುಕು ಈಗ ಮತ್ತಷ್ಟು ದುಸ್ತರವಾಗಿದೆ.

ಕಳೆದ ಆರು ತಿಂಗಳಿಂದ ಅಲ್ಲಿನ ನಿವಾಸಿಗಳು ಈ ಶೆಡ್ಡುಗಳಲ್ಲಿ ವಾಸಿಸುತ್ತಿದ್ದಾರೆ. ಚಳಿ, ಬಿಸಿಲಿನಲ್ಲಿ ಬಳಲಿದ್ದಾರೆ. ವಿಷಜಂತುಗಳ ಹಾವಳಿಯಿಂದ ಹೈರಾಣಾಗಿದ್ದಾರೆ. ಇದೀಗ, ಗಾಳಿ-ಮಳೆಯೂ ಆರಂಭವಾಗಿದ್ದು, ಅಪಾಯದ ಆತಂಕ ಎದುರಾಗಿದೆ. ಇತ್ತೀಚೆಗೆ ಸುರಿದ ಮಳೆ ಮತ್ತು ಬಿರುಗಾಳಿಗೆ ನೂರಕ್ಕೂ ಹೆಚ್ಚು ಶೆಡ್ಡುಗಳು ನಾಶವಾಗಿವೆ. ಬಟ್ಟೆ, ಆಹಾರ ಸಾಮಗ್ರಿಗಳು ಹಾಳಾಗಿವೆ. ಹಲವು ಮನೆಗಳ ಮೇಲೆ ವಿದ್ಯುತ್ ಕಂಬಗಳು ಉರುಳಿವೆ. ಅದೃಷ್ಟವಶಾತ್ ಯಾವುದೇ ಪಾಣಾಪಾಯವಾಗಿಲ್ಲ. ಜನರು ಬೀದಿಯಲ್ಲಿ ಅಡುಗೆ ಮಾಡಿಕೊಂಡು ತಿನ್ನುವ ಪರಿಸ್ಥಿತಿ ಎದುರಾಗಿದೆ. ಅಲ್ಲಿನ ನಿವಾಸಿಗಳು ದಿನನಿತ್ಯ ಅಧಿಕಾರಿಗಳಿಗೆ ಶಾಪ ಹಾಕುತ್ತಾ, ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

Advertisements

WhatsApp Image 2024 05 22 at 1.57.30 PM

ತಮ್ಮ ಸಮಸ್ಯೆಯ ಬಗ್ಗೆ ಈದಿನ.ಕಾಮ್‌ ಜೊತೆ ಮಾತನಾಡಿದ ಮುಬೀನಾ ಬೀ, “ಊರ ಒಳಗೆ ಇದ್ದ ನಮ್ಮನ್ನು ಯಾರು ಇಲ್ಲದ ಜಾಗದಲ್ಲಿ ತಾತ್ಕಾಲಿಕ ಶೆಡ್ ನಿರ್ಮಾಣ ಮಾಡಿ ಇಲ್ಲಿಗೆ ಕಳುಹಿಸಿದ್ದಾರೆ. ಇಲ್ಲಿಗೆ ಬಂದು ಆರು ತಿಂಗಳಾಯಿತು. ಚಳಿ, ಬಿಸಿಲಿಗೆ ನಲುಗಿ ಸಾಕಾಗಿದೆ. ಈಗ ಮಳೆ ನಮ್ಮ ಬದುಕು ಕಸಿದಿದೆ. ನಾವು ಕೂಲಿ ಮಾಡಿ ಜೀವನ ಮಾಡುತ್ತಿದ್ದು, ನಮಗೆ ಬಾಡಿಗೆ ಕಟ್ಟಲು ಆಗಲ್ಲ. ಮಳೆಯಿಂದಾಗಿ, ಹಾವು-ಚೇಳುಗಳು ಮನೆಗಳಿಗೆ ನುಗ್ಗುವ ಆತಂಕವಿದೆ. ಇಲ್ಲಿ ಹೇಗೆ ವಾಸಿಸುವುದು” ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

“ರಾತ್ರಿ ಮಳೆಗೆ ವಿದ್ಯುತ್ ಕಂಬ ಬಿದ್ದಿವೆ. ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ. ಕುಡಿಯಲು ಶುದ್ಧ ನೀರಿಲ್ಲ. ಬಯಲೇ ನಮಗೆ ಶೌಚಾಲಯವಾಗಿದೆ. ಏನನ್ನೇ ಕೊಳ್ಳಬೇಕು ಎಂದರೂ 8 ಕಿ.ಮೀ ದೂರ ಹೋಗಬೇಕು. ಮೂಲಭೂತ ಸೌಕರ್ಯ ಇಲ್ಲದ ಜಾಗಕ್ಕೆ ನಮ್ಮನ್ನು ತಂದು ಬಿಟ್ಟು ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಕೈ ತೊಳೆದು ಕೊಂಡಿದೆ. ಕೂಡಲೇ ಇಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಬೇಕು” ಎಂದು ಮತ್ತೊಬ್ಬ ನಿವಾಸಿ ರಹೀಂ ಅಬ್ದುಲ್ ಒತ್ತಾಯಿಸಿದ್ದಾರೆ.

“ಮೂಲಭೂತ ಸೌಕರ್ಯ ಇಲ್ಲದ ಜಾಗಕ್ಕೆ ಜನರನ್ನು ಸ್ಥಳಾಂತರಿಸಿದ್ದಾರೆ. ಒಂದು ತಿಂಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಭರವಸೆ ನೀಡಿದ್ದ ಜಿಲ್ಲಾಡಳಿತ, 6 ತಿಂಗಳಾದರೂ ಯಾವುದೇ ಸೌಕರ್ಯ ಒದಗಿಸಿಲ್ಲ. ಈಗ ಮತ್ತೆ ಜಾಗ ಖಾಲಿ ಮಾಡಿ, ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಿದ ನಂತರ ಬನ್ನಿ ಎನ್ನುತ್ತಿದ್ದಾರೆ. ಈ ಜನರು ಎಲ್ಲಿಗೆ ಹೋಗಬೇಕು.ಅವರನ್ನು ಮತ್ತೆ ಸ್ಥಳಾಂತರಗೊಳಿಸುವುದಾದರೆ, ಈ ನಿರಾಶ್ರಿತರಿಗೆ ಪ್ರತಿ ತಿಂಗಳೂ ಬಾಡಿಗೆ ವೆಚ್ಚ ಪಾವತಿಸಬೇಕು” ಎಂದು ಜನಶಕ್ತಿ ಸಂಘಟನೆಯ ಮುಖಂಡ ಸತೀಶ್ ಅರವಿಂದ್ ಆಗ್ರಹಿಸಿದರು.

“ಜನರ ಸಮಸ್ಯೆಯನ್ನು ಪರಿಹರಿಸಬೇಕು. ನಿವಾಸಿಗಳಿಗೆ ಮೂಲಸೌಕರ್ಯ ಒದಗಿಸಿ ಬದುಕು ಕಟ್ಟಿಕೊಳ್ಳಲು ಸಹಾಯಮಾಡಬೇಕು. ಶೀಘ್ರ ಮೂಲಸೌಕರ್ಯ ಕಲ್ಪಿಸದೆ ಹೋದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ, ಕಾನೂನು ಹೋರಾಟ ನಡೆಸುತ್ತೇವೆ” ಎಂದು ಎಎಪಿ ಮುಖಂಡ ಆದಿಲ್ ಖಾನ್ ಒತ್ತಾಯಿಸಿದರು.

ಇಲ್ಲಿನ ಜನರ ಸಮಸ್ಯೆಗಳ ಬಗ್ಗೆ ಪ್ರತಿಕ್ರಿಯಿಸಿದ ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, “ರಿಂಗ್ ರೋಡ್‌ಗಾಗಿ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗಿದ್ದು, ಮೊದಲ ಹಂತದಲ್ಲಿ 250ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಅವರಿಗೆ ಹಕ್ಕು ಪತ್ರ ನೀಡಲಾಗಿದೆ. 2ನೇ ಹಂತದಲ್ಲಿ 150 ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ. ದಿಡೀರ್ ಸುರಿದ ಮಳೆಗೆ ಅಸ್ತವ್ಯಸ್ತ ಉಂಟಾಗಿದ್ದು, ಮನೆಗಳ ನಿರ್ಮಾಣಕ್ಕೆ ವಸತಿ ಇಲಾಖೆಗೆ 23 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ನೀತಿ ಸಂಹಿತೆ ಇರುವ ಕಾರಣ, ಅನುಮೋದನೆ ವಿಳಂಬವಾಗಿದೆ. ಶ್ರೀಘ್ರವೇ ಸಮಸ್ಯೆಗಳನ್ನು ಪರಿಹರಿಸಿ, ಮನೆ ನಿರ್ಮಾಣ ಕಾಮಗಾರಿ ಪ್ರಾರಂಭಿಸುತ್ತೇವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X