ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ವಿರುದ್ಧ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯ ಶುಕ್ರವಾರ ಮೇಧಾ ಪಾಟ್ಕರ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಅವರು ಪಾಟ್ಕರ್ ಅವರನ್ನು ಕ್ರಿಮಿನಲ್ ಮಾನನಷ್ಟ ಅಪರಾಧಿ ಎಂದು ಘೋಷಿಸಿದರು.
Delhi’s Saket court convicts Narmada Bachao Andolan activist Medha Patkar in defamation case filed then KVIC Chairman V K Saxena (now Delhi LG).
— ANI (@ANI) May 24, 2024
ಪಾಟ್ಕರ್ ಮತ್ತು ನರ್ಮದಾ ಬಚಾವೋ ಆಂದೋಲನ (ಎನ್‌ಬಿಎ) ವಿರುದ್ಧ ಜಾಹೀರಾತುಗಳನ್ನು ಪ್ರಕಟಿಸಿದ ಕಾರಣ ಪಾಟ್ಕರ್ ಮತ್ತು ಸಕ್ಸೇನಾ 2000ರಿಂದ ಕಾನೂನು ಹೋರಾಟದಲ್ಲಿ ತೊಡಗಿದ್ದಾರೆ. ಸಕ್ಸೇನಾ ಆ ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.
ಇದನ್ನು ಓದಿದ್ದೀರಾ? ಗಾಯ ಗಾರುಡಿ | ದೊಡ್ಡಬಳ್ಳಾಪುರದ ಟೌನ್‍ಹಾಲ್‌ನಲ್ಲಿ ಮೇಧಾ ಪಾಟ್ಕರ್ ಎಬ್ಬಿಸಿದ ‘ಲಗಾನ್’ ಹಾಡಿನ ಹವಾ
ಟಿವಿ ಚಾನೆಲ್‌ನಲ್ಲಿ ತನ್ನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಮಾನಹಾನಿ ಮಾಡಿದ್ದಾರೆ ಎಂದು ಸಕ್ಸೇನಾ ಪಾಟ್ಕರ್ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದರು. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಕ್ಸೇನಾ ವಿರುದ್ಧದ ಪಾಟ್ಕರ್ ಅವರ ಹೇಳಿಕೆಗಳು “ಮಾನಹಾನಿಕರ ಮಾತ್ರವಲ್ಲದೆ ನಕಾರಾತ್ಮಕ ಗ್ರಹಿಕೆಗಳನ್ನು ಪ್ರಚೋದಿಸುತ್ತದೆ” ಎಂದು ಹೇಳಿದೆ.
“ಆರೋಪಿ ಮೇಧಾ ಪಾಟ್ಕರ್ ಅವರು ದೂರುದಾರರ ಪ್ರತಿಷ್ಠೆಗೆ ಹಾನಿಯುಂಟುಮಾಡುವ ಉದ್ದೇಶ ಮತ್ತು ಅರಿವಿನಿಂದ ಪ್ರಚೋದಾನಾತ್ಮಕ ಹೇಳಿಕೆ ನೀಡಿದ್ದಾರೆ ಎಂಬುದು ಅನುಮಾನಾಸ್ಪದವಾಗಿ ಸಾಬೀತಾಗಿದೆ” ಎಂದು ನ್ಯಾಯಾಲಯ ತಿಳಿಸಿದೆ.
ಇದನ್ನು ಓದಿದ್ದೀರಾ? ಹೊಸ ಓದು | ನಡುಬಗ್ಗಿಸದ ಎದೆಯ ದನಿ: ಶೂದ್ರ ಯುವಕರು ಓದಬೇಕಾದ ಪುಸ್ತಕ
ಸಕ್ಸೇನಾ “ಗುಜರಾತ್‌ನ ಜನರನ್ನು ಮತ್ತು ಅವರ ಸಂಪನ್ಮೂಲಗಳನ್ನು ವಿದೇಶಿ ಹಿತಾಸಕ್ತಿಗಳಿಗೆ ಅಡಮಾನವಿಟ್ಟಿದ್ದಾರೆ” ಎಂದು ಪಾಟ್ಕರ್ ಆರೋಪ ಮಾಡಿದ್ದರು.
“ಆರೋಪಿಯು (ಪಾಟ್ಕರ್) ಈ ಹೇಳಿಕೆಯನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳನ್ನು ಒದಗಿಸಲು ಸಾಧ್ಯವಾಗಿಲ್ಲ. ಆದ್ದರಿಂದಾಗಿ ಮೇಧಾ ಪಾಟ್ಕರ್ ಅವರು ಐಪಿಸಿಯ ಸೆಕ್ಷನ್ 500ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವನ್ನು ಮಾಡಿದ್ದಾರೆ. ಈ ಮೂಲಕ ಅವರಿಗೆ ಶಿಕ್ಷೆ ವಿಧಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಪಾಟ್ಕರ್ ಎರಡು ವರ್ಷಗಳ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡೂ ಶಿಕ್ಷೆಯನ್ನು ಪಡೆಯಬಹುದು.