ನಿಮ್ಮ ಮಗ ಸಾಯಲಿ ಅಂತಲೇ ವಿದೇಶಕ್ಕೆ ಕಳುಹಿಸಿದ್ರಾ : ಸಿಎಂ ಪ್ರಶ್ನಿಸಿದ ಕುಮಾರಸ್ವಾಮಿ

Date:

Advertisements

“ಪ್ರಜ್ವಲ್ ನನ್ನು ವಿದೇಶಕ್ಕೆ ದೇವೇಗೌಡರೇ ಕಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾದ್ರೆ ಈ ಹಿಂದೆ ವಿದೇಶಕ್ಕೆ ತಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ದರಾ? ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ ಡಿ ಕುಮಾರಸ್ವಾಮಿ ಆಕ್ರೋಶದಿಂದ ಪ್ರಶ್ನಿಸಿದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಸಿಎಂ ಹೇಳಿಕೆಯ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ಕೆಂಡಾಮಂಡಲರಾದ ಅವರು, “ಯಾರಿಗೆ ಆಗಲಿ ನೋವು ನೋವೇ. ನಿಮ್ಮ ಕುಟುಂಬದಲ್ಲಿ ಒಂದು ಘಟನೆ ನಡೆದಿದೆ. ಆಗ ನಿಮ್ಮ ಮಗನನ್ನು ನೀವೇ ಕಳಿಸಿದ್ರಾ? ಅವರ ಸಾವಿಗೆ ನೀವೇ ಕಾರಣವಾ?” ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

“ರಾಜತಾಂತ್ರಿಕ ಪಾಸ್ ಪೋರ್ಟ್ ಬಗ್ಗೆ ಇವರೆಲ್ಲಾ ಮಾತನಾಡುತ್ತಿದ್ದಾರೆ. ಆದರೆ ಇವರಿಗೆ ಕಾನೂನಿನ ತಿಳಿವಳಿಕೆಯೇ ಇಲ್ಲ. ಈಗ ಪ್ರಜ್ವಲ್ ಗೆ ವಾಪಸ್ ಕರೆದುಕೊಂಡು ಬರಲು ಪತ್ರ ಬರೆದಿದ್ದಾರೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಕೇಳಿದ್ದಾರೆ. ತಕ್ಷಣಕ್ಕೆ ಅದು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

Advertisements

ದೇವೇಗೌಡರೇನು ಎಂದು ಸಿದ್ದರಾಮಯ್ಯಗೆ ಗೊತ್ತಿಲ್ಲವೇ?

“ಇದೆಲ್ಲಾ ಪ್ರಕ್ರಿಯೆ ಸಾಕಷ್ಟು ದಿನ ಆಗಬಹುದು ಎನ್ನುವ ಕಾರಣಕ್ಕೆ ತಕ್ಷಣ ವಾಪಸ್ ಬಂದು ತನಿಖೆಗೆ ಹಾಜರಾಗು ಎಂದು ಪ್ರಜ್ವಲ್ ಗೆ ಸಂದೇಶ ಕೊಟ್ಟಿದ್ದೇನೆ. ದೇವೇಗೌಡರು ಕೊನೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ, ಮಾಧ್ಯಮದ ಹೇಳಿಕೆ ಮೂಲಕ ದೇವೇಗೌಡರು ನೀಡಿದ ಎಚ್ಚರಿಕೆ ಬಗ್ಗೆ ಮುಖ್ಯಮಂತ್ರಿಗಳು ಹಗುರವಾಗಿ ಮಾತನಾಡುತ್ತಿದ್ದಾರೆ. ಎಷ್ಟು ವರ್ಷ ಇವರು ದೇವೇಗೌಡರ ಜತೆ ಕೆಲಸ ಮಾಡಿದ್ದಾರೆ? ಅವರು ಯಾವ ರೀತಿ ರಾಜಕಾರಣ ಮಾಡಿದ್ದಾರೆ ಎನ್ನುವುದು ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ?” ಎಂದು ಹರಿಹಾಯ್ದರು.

ದೇವರಾಜೇಗೌಡ, ಶಿವರಾಮೇಗೌಡ, ಡಿಕೆಶಿ ಮಾತನಾಡಿದ್ದು ಯಾಕೆ?

“ಇದೊಂದು ರಾಜಕೀಯ ಪಕ್ಷವಾ? ಇವರಿಗೆ ಗೌರವ ಇದೆಯಾ? ಮಾನ ಮಾರ್ಯಾದೆ ಇದೆಯಾ? ಅದೇ ನಿಮ್ಮ ಡಿ.ಕೆ.ಶಿವಕುಮಾರ್, ಅದೇ ಸಿಡಿ ಶಿವು ಮಾಡಿದ್ದು ಗೊತ್ತಿಲ್ಲವೇ? ಆ ವ್ಯಕ್ತಿಯನ್ನು ಶಿವಕುಮಾರ್ ಎನ್ನುವುದು ಉಪಯೋಗಕ್ಕೆ ಬರೋದಿಲ್ಲ. ಅವರನ್ನು ಸಿಡಿ ಶಿವು ಅಂತಲೇ ಕರೆಯಬೇಕು. ಯಾಕಪ್ಪ ಸೀಡಿ ಶಿವು ಬ್ರೋಕರ್ ಶಿವರಾಮೇಗೌಡ ಜತೆ ಮಾತನಾಡಿದೆ” ಎಂದು ಡಿಕೆಶಿಯನ್ನು ಪ್ರಶ್ನಿಸಿದರು.

ತಲೆ ಹಿಡಿಯುವ ಕೆಲಸ ಮಾಡುತ್ತಿರುವುದು ಯಾರು?

“ಇಡೀ ಪ್ರಕರಣದಲ್ಲಿ ಇವರು ಯಾರದ್ದು ಪಾತ್ರ ಇಲ್ಲ ಎಂದರೆ ದೇವರಾಜೇಗೌಡ, ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ಯಾಕೆ ಮಾತನಾಡಿದರು? ಇನ್ನೂ ಏನಾದರೂ ಸಾಕ್ಷ್ಯ, ಮೆಟಿರಿಯಲ್ ಇದೆಯಾ ಅಂತ ಯಾಕೆ ಕೇಳಿದರು? ಬ್ರೋಕರ್ ಕೆಲಸ, ತಲೆ ಹಿಡಿಯುವ ಕೆಲಸ ಮಾಡುತ್ತಿರುವುದು ಅವರು. ನನ್ನ ಬಗ್ಗೆ ಪಕ್ಷದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಅವಹೇಳನ ಮಾಡುತ್ತೀರಾ? ನೀವು ಯಾವ ನೈತಿಕತೆ ಇಟ್ಟುಕೊಂಡಿದ್ದೀರಾ?” ಎಂದು ಡಿಸಿಎಂ ವಿರುದ್ಧ ಕಿಡಿಕಾರಿದರು.

“ಗೃಹ ಸಚಿವರು ತನಿಖೆ ನಿಷ್ಪಕ್ಷಪಾತವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ನಿಜವಾದ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಲಿ. ನಮ್ಮದೇನೂ ತಕರಾರು ಇಲ್ಲ. ನಿಮಗೂ ತಂದೆ ತಾಯಿ ಇದ್ದಾರೆ. ಒಡಹುಟ್ಟಿದ ಅಕ್ಕತಂಗಿಯರಿದ್ದಾರೆ. ಅರ್ಥ ಮಾಡಿಕೊಳ್ಳಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚನ್ನಗಿರಿ ಪ್ರಕರಣ; ಅಧಿಕಾರಿಗಳಿಗೆ ನಿಯಂತ್ರಣ ಇಲ್ಲ

“ಸರಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಯಾರೂ ಗೌರವ ಕೊಡುವ ವಾತಾವರಣವಿಲ್ಲ. ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಗೌರವವಿಲ್ಲ, ಯಾಕೆಂದರೆ ಸರ್ಕಾರ ಆ ರೀತಿ ಇದೆ. ಪೊಲೀಸ್ ಅಧಿಕಾರಿಗಳನ್ನು ಆ ರೀತಿ ಬಳಕೆ ಮಾಡಿಕೊಂಡಿದ್ದಾರೆ. ಅದ್ದರಿಂದ ರಾಜ್ಯದಲ್ಲಿ ಕಾನೂನು ಸಂಪೂರ್ಣ ಕುಸಿತವಾಗಿದೆ. ಇದು ಸರ್ಕಾರದ ಸ್ವಯಂಕೃತ ಅಪರಾಧ. ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ, ಜನತೆಯಲ್ಲೂ ವಿಶ್ವಾಸವಿಲ್ಲ” ಎಂದು  ಟೀಕಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X