ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

Date:

Advertisements

“ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ ಜನ್ಮ ಜೈವಿಕವಾಗಿ ಆಗಿಲ್ಲ, ಭಗವಂತನೇ ಅವರನ್ನು ಕಳಿಸಿದ್ದು ಎಂದು ಘೋಷಿಸಿದ್ದಾರೆ. ಬಹುಶಃ ಮುಂದೊಂದು ದಿನ ತನ್ನನ್ನು ತಾನು ದೇವಮಾನವನೆಂದು ಭಾವಿಸಿಕೊಳ್ಳಬಹುದು” ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಲೋಕಸಭೆ ಚುನಾವಣೆಯ ಆರನೇ ಮತ್ತು ಅಂತಿಮ ಹಂತದ ಮತದಾನ ಶನಿವಾರ ಮುಕ್ತಾಯಗೊಂಡಿದ್ದು, ಈಗಾಗಲೇ ಇಂಡಿಯಾ ಒಕ್ಕೂಟ 272 ಸ್ಥಾನಗಳ ಅರ್ಧದಾರಿಯ ಗಡಿ ದಾಟಿದೆ ಎಂದು ಎಕ್ಸ್‌ ಪೋಸ್ಟ್ ಮೂಲಕ ಕಾಂಗ್ರೆಸ್ ಹೇಳಿದೆ.

ಹಾಗೆಯೇ ಜೂನ್ 4ರ ನಂತರ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್ ಸರ್ಕಾರ ರಚಿಸಲು ಸ್ಪಷ್ಟ ಜನಾದೇಶವನ್ನು ಪಡೆಯಲಿದೆ ಎಂದು ಕಾಂಗ್ರೆಸ್ ಪಕ್ಷವು ವಿಶ್ವಾಸ ವ್ಯಕ್ತಪಡಿಸಿದೆ.

Advertisements

ಇದನ್ನು ಓದಿದ್ದೀರಾ?  ‘ನಾನು ಜೈವಿಕವಾಗಿ ಜನಿಸಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು’ ಎಂದ ಪ್ರಧಾನಿ ಮೋದಿ!

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಆರು ಹಂತದ ಚುನಾವಣೆ ಮುಗಿದಿದ್ದು, 486 ಸ್ಥಾನಗಳಿಗೆ ಮತದಾನ ಮುಗಿದಿದೆ. ಪ್ರಧಾನಿ ತಮ್ಮ ನಿವೃತ್ತಿ ಯೋಜನೆಯ ಲೆಕ್ಕಾಚಾರ ಪ್ರಾರಂಭಿಸುತ್ತಿರುವಾಗ 2024ರ ಲೋಕಸಭಾ ಚುನಾವಣೆಯ ಪ್ರಚಾರದ ರೌಂಡ್‌ ಅಪ್ ಇಲ್ಲಿದೆ” ಎಂದು ಉಲ್ಲೇಖಿಸಿದ್ದಾರೆ.

“ಬಿಜೆಪಿಯ ಭವಿಷ್ಯ ಮುದ್ರೆಯೊತ್ತಿದೆ. ದಕ್ಷಿಣದಲ್ಲಿ ಸಂಪೂರ್ಣವಾಗಿ ಸ್ವಚ್ಛವಾಗಲಿದೆ. ಉತ್ತರ, ಪಶ್ಚಿಮ, ಪೂರ್ವದಲ್ಲಿ ಅರ್ಧಕ್ಕೆ ಇಳಿಯಲಿದೆ ಎಂಬುವುದು ಸ್ಪಷ್ಟವಾಗಿದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಮೋದಿ ಸುಳ್ಳುಗಳು | ಯಾರನ್ನೂ ವಿಶೇಷ ಪ್ರಜೆಗಳೆಂದು ಒಪ್ಪಿಕೊಳ್ಳದೆ, ಎಲ್ಲರನ್ನೂ ಸಮಾನಾಗಿ ಕಾಣುತ್ತಾರೆಯೇ ಮೋದಿ?

“ಇಂಡಿಯಾ ಒಕ್ಕೂಟವು ಹಂತ 1ರಿಂದ ಬಲಗೊಳ್ಳುತ್ತಿದೆ. ಮಹಾರಾಷ್ಟ್ರ, ಯುಪಿ, ಬಿಹಾರ ಮತ್ತು ಈಗ ದೆಹಲಿಯಲ್ಲಿ ಮತದಾನದ ನಂತರ, ಉತ್ತಮ ಬೆಳವಣಿಗೆ ಕಂಡುಬಂದಿದೆ. ಇಂಡಿಯಾ ಒಕ್ಕೂಟ ಈಗಾಗಲೇ 272 ಸ್ಥಾನಗಳ ಅರ್ಧದಾರಿಯ ಗಡಿಯನ್ನು ದಾಟಿದೆ. ಒಟ್ಟು 350ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವ ಹಾದಿಯಲ್ಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಪ್ರಧಾನಿ ತಮ್ಮ ನಿವೃತ್ತಿ ಯೋಜಿಸಲು ಹೆಚ್ಚುವರಿ ಸಮಯವನ್ನು ಹೊಂದಿದ್ದಾರೆ. ಹರಿಯಾಣ ಮತ್ತು ಪಂಜಾಬ್‌ನಲ್ಲಿ ಪ್ರಚಾರ ಮಾಡಲು ಸಾಧ್ಯವಿಲ್ಲ. ನಾಯಕರನ್ನು ಜನರು ಹಳ್ಳಿಗಳಿಂದ ಓಡಿಸುತ್ತಿದ್ದಾರೆ. ರೈತ ವಿರೋಧಿ ನಡೆಯ ಬಗ್ಗೆ ರೈತರ ಕೋಪ ಮತ್ತು ಭ್ರಮನಿರಸನವು ಬಹಳ ಸ್ಪಷ್ಟವಾಗಿದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಬಾನಿಯ ವಂತಾರ ಮೃಗಾಲಯದ ಕಾರ್ಯಾಚರಣೆ ತನಿಖೆಗೆ ಎಸ್‌ಐಟಿ ರಚನೆ

ಕಳೆದ ಕೆಲವು ತಿಂಗಳುಗಳಿಂದ ಅಂಬಾನಿ ಅವರ ರಿಲಯನ್ಸ್‌ ಸಂಸ್ಥೆಗೆ ಸೇರಿದ, ಮುಕೇಶ್...

ಮದುವೆಯಾಗಲು ನಿರಾಕರಿಸಿದ ಯುವತಿಗೆ ಗುಂಡಿಕ್ಕಿ ಕೊಲೆ: ತಾನೂ ಆತ್ಮಹತ್ಯೆಗೆ ಶರಣಾದ ಯುವಕ

ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ಯುವತಿಗೆ ಗುಂಡಿಕ್ಕಿ ಕೊಲೆ ಮಾಡಿ, ಬಳಿಕ...

ಅಣ್ಣಾಮಲೈ ಕೈಯಿಂದ ಪ್ರಶಸ್ತಿ ಪಡೆಯಲು ವಿದ್ಯಾರ್ಥಿ ನಕಾರ

ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ್ದ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ...

ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ...

Download Eedina App Android / iOS

X