ರಾಜ್ಯದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಂದೇ ದಿನ 51 ಮಂದಿ ಸಾವು; ಎಡಿಜಿಪಿ ಅಲೋಕ್ ಕುಮಾರ್

Date:

Advertisements

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಕ್ರಮೇಣ ಹೆಚ್ಚಳವಾಗುತ್ತಲೇ ಇದ್ದು, ಸಂಚಾರ ನಿಯಮ ಪಾಲನೆ ಮಾಡದೆ ಇರುವುದೇ ಅಪಘಾತಗಳಿಗೆ ಪ್ರಮುಖ ಕಾರಣ ಎನ್ನಲಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಕ್ಕೆ 51 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಟ್ರಾಫಿಕ್ ಹಾಗೂ ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಹಾಸನದಲ್ಲಿ ರವಿವಾರ ಸಂಭವಿಸಿದ ಕಾರು ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ರಸ್ತೆ ಅಪಘಾತಗಳಲ್ಲಿ 51 ಜನರು ಸಾವನ್ನಪ್ಪಿದ್ದಾರೆ. ಇದು ಈಗ ಸಂಬಂವಿಸಿದ ಅತಿ ಹೆಚ್ಚು ಅಪಘಾತಗಳಲ್ಲಿ ಹೆಚ್ಚಿನವು ಅತಿವೇಗ ಹಾಗೂ ಅಜಾಗರೂಕ ಚಾಲನೆಯಿಂದ ಸಂಭವಿಸಿವೆ. ರಸ್ತೆ ಸುರಕ್ಷತೆಗೆ ಎಲ್ಲ ಪಾಲುದಾರರಿಂದ ಜವಾಬ್ದಾರಿಯುತ ನಡವಳಿಕೆಯ ಅಗತ್ಯವಿದೆ” ಎಂದು ತಿಳಿಸಿದ್ದಾರೆ.

ವಾಹನ ಸವಾರರು ರಸ್ತೆ ನಿಯಮಗಳನ್ನು ಪಾಲಿಸಿದರೆ, ಇಂತಹ ಘಟನೆಗಳನ್ನು ಆದಷ್ಟು ತಪ್ಪಿಸಬಹುದು. ಅಮೂಲ್ಯ ಜೀವಗಳನ್ನು ಉಳಿಸಬಹುದು ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಯೋಗ ಬಿಎಂಟಿಸಿಗೆ ಭೇಟಿ

ಭಾನುವಾರ ಬೆಳಿಗ್ಗೆ ನಸುಕಿನ ಜಾವ ಹಾಸನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದರು. ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ NH 75ನಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಕಾರಳ್ಳಿ ಗ್ರಾಮದ ನಾರಾಯಣಪ್ಪ, ಸುನಂದಾ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂದರಹಳ್ಳಿ ಗ್ರಾಮದ ನೇತ್ರಾ ಹಾಗೂ ರವಿಕುಮಾರ್ ದಂಪತಿ ಹಾಗೂ ಪುತ್ರ ಚೇತನ್ ಮೃತ ದುರ್ದೈವಿಗಳು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X