ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ 2018ರ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಯುಪಿಯ ನ್ಯಾಯಾಲಯವು ಜೂನ್ 7ಕ್ಕೆ ನಿಗದಿಪಡಿಸಿದೆ.
ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಗಾಂಧಿ ವಿರುದ್ಧ ಮಾನನಷ್ಟ ದೂರು ದಾಖಲಿಸಿದ್ದರು. ರಾಹುಲ್ ಗಾಂಧಿ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ರಾಹುಲ್ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದಾರೆ ಮತ್ತು ನ್ಯಾಯಾಲಯಕ್ಕೆ ಹಾಜರಾಗಲು ಸಮಯ ಬೇಕಾಗುತ್ತದೆ ಎಂದು ಹೇಳಿದ್ದರು.
STORY | UP court fixes June 7 for hearing defamation case against Rahul Gandhi
READ: https://t.co/Dw3RkNuA6N
VIDEO | “(Congress leader) Rahul Gandhi is busy campaigning for the Lok Sabha election in Patna and therefore, he couldn’t appear before the court. June 7 has been set… pic.twitter.com/9Imf9m7Pmn
— Press Trust of India (@PTI_News) May 27, 2024
ಬಳಿಕ ನ್ಯಾಯಾಧೀಶ ಶುಭಂ ವರ್ಮಾ ಅವರು ಮುಂದಿನ ವಿಚಾರಣೆಯನ್ನು ಜೂನ್ 7 ಎಂದು ನಿಗದಿಪಡಿಸಿದ್ದಾರೆ.
ಇದನ್ನು ಓದಿದ್ದೀರಾ? ಜುಲೈ 5ರಂದು ಬಡ ಮಹಿಳೆಯರ ಖಾತೆಗೆ 8,500 ರೂ ಜಮೆ: ರಾಹುಲ್ ಗಾಂಧಿ
ಆದರೆ ರಾಹುಲ್ ಗಾಂಧಿ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಫಿರ್ಯಾದಿದಾರರ ಪರ ವಕೀಲ ಸಂತೋಷ್ ಕುಮಾರ್ ಪಾಂಡೆ ನ್ಯಾಯಾಲಯದಲ್ಲಿ ವಾದಿಸಿದ್ದಾರೆ.
ಕಳೆದ ಡಿಸೆಂಬರ್‌ನಲ್ಲಿ ನ್ಯಾಯಾಲಯವು ರಾಹುಲ್ ಗಾಂಧಿ ವಿರುದ್ಧ ವಾರೆಂಟ್ ಹೊರಡಿಸಿತ್ತು. ಫೆಬ್ರವರಿ 20ರಂದು ಅಮೇಥಿಯಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಸ್ಥಗಿತಗೊಳಿಸಿದ ರಾಹುಲ್ ನ್ಯಾಯಾಲಯಕ್ಕೆ ಹಾಜರಾಗಿದ್ದು ಜಾಮೀನು ನೀಡಲಾಗಿತ್ತು.
ಇದನ್ನು ಓದಿದ್ದೀರಾ? ಇಂಡಿಯಾ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಅದಾನಿ ಸಮೂಹದ ವಿರುದ್ಧ ತನಿಖೆ: ರಾಹುಲ್ ಗಾಂಧಿ
ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ರಾಹುಲ್ ಗಾಂಧಿ ವಿರುದ್ಧ ಆಗಸ್ಟ್ 4, 2018ರಂದು ದೂರು ದಾಖಲಿಸಲಾಗಿದೆ.