ವಿಜಯಪುರ | ಮಗಳನ್ನು ಪ್ರೀತಿಸಿದ್ದ ಯುವಕನಿಗೆ ಬೆಂಕಿ ಹಚ್ಚಿದ ಯುವತಿ ಕುಟುಂಬ; ಆರೋಪ

Date:

Advertisements

ಮಗಳನ್ನು ಪ್ರೀತಿಸಿದ್ದ ಯುವಕನ ಮೇಲೆ ಯುವತಿಯ ಕುಟುಂಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಘಟನೆ ಸೋಮವಾರ ರಾತ್ರಿ ನಡೆದಿದ್ದು, ಯುವಕ ರಾಹುಲ್ ಬಿರಾದಾರ್​ಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ಕೃತ್ಯ ಎಸಗಿದ ಆರೋಪಿಗಳಿಗೆ ಕೆಲ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ನಗರದ ರಾಹುಲ್ ಮತ್ತು ಯುವತಿ ಐಶ್ವರ್ಯ ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಯುವತಿ ಕುಟುಂಬಕ್ಕೆ ತಿಳಿದು, ರಾಜಿ ಪಂಚಾಯತಿ ನಡೆಸಿದ್ದರು. ಪೋಷಕರ ಮಾತಿನಂತೆ ಇಬ್ಬರು ದೂರವಾಗಿದ್ದರು.

Advertisements

ಆದರೆ, ಬೇಸರಗೊಂಡಿದ್ದ ಯುವಕ ಆಗ್ಗಾಗ್ಗೆ ಯುವತಿಯ ಮನೆ ಬಳಿ ಓಡಾಡುತ್ತಿದ್ದ. ಆತನಿಗೆ ಕರೆ ಮಾಡಿದ್ದ ಯುವತಿ, ಮನೆ ಎದುರು ಬಾರದಂತೆ ಕೇಳಿದ್ದಳು. ಅದಾಗ್ಯೂ, ಮಾತಿಗೆ ಮಾತು ಬೆಳೆದು, ನಿನ್ನ ಮನೆಗೆ ಬರುತ್ತೇನೆಂದ ರಾಹುಲ್, ಐಶ್ವರ್ಯ ಮನೆಗೆ ಹೋಗಿದ್ದಾನೆ.

ಈ ವೇಳೆ, ರಾಹುಲ್ ಮೇಲೆ ಯುವತಿಯ ತಂದೆ ಅಪ್ಪು ಮದರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ರಾಹುಲ್‌ಗೆ ಗಂಭೀರ ಗಾಯಗಳಾಗಿವೆ. ಅಲ್ಲದೆ, ಯುವತಿಯ ತಂದೆ, ಚಿಕ್ಕಪ್ಪ, ಚಿಕ್ಕಮ್ಮಗೂ ಸುಟ್ಟ ಗಾಯಗಳಾಗಿವೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತ, ಯುವಕನೇ ಪೆಟ್ರೋಲ್ ತಂದು, ತಮ್ಮ ಮಗಳಿಗೆ ಬೆಂಕಿ ಹಚ್ಚಲು ಯತ್ನಿಸಿದ್ದ ಎಂದು ಯುವತಿಯ ಕುಟುಂಬವೂ ಆರೋಪಿಸಿದೆ. ಎರಡೂ ಕುಟುಂಬದ ಸದಸ್ಯರು ಪರಸ್ಪರ ವಿರುದ್ಧ ದೂರು ನೀಡಿದ್ದಾರೆ. ಮುದ್ದೇಬಿಹಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ವಿದ್ಯೆಗೆ ಸರಿಯಾದ ಉದ್ಯೋಗವಿಲ್ಲದ ಯುವಕರು ಹಾದಿ ತಪ್ಪಿರುವ ನಿದರ್ಶನಗಳು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ...

ಭಾಲ್ಕಿ | ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಅರಿವು ಅಭಿಯಾನ

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಇಲಾಖೆ ಹಾಗೂ ಜೈ ಕರ್ನಾಟಕ...

ಗುಬ್ಬಿ | ಕಾಡುಗೊಲ್ಲರು ಶ್ರೀ ಕೃಷ್ಣನ ಆರಾಧಕರಲ್ಲ : ಬಿ.ದೊಡ್ಡಯ್ಯ

ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು...

Download Eedina App Android / iOS

X