ಬೀದರ್‌ | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಮೇ 30ರಂದು ‘ಹೋರಾಟದ ನಡಿಗೆ, ಹಾಸನದ ಕಡೆಗೆ’; ಬೃಹತ್ ಪ್ರತಿಭಟನೆ

Date:

Advertisements

ಪೆನ್‌ಡ್ರೈವ್ ರಾಸಲೀಲೆ ಪ್ರಕರಣದಲ್ಲಿ ಸಿಲುಕಿ, ದೇಶ ಬಿಟ್ಟು ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಜನಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತೆಯರು ಬೀದರ್ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರಪತ್ರ ಬಿಡುಗಡೆಗೊಳಿಸಿ ಪ್ರತಿಭಟಿಸಿದರು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಪ್ರಗತಿಪರ ಹೋರಾಟಗಾರರು, ಮೇ30 ರಂದು, ʼಹೋರಾಟದ ನಡಿಗೆ, ಹಾಸನದ ಕಡೆಗೆʼ ಎಂಬ ಘೋಷ ವಾಕ್ಯದೊಂದಿಗೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಒಕ್ಕೂಟದ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.

“ಮಹಿಳೆಯರ ಬಗ್ಗೆ ಗೌರವ ಇದ್ದರೆ ಈ ಪ್ರತಿಭಟನೆಗೆ ಬೆಂಬಲಿಸಬೇಕು. ಹಾಸನ ಜಿಲ್ಲೆಯ ಮಾನವನ್ನ ಹರಾಜು ಮಾಡಿರುವವರನ್ನು ಬಂಧಿಸಬೇಕು ಮತ್ತು ಸಂತ್ರಸ್ತೆಯರಿಗೆ ನ್ಯಾಯ ದೊರಕಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ಹೋರಾಟ ಮಾಡಲಾಗುತ್ತಿದೆ. ನಾವು ಯಾವುದೇ ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ನಡೆಸುತ್ತಿಲ್ಲ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಧರ್ಮಾಧಿಕಾರಿ’ಗೆ ಅಡ್ಡಬಿದ್ದ ಸರ್ಕಾರ ಸಾರುತ್ತಿರುವ ಸಂದೇಶವೇನು?

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಸಹ ಕಾರ್ಯದರ್ಶಿ ಸಾವಿತ್ರಿ ಚಿಕ್ಕಮಠ, ತಾಲೂಕು ಅಧ್ಯಕ್ಷೆ ಕಲಾವತಿ, ರೇಷ್ಮಾ ಹಂಶರಾಜ್ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ನೂತನ ವಿದ್ಯಾರ್ಥಿನಿಲಯ ನಿರ್ಮಾಣ : ಸಚಿವರಿಂದ ಶಂಕುಸ್ಥಾಪನೆ

ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು...

ಗದಗ | ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ( ಕಭೀ) ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ...

ಉಡುಪಿ‌ | ಹುಡುಗಿಯ ವಿಚಾರಕ್ಕೆ ಜಗಳ, ಕೊಲೆಯಲ್ಲಿ ಅಂತ್ಯ, ಆರೋಪಿಯ ಬಂಧನ

ಉಡುಪಿ‌ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿಯಲ್ಲಿ ಮದ್ಯರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ವಿಜಯಪುರ ಬಿಸಿಎಂ ವಸತಿನಿಲಯಕ್ಕೆ ಅಧಿಕಾರಿಗಳ ಭೇಟಿ: ಸಮಸ್ಯೆ ಬಗೆಹರಿಸುವ ಭರವಸೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಬಿಸಿಎಂ ವಸತಿನಿಲಯಕ್ಕೆ ಉಪತಹಶೀಲ್ದಾರ್ ಎನ್...

Download Eedina App Android / iOS

X