ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಲಭ್ಯವಿದ್ದ ಬಿತ್ತನೆ ಬೀಜದ ಬೆಲೆ ಏರಿಕೆಯಾದ ಪರಿಣಾಮ, ಮುಕ್ತ ಮಾರುಕಟ್ಟೆಯಲ್ಲಿಯೂ ದರ ದುಪ್ಪಟ್ಟಾಗಿದೆ. ಕೃಷಿ ಸಚಿವರೇ, ಎಲ್ಲಿದ್ದೀರಪ್ಪ? ಎಂದು ಜೆಡಿಎಸ್ ಕಿಡಿಕಾರಿದೆ.
ಎಕ್ಸ್ ತಾಣದಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, “ತಕ್ಷಣವೇ ಸರ್ಕಾರ ಬಿತ್ತನೆ ಬೀಜದ ದರ ಇಳಿಕೆಗೆ ಕ್ರಮ ಕೈಗೊಳ್ಳಬೇಕು ಮತ್ತು ಮುಕ್ತ ಮಾರುಕಟ್ಟೆಯಲ್ಲಿ ದರ ಏರಿಕೆಗೆ ನಿಯಂತ್ರಣ ವಿಧಿಸಬೇಕು” ಎಂದು ಆಗ್ರಹಿಸಿದೆ.
“ಬಿತ್ತನೆ ಬೀಜದ ದರ ಶೇ.60ರಷ್ಟು ಹೆಚ್ಚಳವಾಗಿದೆ. ಪಂಚ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡಿದೆ ಎಂದು ಬೀಗುವ ಕಾಂಗ್ರೆಸ್ ಸರ್ಕಾರ ಮಾಡಿರುವ ಘನಕಾರ್ಯ ಇದು” ಎಂದು ಟೀಕಿಸಿದೆ.
“ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ ಮಾಡುತ್ತಿರುವ ಘನಕಾರ್ಯವಿದು! ಕೊಟ್ಟ ಹಾಗೆ ಮಾಡಿ ಜನರಿಗೆ ಗೊತ್ತೇ ಆಗದಂತೆ ಜೇಬಿಗೆ ಕೈ ಹಾಕಿ ಪಿಕ್ ಪಾಕೆಟ್ ಮಾಡುತ್ತಿರುವ ಕಿಡಿಗೇಡಿ ಕೆಲಸ ಇದು” ಎಂದು ವಾಗ್ದಾಳಿ ನಡೆಸಿದೆ.
•ಬಿತ್ತನೆ ಬೀಜದ ದರ ಶೇ.60ರಷ್ಟು ಹೆಚ್ಚಳ•
ಪಂಚ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡಿದೆ ಎಂದು ಬೀಗುವ @INCKarnataka ಸರಕಾರ ಮಾಡಿರುವ ಘನಕಾರ್ಯ ಇದು.
ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ ಮಾಡುತ್ತಿರುವ ಘನಕಾರ್ಯವಿದು! ಕೊಟ್ಟ ಹಾಗೆ ಕೊಟ್ಟು ಜನರಿಗೆ ಗೊತ್ತೇ ಆಗದಂತೆ ಜೇಬಿಗೆ ಕೈ ಹಾಕಿ ಪಿಕ್ ಪಾಕೆಟ್… pic.twitter.com/FYNHVe8o3R
— Janata Dal Secular (@JanataDal_S) May 28, 2024
