ಬೆಂಗಳೂರು ನಗರದ ಹೊರವಲಯದ ಯಲಹಂಕದಲ್ಲಿರುವ ಫ್ಲೈ ಓವರ್‌ಗೆ ಇಟ್ಟಿರುವ ಸಾವರ್ಕರ್ ಹೆಸರನ್ನು ಬದಲಿಸಿ, ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹೆಸರಿಡುವಂತೆ ಆಗ್ರಹಿಸಿ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆ ಮಂಗಳವಾರ ನಡೆದಿದೆ.
ಸಂಚಾರ ತಡೆ ನಡೆಸಿ ನಾಮಫಲಕಕ್ಕೆ ಮಸಿ ಬಳಿದಿದ್ದು, ಕೃತ್ಯ ಎಸಗಿದ ಆರೋಪದ ಮೇಲೆ ಮೂವರು ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೇಲ್ಸೇತುವೆಯ ನಾಮಫಲಕದ ಬಳಿ ಹತ್ತಿ, ಸಾವರ್ಕರ್ ಹೆಸರು ಹಾಗೂ ಫೋಟೋಗೆ ಮಸಿ ಬಳಿದಿರುವ ಎನ್‌ಎಸ್‌ಯುಐ ಕಾರ್ಯಕರ್ತರು, ಬಳಿಕ ಸೇತುವೆಗೆ ʼಭಗತ್ ಸಿಂಗ್ ಮೇಲ್ಸೇತುವೆʼ ಹೆಸರಿನ ಬ್ಯಾನರ್ ಹಾಕಿದ್ದಾರೆ. ಆ ಬಳಿಕ ಇಂಕಿಲಾಭ್ ಝಿಂದಾಬಾದ್ ಘೋಷಣೆ ಕೂಗಿದ್ದಾರೆ.
ಸಾವರ್ಕರ್ ಹೆಸರಿನ ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಬಿಜೆಪಿ ಹಾಗೂ ಸಂಘಪರಿವಾರದ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವರ್ಕರ್ ಮೇಲ್ಸೇತುವೆಗೆ ಮಸಿ ಬಳಿದಿರುವುದನ್ನು ಖಂಡಿಸಿ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ವಿಶ್ವನಾಥ್, “ಕಾಂಗ್ರೆಸ್ ನಾಯಕರ ಫೋಟೋಗಳು ಯಲಹಂಕದಲ್ಲಿವೆ. ಆದರೆ, ನಾವು ಯಾವುದೇ ಪೋಟೋಗಳಿಗೂ ಮಸಿ ಬಳಿದಿಲ್ಲ. ಸಾವರ್ಕರ್ ಇತಿಹಾಸವನ್ನು ಕಾಂಗ್ರೆಸ್‌ನವರು ಮೊದಲು ತಿಳಿದುಕೊಳ್ಳಲಿ” ಎಂದು ಕಿಡಿಕಾರಿದರು.
ರಾಜ್ಯದಲ್ಲಿ @INCKarnataka ಅಧಿಕಾರಕ್ಕೆ ಬಂದ ಮೇಲೆ ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ಬೆಂಕಿ ಇಡುವ ಕೆಲಸ ಮಾಡುವುದರ ಜತೆಗೆ ದಕ್ಷಿಣ ಭಾರತ – ಉತ್ತರ ಭಾರತವೆಂದು ಇಬ್ಭಾಗವನ್ನು ಮಾಡಿತ್ತು!
ಆದರೆ, ಈಗ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಭಗತ್ ಸಿಂಗ್ ಅವರನ್ನು ಇಟ್ಟುಕೊಂಡು ಕಾಂಗ್ರೆಸ್ಸಿನ ಪುಡಿ ರೌಡಿಗಳು ಅಖಂಡ… pic.twitter.com/9CoylcGTzk
— BJP Karnataka (@BJP4Karnataka) May 28, 2024
“ಈಗ ಮೂವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಉಳಿದವರನ್ನು ಶೀಘ್ರವಾಗಿ ಬಂಧನ ಮಾಡಬೇಕು. ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಸ್ವಯಂ ಪ್ರೇರಿತವಾಗಿ ಯಲಹಂಕ ಬಂದ್ ಕೂಡ ಮಾಡಲಾಗುತ್ತದೆ. ಶೀಘ್ರ ನಾಮಫಲಕ ಸರಿಪಡಿಸುವ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದರು.
ಯಲಹಂಕ ನ್ಯೂ ಟೌನ್ ಪೋಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು @INCKarnatakaದ ವೇಷದಲ್ಲಿರುವ ಉಗ್ರಗಾಮಿ ಸಂಘಟನೆ ಪಿಎಫ್ಐ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಭಾರತಾಂಬೆಯ ಹೆಮ್ಮೆಯ ಪುತ್ರ ವೀರ ಸಾರ್ವಕರರಿಗೆ ಅಪಮಾನ ಮಾಡಿದರೆ ಖಂಡಿತ… pic.twitter.com/HTCvoia03h
— R. Ashoka (ಮೋದಿ ಅವರ ಕುಟುಂಬ) (@RAshokaBJP) May 28, 2024
