ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, 6,675 ಮಂದಿ ಅರ್ಹತೆ ಪಡೆದಿದ್ದಾರೆ.
ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜನವರಿ 13ರಂದು ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ 6,675 ಮಂದಿ ಅರ್ಹತೆ ಪಡೆದಿರುವುದಾಗಿ ಕೆಇಎ ತಿಳಿಸಿದೆ.
KSET eligibility list announced
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಕೆಇಎ ಪ್ರಕಟಿಸಿದೆ.
ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜನವರಿ 13ರಂದು ನಡೆದ ಪರೀಕ್ಷೆಯಲ್ಲಿ 6,675 ಮಂದಿ ಅರ್ಹತೆ ಪಡೆದಿದ್ದಾರೆ.@CMofKarnataka @drmcsudhakar#kset— KEA (@KEA_karnataka) May 28, 2024
ಒಟ್ಟು 1,17,303 ಮಂದಿ ನೋಂದಾಯಿಸಿಕೊಂಡು, 95,201 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಅವರ ಪೈಕಿ 6,675 ಮಂದಿ ಅರ್ಹತೆ ಪಡೆದಿದ್ದಾರೆ. ಇವರಲ್ಲಿ ಪುರಷರು 3,398, ಮಹಿಳೆಯರು 3,180 ಹಾಗೂ 97 ಮಂದಿ ಲೈಂಗಿಕ ಅಲ್ಪಸಂಖ್ಯಾತರು(ತೃತೀಯ ಲಿಂಗಿ) ಇದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ನೀಡಿದೆ. ಈ ಬಗ್ಗೆ ವಿವರಗಳಿಗಾಗಿ ಅಭ್ಯರ್ಥಿಗಳು KEA ವೆಬ್ಸೈಟ್ಗೆ ಭೇಟಿ ನೀಡಿ, ಪರಿಶೀಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
