ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಅತ್ಯಾಚಾರ ಸಂತ್ರಸ್ತ ಮಹಿಳೆಯೊಬ್ಬರನ್ನು ಅಪಹರಣ ಮಾಡಿದ ಆರೋಪದಲ್ಲಿ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನನ್ನ ರದ್ದುಗೊಳಿಸಬೇಕು ಎಂದು ಕೋರಿ ಈ ಪ್ರಕರಣಗಳ ತನಿಖೆಯನ್ನು ನಡೆಸುತ್ತಿರುವ ಎಸ್‌ಐಟಿ ತಂಡವು ಹೈಕೋರ್ಟ್ ಕದ ತಟ್ಟಿದೆ.
ಅತ್ಯಾಚಾರ ಸಂತ್ರಸ್ತ ಮಹಿಳೆಯೊಬ್ಬರನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ನೀಡಿದೆ. ಈ ಆದೇಶವನ್ನು ರದ್ದುಪಡಿಸುವಂತೆ ಕೋರಿ ಎಸ್‌ಐಟಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಂಚಿಕೆ ಆರೋಪ: ಕಾಂಗ್ರೆಸ್ ಕಾರ್ಯಕರ್ತ ನವೀನ್ ಗೌಡ ಸಹಿತ ಇಬ್ಬರ ಬಂಧನ
ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಅದಾದ ಬಳಿಕ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು.
ಇನ್ನು ಮಹಿಳೆ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಮನೆಗೆಲಸದಾಕೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿ ಹೊಳೆನರಸೀಪುರ ಮತ್ತು ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿದೆ. ಈ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಎಚ್‌ಡಿ ರೇವಣ್ಣ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಇದನ್ನು ಓದಿದ್ದೀರಾ? ಬೀದರ್ | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಮೇ 30ರಂದು ‘ಹೋರಾಟದ ನಡಿಗೆ, ಹಾಸನದ ಕಡೆಗೆ’; ಬೃಹತ್ ಪ್ರತಿಭಟನೆ
ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿರುವ ಆರೋಪದ ಮೇಲೆ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತ ನವೀನ್ ಗೌಡ ಮತ್ತು ಚೇತನ್ ಎಂಬವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಇಬ್ಬರೂ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಹೈಕೋರ್ಟ್‌ಗೆ ಬಂದಿದ್ದರು. ಈ ಸಂದರ್ಭದಲ್ಲೇ ಆರೋಪಿಗಳನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 6 ಮತ್ತು 7ನೇ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಎಂಬವರ ಬಂಧನ ಇತ್ತೀಚೆಗೆ ಆಗಿದೆ. ಇದೀಗ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.