ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಮಧ್ಯೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ದಲಿತ ನಾಯಕರನ್ನು ಮೂಲೆಗುಂಪು ಮಾಡುವ ವಿಷಯದಲ್ಲಿ ಮಾತ್ರ ಇಬ್ಬರದ್ದೂ ಒಂದೇ ನಿಲುವು, ಇಬ್ಬರದ್ದೂ ಒಂದೇ ಗುರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡೆಗೆ ಗೃಹ ಸಚಿವ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿ, “ಚರ್ಚಿಸದೇ ಅಭ್ಯರ್ಥಿ ಆಯ್ಕೆ ಸರಿಯಲ್ಲ” ಎಂದು ಹೇಳಿಕೆ ನೀಡಿದ್ದನ್ನು ಉಲ್ಲೇಖಿಸಿ ಅಶೋಕ್ ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
“ಮುಖ್ಯಮಂತ್ರಿ ಸ್ಥಾನ ಕೊಡುವುದು ದೂರದ ಮಾತು, ಕನಿಷ್ಠ ಪಕ್ಷ ಒಂದು ಎಂಎಲ್ಸಿ ಸ್ಥಾನದ ಆಯ್ಕೆಗೂ ದಲಿತ ಮುಖಂಡರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ಗೋಜಿಗೆ ಹೋಗುವುದಿಲ್ಲ” ಎಂದಿದ್ದಾರೆ.
“ಮಲ್ಲಿಕಾರ್ಜುನ ಖರ್ಗೆ, ವಿ.ಶ್ರೀನಿವಾಸ್ ಪ್ರಸಾದ್, ಡಾ. ಜಿ. ಪರಮೇಶ್ವರ್, ಕೆ ಹೆಚ್ ಮುನಿಯಪ್ಪ ಹೀಗೆ ಕಾಂಗ್ರೆಸ್ ಪಕ್ಷದಲ್ಲಿ ಮೊಲೆಗುಂಪಾದ ದಲಿತ ನಾಯಕರ ಪಟ್ಟಿ ಬೆಳೆಯುತ್ತಲೇ ಇದೆ” ಎಂದು ಕುಟುಕಿದ್ದಾರೆ.
ಸಿಎಂ @siddaramaiah ಹಾಗು ಡಿಸಿಎಂ @DKShivakumar ಅವರ ಮಧ್ಯೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ದಲಿತ ನಾಯಕರನ್ನು ಮೂಲೆಗುಂಪು ಮಾಡುವ ವಿಷಯದಲ್ಲಿ ಮಾತ್ರ ಇಬ್ಬರದ್ದೂ ಒಂದೇ ನಿಲುವು, ಇಬ್ಬರದ್ದೂ ಒಂದೇ ಗುರಿ.
ಮುಖ್ಯಮಂತ್ರಿ ಸ್ಥಾನ ಕೊಡುವುದು ದೂರದ ಮಾತು, ಕನಿಷ್ಠ ಪಕ್ಷ ಒಂದು ಎಂಎಲ್ಸಿ ಸ್ಥಾನದ ಆಯ್ಕೆಗೂ ದಲಿತ ಮುಖಂಡರನ್ನ ವಿಶ್ವಾಸಕ್ಕೆ… pic.twitter.com/D6GnPDrw3z
— R. Ashoka (ಮೋದಿ ಅವರ ಕುಟುಂಬ) (@RAshokaBJP) May 29, 2024
