ಚಂದ್ರಶೇಖರ್‌ ಆತ್ಮಹತ್ಯೆ | ಸರ್ಕಾರದ ಖಜಾನೆಯನ್ನೇ ಲೂಟಿ ಮಾಡಿದ ಹಗರಣವಿದು: ಗೋವಿಂದ ಕಾರಜೋಳ

Date:

Advertisements

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು ಕೂಡಲೇ ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯ ಸರಕಾರದ ತನಿಖಾ ಸಂಸ್ಥೆಗಳಿಂದ ಇದರ ಸಮಗ್ರ ನಿಷ್ಪಕ್ಷಪಾತ ತನಿಖೆ ಮಾಡಲು ಅಸಾಧ್ಯ. ಆದ್ದರಿಂದ ಕೇಂದ್ರ ಸರಕಾರದ ಏಜೆನ್ಸಿಗಳ ಮೂಲಕ ತನಿಖೆ ನಡೆಸಿ” ಎಂದು ಒತ್ತಾಯಿಸಿದರು.

“ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಅವರು ಮಂತ್ರಿಗಳ ಮೌಖಿಕ ಆದೇಶದನ್ವಯ ಹಣ ವರ್ಗಾವಣೆ ಮಾಡಿದ್ದಾಗಿ ಬರೆದಿದ್ದಾರೆ. ಹಾಗಾದರೆ ಎಫ್‍ಐಆರ್‌ನಲ್ಲಿ ಸಚಿವರ ಹೆಸರು ಯಾಕೆ ಬಂದಿಲ್ಲ? ಇದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ” ಎಂದರು.

Advertisements

“ಸರಕಾರದ ಅಧೀನ ಸಂಸ್ಥೆಯಾದ ಸಿಐಡಿಯವರು ಮುಖ್ಯಮಂತ್ರಿಗಳು, ಸಚಿವರ ಬಗ್ಗೆ ತನಿಖೆ ಮಾಡಲು ಎಷ್ಟರಮಟ್ಟಿಗೆ ಸಾಧ್ಯ? ನೈತಿಕತೆ ಇದ್ದರೆ ಸಚಿವರು ರಾಜೀನಾಮೆ ಕೊಡಬೇಕಿತ್ತು. ಬ್ಯಾಂಕ್ ಖಾತೆಯು ಎಂ.ಡಿ. ಮತ್ತು ಅಕೌಂಟ್ಸ್ ಅಧಿಕಾರಿಯ ಜಂಟಿ ಖಾತೆಯಾಗಿರುತ್ತದೆ. ಮಾರ್ಚ್‍ನಲ್ಲಿ ಹಣ ವರ್ಗಾವಣೆ ಆಗಿದೆ. ಮಾರ್ಚ್ 4ರಂದು 25 ಕೋಟಿ, 6ರಂದು 25 ಕೋಟಿ, ಮಾರ್ಚ್ 21ರಂದು 44 ಕೋಟಿ ವರ್ಗಾವಣೆ ಆಗಿದೆ. ರಾಜ್ಯ ಹುಜೂರ್ ಖಜಾನೆಯಿಂದ 43.33 ಕೋಟಿ ವರ್ಗಾವಣೆ ಆಗಿದೆ. ಬಳಿಕ ಮೇ 21ರಂದು 50 ಕೋಟಿ ವರ್ಗಾವಣೆ ಆಗಿದೆ” ಎಂದು ವಿವರಿಸಿದರು.

“ಜಂಟಿ ಖಾತೆ ಇದ್ದಾಗ ಹೇಗೆ ವರ್ಗಾವಣೆ ಆಗಿದೆ? ಬ್ಯಾಂಕಿನ ಪ್ರತಿ ತಿಂಗಳ ವಿವರ- ಹುಜೂರ್ ಖಜಾನೆಯ ವಿವರವನ್ನು ಪುನರ್ ಪರಿಶೀಲಿಸಲಿಲ್ಲವೇ? ಎಂದ ಅವರು, ಮಾರ್ಚ್ 31ರಂದು ಹಣಕಾಸು ವರ್ಷ ಮುಕ್ತಾಯ ಆದ ಬಳಿಕ ಎಂ.ಡಿ. ಮತ್ತು ಇಲಾಖೆಯ ಸರಕಾರದ ಮಟ್ಟದ ಅಧಿಕಾರಿಗಳು ಅದನ್ನು ಪರಿಶೀಲಿಸಬೇಕಿತ್ತು. ಹಣ ಖರ್ಚಾದ ಕುರಿತು ಪರಿಶೀಲನಾ ಸಭೆ ಮಾಡಿಲ್ಲವೇ? ಸಭೆ ಮಾಡಿಲ್ಲವೆಂದಾದರೆ ಸರಕಾರವೇ ಇದರಲ್ಲಿ ಶಾಮೀಲಾಗಿರುವುದೇ ಕಾರಣ; ಸರಕಾರವು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಇದನ್ನು ಮುಚ್ಚಿಟ್ಟಿದ್ದಾರೆ” ಎಂದು ಆರೋಪಿಸಿದರು.

ನಿಗಮದಲ್ಲಿ ನಡೆದಿರುವುದು ಹಗಲುದರೋಡೆ

“ಬಹುಶಃ ಇತ್ತೀಚಿನ ವರ್ಷಗಳಲ್ಲಿ ಸರಕಾರದ ಖಜಾನೆಯನ್ನೇ ಲೂಟಿ ಮಾಡಿದ ದೊಡ್ಡ ಹಗರಣವಿದು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವುದು ಹಗಲುದರೋಡೆ. 187 ಕೋಟಿ ರೂ. ಹಗರಣದ ವಿಚಾರ ಗೊತ್ತಿದ್ದೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತ ಸರಕಾರವಿದು. ಹಗರಣದಲ್ಲಿ ಸಂಪೂರ್ಣವಾಗಿ ಭಾಗಿ ಆಗಿದ್ದರಿಂದಲೇ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು. ನಿರಪರಾಧಿ ಕೆ.ಎಸ್.ಈಶ್ವರಪ್ಪನವರನ್ನು ಬಲಿ ಪಡೆದಿರಿ; ಅವತ್ತು ನೀವು ಪ್ರತಿಪಕ್ಷದಲ್ಲಿ ಇದ್ದಾಗ ಯಾವ ರೀತಿ ಮಾತಾಡಿದ್ದೀರಿ ಎಂಬುದನ್ನು ನೆನಪಿಸಿಕೊಳ್ಳಿ” ಎಂದರು.

“ಎಸ್‍ಸಿ, ಎಸ್‍ಟಿಗಳಿಗೆ ಮೀಸಲಿಟ್ಟ 24 ಸಾವಿರ ಕೋಟಿ ಹಣವನ್ನು ಅನ್ಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳೇ ಹೊರಬೇಕು ಎಂದು ಒತ್ತಾಯಿಸಿದರು. ಈ ಹಣವನ್ನು ವಾಪಸ್ ಇಲಾಖೆಗೆ ಕೊಡಬೇಕು. ಈ ವಿಷಯದಲ್ಲಿ ತೀವ್ರ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಹರೀಶ್, ಬೆಂಗಳೂರು ಕೇಂದ್ರ ಜಿಲ್ಲೆಯ ಅಧ್ಯಕ್ಷ ಸಪ್ತಗಿರಿ ಗೌಡ ಅವರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X