ಬೆಂಗಳೂರು | ‘ಜಾಹೀರಾತು ಮುಕ್ತ ಅಭಿಯಾನ’ಕ್ಕೆ ಕೈ ಜೋಡಿಸಲು ನಾಗರಿಕರಲ್ಲಿ ಮನವಿ ಮಾಡಿದ ಬಿಬಿಎಂಪಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ ಇನ್ನಿತರೆ ಜಾಹೀರಾತುಗಳ ತೆರವು ಹಾಗೂ ಅವುಗಳನ್ನು ನಿಯಂತ್ರಿಸಲು ‘ಜಾಹೀರಾತು ಮುಕ್ತ ಅಭಿಯಾನ’ವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರಂಭಿಸಿದೆ.

“ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ‘ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018’ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ(ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿಸಲು ಮಾತ್ರ ಅವಕಾಶವಿದೆ” ಎಂದು ಹೇಳಿದೆ.

“ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು ಪ್ರದರ್ಶನ, ಎಲ್‌ಇಡಿ ಜಾಹೀರಾತು ಪ್ರದರ್ಶನ ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು, ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇಧಿಸಲಾಗಿದ್ದರೂ ಸಹ ಮತ್ತೆ ಮತ್ತೆ ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದು ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕವಾಗಿದೆ” ಎಂದು ತಿಳಿಸಿದೆ.

Advertisements

ಪರಿಸರ(ಸಂರಕ್ಷಣೆ), ಕಾಯಿದೆ 1986ರ ಸೆಕ್ಷನ್ 5ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಪ್ಲಾಸ್ಟಿಕ್ ಬಳಸುವುದನ್ನು ನಿಷೇದಿಸಲಾಗಿದೆ. ಆದ್ದರಿಂದ ನಗರದ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ, ಅನಧಿಕೃತ ವಾಣಿಜ್ಯ ಜಾಹೀರಾತುಗಳು, ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳು, ಇನ್ನಿತರೆ ಮುದ್ರಣ ಪ್ರಕಟಣೆ/ಜಾಹೀರಾತು ಹಾಗೂ ಖಾಸಗಿ ಸ್ವತ್ತುಗಳಲ್ಲಿ ಅಳವಡಿಸಿರುವ ವಾಣಿಜ್ಯ ಜಾಹೀರಾತುಗಳು, ಬೃಹತ್ ಎಲ್‌ಇಡಿ ಜಾಹೀರಾತುಗಳು, ಸೈಕಲ್ ಜಾಹೀರಾತುಗಳು, ವಾಣಿಜ್ಯ ಜಾಹೀರಾತುಗಳು, ವಾಹನ ಜಾಹೀರಾತುಗಳು ಇತರೆ ಜಾಹೀರಾತುಗಳು ಕಂಡು ಬಂದಲ್ಲಿ ಕೇಂದ್ರ ಕಚೇರಿ ಹಾಗೂ ಆಯಾ ವಲಯಗಳ ಕಚೇರಿಗಳಿಗೆ ಮಾಹಿತಿ ನೀಡಲು ನಾಗರೀಕರಲ್ಲಿ ಮನವಿ ಮಾಡಿದೆ.

ಮಾಹಿತಿ ನೀಡಿದಂತಹ ಸ್ಥಳದಲ್ಲಿ ಯಾವುದೇ ಅನಧಿಕೃತ ಜಾಹೀರಾತು ಪ್ರದರ್ಶನ ಮತ್ತು ಜಾಹೀರಾತು ಫಲಕಗಳನ್ನು ಪಾಲಿಕೆಯು ಸಂಬಂಧಪಟ್ಟವರಿಗೆ ದಂಡ ವಿಧಿಸಿ ತಕ್ಷಣವೇ ತೆರವುಗೊಳಿಸುತ್ತಾರೆ. ಅಲ್ಲದೇ ಇದಕ್ಕೆ ಸಂಬಂಧಿಸಿದಂತೆ ಅಪರಾಧ ಎಸಗಿರುವವರಿಗೆ ಕರ್ನಾಟಕ ಮುಕ್ತ ಸ್ಥಳಗಳ (ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಅಡಿಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಿ, ಕಾನೂನು ರೀತಿಯ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

ಈ ಸಂಬಂಧ ಬಿಬಿಎಂಪಿಯ ಅನಧಿಕೃತ ನಾನಾ ಜಾಹೀರಾತುಗಳನ್ನು ನಿಯಂತ್ರಿಸುವ ಮುಕ್ತ ಅಭಿಯಾನಕ್ಕೆ ನಾಗರೀಕರಲು ಕೈ ಜೋಡಿಸಿ ಬೆಂಬಲಿಸಲು ಪಾಲಿಕೆಯ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ರವರು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಟ್ ಕಾಯಿನ್ ಹಗರಣ​ | ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

ಅನಧಿಕೃತ ಜಾಹೀರಾತುಗಳ ಕುರಿತು ದೂರು ನೀಡಲು

  • ಉಪ ಆಯುಕ್ತರು(ಜಾಹೀರಾತು): 9480683939
  • ಕೇಂದ್ರ ಕಛೇರಿ: 080-22221188
  • ನಿಯಂತ್ರಣ ಕೊಠಡಿ ಐಪಿಪಿ: 080-22660000
  • ಪೂರ್ವ ವಲಯ ನಿಯಂತ್ರಣ ಕೊಠಡಿ: 080-22975803 / 22975502
  • ಪಶ್ಚಿಮ ವಲಯ ನಿಯಂತ್ರಣ ಕೊಠಡಿ: 080-23561692 / 23463366
  • ದಕ್ಷಿಣ ವಲಯ ನಿಯಂತ್ರಣ ಕೊಠಡಿ: 080-26566362 / 22975703
  • ರಾಜರಾಜೇಶ್ವರಿ ನಗರ ವಲಯ ನಿಯಂತ್ರಣ ಕೊಠಡಿ: 080-28601851 / 28600957
  • ಬೊಮ್ಮನಹಳ್ಳಿ ವಲಯ ನಿಯಂತ್ರಣ ಕೊಠಡಿ: 080-25732447 / 25735642
  • ಮಹದೇವಪುರ ವಲಯ ನಿಯಂತ್ರಣ ಕೊಠಡಿ: 080-28512300 / 28512301
  • ಯಲಹಂಕ ವಲಯ ನಿಯಂತ್ರಣ ಕೊಠಡಿ: 080-23636671 / 22975936
  • ದಾಸರಹಳ್ಳಿ ವಲಯ ನಿಯಂತ್ರಣ ಕೊಠಡಿ: 080-28394909 / 28393688

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X