ಬೀದರ್‌ | ʼಜೈಶ್ರೀರಾಮ್‌ʼ ಹಾಡು ಹಾಕಿದಕ್ಕೆ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಗಲಾಟೆ

Date:

Advertisements

ಧರ್ಮವೊಂದಕ್ಕೆ ಸಂಬಂಧಿಸಿದ ಗೀತೆಗೆ ನೃತ್ಯ ಮಾಡುತ್ತಿರುವಾಗ ಎರಡು ಸಮುದಾಯದ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಬೀದರ್‌ ನಗರದ ಮೈಲೂರ ಮಾರ್ಗದಲ್ಲಿರುವ ಗುರುನಾನಕ ದೇವ ಇಂಜಿಯರಿಂಗ್‌ ಕಾಲೇಜಿನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಕಾಲೇಜಿನಲ್ಲಿ ಮೇ 30,31 ರಂದು ಎರಡು ದಿನಗಳ ಕಾಲ ತಾಂತ್ರಿಕ ವಾರ್ಷಿಕೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮಕ್ಕೆ ಪೂರ್ವಭಾವಿ ತಯ್ಯಾರಿ ನಡೆಸುತ್ತಿದ್ದಾಗ ʼಜೈಶ್ರೀರಾಮʼ ಗೀತೆ ಹಾಕಿ ನೃತ್ಯ ಮಾಡುವ ವೇಳೆ ಅನ್ಯಕೋಮಿನ ವಿದ್ಯಾರ್ಥಿಗಳು ಆಕ್ಷೇಪಿಸಿದ್ದಾರೆ. ಈ ವೇಳೆ ಎರಡೂ ಕಡೆಯ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ.

ವಿಷಯ ತಿಳಿದು ಸ್ಥಳಕ್ಕೆ ಗಾಂಧಿ ಗಂಜ ಪೊಲೀಸ್ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗಲಾಟೆಯಲ್ಲಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತರ ಗಾಂಧಿಗಂಜ ಠಾಣೆಯಲ್ಲಿ ಅನ್ಯಕೋಮಿನ 17 ಮತ್ತು ಇತರೆ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇನ್ನೊಂದು ಸಮುದಾಯದ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಠಾಣೆಗೆ ಬಂದು 2 ವಿದ್ಯಾರ್ಥಿಗಳು ಸೇರಿ ಇತರೆ 5-6 ವಿದ್ಯಾರ್ಥಿಗಳ ವಿರುದ್ಧ ಪ್ರತಿ ದೂರು ನೀಡಿದ್ದಾರೆ.

Advertisements

ಮುಂಜಾಗೃತ ಕ್ರಮವಾಗಿ ಎರಡು ಗುಂಪಿನವರ ಮೇಲೆ ಶಾಂತಿ ಕಾಪಾಡಲು ಸಿಆರ್‌ಪಿಸಿ ಕಲಂಗಳ ಅಡಿ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲಾಗುತ್ತಿದೆ. ಕಾಲೇಜಿನ ಆಡಳಿತ ಮಂಡಳಿರವರು ಇದೇ ತಿಂಗಳು 30 ಮತ್ತು 31 ರಂದು ನಡೆಯಬೇಕಾಗಿದ್ದ  ಸಾಂಸ್ಕೃತಿಕ ಕಾರ್ಯಕ್ರಮ ರದ್ದುಗೊಳಿಸಿರುವದಾಗಿ ತಿಳಿಸಿರುತ್ತಾರೆ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಕಾಲೇಜಿನಲ್ಲಿ ಶಾಂತತೆ ಕಾಪಾಡಬೇಕು. ಕಾಲೇಜಿನ ಬಳಿ ಸೂಕ್ತ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ಕಾಲೇಜಿನಲ್ಲಿ ಶಾಂತ ಪರಿಸ್ಥಿತಿ ಇದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್‌ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

ಶಿಕ್ಷಕ ವೀರಣ್ಣ ಮಡಿವಾಳರ ಅಮಾನತು ಆದೇಶ ರದ್ದು, ಸೇವೆಗೆ ಮರು ನಿಯುಕ್ತಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಿಡಗುಂದಿಯ ಅಂಬೇಡ್ಕರ ನಗರ ಸರ್ಕಾರಿ ಕಿರಿಯ...

ತಮ್ಮ ಯೋಗ್ಯತೆಗೆ ತಕ್ಕಂತೆ ಕೆಲವರು ಟೀಕೆ ಮಾಡುತ್ತಾರೆ: ಬಾನು ಮುಷ್ತಾಕ್

ಟೀಕೆ ಮಾಡುವವರ ಬಗ್ಗೆ ನನಗೇ ಬೇಜಾರು ಇಲ್ಲ. ಅವರವರ ಯೋಗ್ಯತೆಗೆ ತಕ್ಕಂತೆ...

Download Eedina App Android / iOS

X