ಪಶ್ಚಿಮ ಬಂಗಾಳ ಸೇರಿ ಮೂರು ರಾಜ್ಯಗಳಲ್ಲಿ ಸಿಎಎ ಅಡಿಯಲ್ಲಿ ಪೌರತ್ವ ಆರಂಭ: ಗೃಹ ಸಚಿವಾಲಯ

Date:

Advertisements

ಕೇಂದ್ರ ಗೃಹ ಸಚಿವಾಲಯವು ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ಪೌರತ್ವ ನೀಡಲು ಆರಂಭಿಸಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಪಶ್ಚಿಮ ಬಂಗಾಳ, ಹರಿಯಾಣ ಮತ್ತು ಉತ್ತರಾಖಂಡದಲ್ಲಿ ಸಿಎಎ ಅಡಿಯಲ್ಲಿ ಪೌರತ್ವ ನೀಡಲು ಕೇಂದ್ರ ಸರ್ಕಾರ ಬುಧವಾರ ಆರಂಭಿಸಿದೆ ಎಂದು ಗೃಹ ಸಚಿವಾಲಯ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

“ಪೌರತ್ವ (ತಿದ್ದುಪಡಿ) ನಿಯಮಗಳು, 2024ರ ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಪ್ರಾರಂಭವಾಗಿದೆ. ಅದೇ ರೀತಿ ಹರಿಯಾಣ ಮತ್ತು ಉತ್ತರಾಖಂಡದಲ್ಲಿ ಅರ್ಜಿದಾರರಿಗೆ ಆಯಾ ರಾಜ್ಯದಲ್ಲಿ ರಚಿಸಲಾದ ಸಮಿತಿಯು ಬುಧವಾರ ಪೌರತ್ವವನ್ನು ನೀಡಿದೆ” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

Advertisements

ಡಿಸೆಂಬರ್ 31, 2014 ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾಗಿ ಭಾರತಕ್ಕೆ ಬಂದಿರುವ ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡಲು ಸಿಎಎ ಕಾಯ್ದೆಯನ್ನು ಅನ್ನು ಡಿಸೆಂಬರ್ 2019ರಲ್ಲಿ ಜಾರಿಗೊಳಿಸಲಾಗಿದೆ.

2019ರಲ್ಲಿ ‘ಸಿಎಎ’ ವಿಧೇಯಕವನ್ನು ಸಂಸತ್ತು ಅನುಮೋದಿಸಿತ್ತು. ರಾಷ್ಟ್ರಪತಿಗಳ ಅಂಕಿತ ಬಿದ್ದ ನಂತರ ಪ್ರತಿಪಕ್ಷಗಳ ನೇತೃತ್ವದಲ್ಲಿ ದೇಶಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿದ್ದವು. ಈ ಕಾಯಿದೆಯು ತಾರತಮ್ಯ ನೀತಿಯಿಂದ ಕೂಡಿದ್ದು, ಇದನ್ನು ವಾಪಸ್‌ ಪಡೆಯಬೇಕು ಎಂದು ಹಲವು ಜನಪರ ಸಂಘಟನೆಗಳು ಹಾಗೂ ಪ್ರತಿಪಕ್ಷಗಳು ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ಆಯೋಜಿಸಿತ್ತು. ಈ ವೇಳೆ ನಡೆದ ಗಲಭೆಗಳಲ್ಲಿ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X