ಹುಶ್ ಮನಿ ಪ್ರಕರಣದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಪರಾಧಿ: ಜುಲೈ 11ಕ್ಕೆ ತೀರ್ಪು

Date:

Advertisements

ಹುಶ್‌ ಮನಿ ಪ್ರಕರಣದ ಎಲ್ಲ ಆರೋಪಗಳಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ತಪ್ಪಿತಸ್ಥ ಎಂದು ಸಾಬೀತಾಗಿದ್ದು, ಅಪರಾಧ ಪ್ರಕರಣಗಳಲ್ಲಿ  ಶಿಕ್ಷೆಗೊಳಗಾಗುತ್ತಿರುವ ಅಮೆರಿಕದ ಮೊದಲ ಮಾಜಿ ಅಧ್ಯಕ್ಷರೆಂಬ ಕುಖ್ಯಾತಿ ಡೊನಾಲ್ಡ್‌ ಟ್ರಂಪ್ ಅವರಿಗೆ ಸಂದಿದೆ.

ಅಮೆರಿಕದಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗ ಡೊನಾಲ್ಡ್‌ ಟ್ರಂಪ್‌ ಅಪರಾಧಿ ಎಂದು ಸಾಬೀತಾಗಿದ್ದಾರೆ. ನ್ಯೂಯಾರ್ಕ್‌ ನ್ಯಾಯಾಲಯದ ನ್ಯಾಯಾಧೀಶರು ಡೊನಾಲ್ಡ್‌ ಟ್ರಂಪ್‌ ಅವರನ್ನು  ಪೋರ್ನ್‌ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಅವರೊಂದಿಗೆ ಸಂಬಂಧ ಮರೆಮಾಚಲು ಹಣ ನೀಡಿದ ಪ್ರಕರಣ ಸೇರಿದಂತೆ 34 ಪ್ರಕರಣಗಳಲ್ಲಿ ಅಪರಾಧಿ ಎಂದು ತೀರ್ಪು ನೀಡಿದ್ದಾರೆ.

12 ಸದಸ್ಯರ ತೀರ್ಪುಗಾರರು ಎರಡು ದಿನಗಳ ಕಾಲ 11 ಗಂಟೆಗಳಿಗೂ ಹೆಚ್ಚು ಕಾಲ ಪ್ರಕರಣದ ಬಗ್ಗೆ ಚರ್ಚಿಸಿ ಸರ್ವಾನುಮತದ ತೀರ್ಪನ್ನು ಪ್ರಕಟಿಸಿದ್ದಾರೆ.

Advertisements

ಪ್ರತಿ ಪ್ರಕರಕ್ಕೂ 4 ವರ್ಷಗಳ ಕಾಲ ಶಿಕ್ಷೆಯಾಗುವ ಸಾಧ್ಯತೆಯಿದೆ. ಆದರೆ ಶಿಕ್ಷೆಯ ವಿರುದ್ಧ ಟ್ರಂಪ್‌ ಮೇಲ್ಪನವಿ ಸಲ್ಲಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

ಜಾಮೀನು ಇಲ್ಲದೆ ಬಿಡುಗಡೆಯಾಗಿರುವ 77 ವರ್ಷದ ರಿಪಬ್ಲಿಕನ್ ನಾಯಕ ಈಗ ಅಪರಾಧಿಯಾಗಿದ್ದಾರೆ. ಆದಾಗ್ಯೂ, ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡನ್‌ ಅವರೊಂದಿಗೆ ಸೆಣಸಲು ಟ್ರಂಪ್‌ಗೆ ಯಾವುದೇ ರೀತಿಯ ನಿರ್ಬಂಧವಿಲ್ಲ.ಅಲ್ಲದೆ ಟ್ರಂಪ್‌ ಸದ್ಯಕ್ಕೆ ಜೈಲಿಗೆ ಹೋಗುವ ಸಾಧ್ಯತೆಯಿಲ್ಲ.

ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಟ್ರಂಪ್, ನಾನು ಈ ಪ್ರಕರಣದಲ್ಲಿ ಅಮಾಯಕನಾಗಿದ್ದೇನೆ. ನಿಜವಾದ ತೀರ್ಪು ಮತದಾರರಿಂದ ಬರಲಿದೆ. ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದ್ದು, ನಾನು ಈ ತೀರ್ಪನ್ನು ಒಪ್ಪುವುದಿಲ್ಲ ಎಂದು ತಿಳಿಸಿದ್ದಾರೆ.

ಟ್ರಂಪ್‌ ಶಿಕ್ಷೆಯ ಬಗ್ಗೆ ಮಾತನಾಡಿರುವ ಅಧ್ಯಕ್ಷ ಜೋ ಬೈಡನ್, ಯಾರೂ ಕಾನೂನಿಗಿಂತ ಮೇಲಲ್ಲ ಎಂಬುದನ್ನು ತೀರ್ಪುತೋರಿಸಿದೆ. ನಮ್ಮ ಪ್ರಜಾಪ್ರಭುತ್ವಕ್ಕೆ ಟ್ರಂಪ್ ಒಡ್ಡುವ ಬೆದರಿಕೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಬೈಡೆನ್ ಅವರು 2020 ರಲ್ಲಿ ಗೆಲುವು ಸಾಧಿಸಿದ ನಂತರ ಚುನಾವಣೆಯ ಫಲಿತಾಂಶಗಳನ್ನು ರದ್ದುಗೊಳಿಸಲು ಸಂಚು ರೂಪಿಸಿದ ಮತ್ತು ಶ್ವೇತಭವನವನ್ನು ತೊರೆದ ನಂತರ ರಹಸ್ಯ ದಾಖಲೆಗಳನ್ನು ಸಂಗ್ರಹಿಸಿದ್ದಕ್ಕಾಗಿ ಹಾಗೂ ಪೋರ್ನ್‌ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಅವರೊಂದಿಗೆ ಸಂಬಂಧ ಮರೆಮಾಚಲು ಹಣ ನೀಡಿದ ಆರೋಪಗಳನ್ನು ಟ್ರಂಪ್ ಎದುರಿಸುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X