ಕಲಬುರಗಿ | 371 (ಜೆ) ವಿರುದ್ಧ ಅಪಪ್ರಚಾರ; ಜೂ.1ರಂದು ಬೃಹತ್‌ ಪ್ರತಿಭಟನೆ

Date:

Advertisements

ಸಂವಿಧಾನದ 371 (ಜೆ ) ಜಾರಿಯಿಂದ ರಾಜ್ಯದ ಇತರೆ ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಜನರಿಗೆ ತಪ್ಪು ಸಂದೇಶ ನೀಡಲು ಬೆಂಗಳೂರಿನಲ್ಲಿ ಕೆಲವರು ಪ್ರತಿಭಟನೆ ನಡೆಸಿ, ಈ ಭಾಗದ ಅಸ್ಮಿತೆಗೆ ಧಕ್ಕೆ ತರುವ ಹುನ್ನಾರ ನಡೆಯುತ್ತಿದ್ದು, ಅದಕ್ಕೆ ಪ್ರತಿಯಾಗಿ ಜೂ.1ರಂದು ಕಲಬುರಗಿಯಲ್ಲಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಪ್ರಮುಖರು ತಿಳಿಸಿದರು.

ಕಲಬುರಗಿಯ ಪತ್ರಿಕಾ ಭವನದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ ಲಕ್ಷ್ಮಣ ದಸ್ತಿ ಹಾಗೂ ಎಚ್‍ಕೆಇ ಅಧ್ಯಕ್ಷ ಶಶಿಲ್ ಜಿ.ನಮೋಶಿ ಮಾತನಾಡಿ, “ಸರಕಾರಿ ನೌಕರಿ, ಶೈಕ್ಷಣಿಕ ಪ್ರವೇಶಗಳಲ್ಲಿ ಮೀಸಲಾತಿ ಮತ್ತು 371(ಜೆ) ಅಡಿ ಸ್ವಾಯತ್ತ ಅಭಿವೃದ್ಧಿ ಮಂಡಳಿ ರಚನೆಯಾಗಿ ಒಂದು ದಶಕ ಕಳೆದಿದೆ. ಕೆಲವು ಅಭಿವೃದ್ಧಿ ಕಾರ್ಯಗಳು ಬಂದಿವೆ. ಭವಿಷ್ಯದಲ್ಲಿಅಭಿವೃದ್ಧಿಯ ವೇಗ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಿರುವಾಗ, ಸಂವಿಧಾನ ಕಲ್ಪಿಸಿದ ಮೀಸಲಾತಿಯ ಮೂಲ ಸಿದ್ಧಾಂತದ ಅರ್ಥವೇ ಗೊತ್ತಿಲ್ಲದ ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರದ ಮೂಲಕ ಅಖಂಡ ಕರ್ನಾಟಕ ಒಡೆಯುವ ಹತಾಶ ಯತ್ನ ನಡೆಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕಲ್ಯಾಣಕ ರ್ನಾಟಕ ಪ್ರದೇಶ ಎಷ್ಟು ಹಿಂದುಳಿದಿದೆ ಎಂಬುದನ್ನು ಅಧಿಕೃತವಾಗಿ ಖಾತ್ರಿಪಡಿಸಿಕೊಳ್ಳಲು ಸರಕಾರದ ಅಧಿಕೃತ ಸಂಸ್ಥೆಗಳಾದ ಸತ್ಯಶೋಧನಾ ಸಮಿತಿ, ಧರಂಸಿಂಗ್ ಸಮಿತಿ ಹಾಗೂ ನಂಜುಂಡಪ್ಪ ವರದಿ ಸಮಿತಿಗಳು ತಮ್ಮ ತಮ್ಮ ವರದಿಗಳಲ್ಲಿ ಸ್ಪಷ್ಟವಾಗಿ ಇರುವ ಸತ್ಯವನ್ನುಉಲ್ಲೇಖಿಸಿವೆ. ವಿಶಾಲ ಕರ್ನಾಟಕದ ಮಾತಿಗೆ ಬಂದಾಗ ಕಲ್ಯಾಣಕ ರ್ನಾಟಕ ಜಿಲ್ಲೆಗಳ ಜನರು ಶಿಕ್ಷಣ ಮತ್ತುಉದ್ಯೋಗಾವಶಕಾಶ ಮತ್ತು ಅಭಿವೃದ್ಧಿಯಿಂದ ವಂಚಿತರಾದಾಗ ಕ್ಯಾರೆ ಎನ್ನದ ಸಂವಿಧಾನ ವಿರೋಧಿ ಶಕ್ತಿಗಳು ಇಂದು 371 (ಜೆ) ಅಡಿ ಕಲ್ಯಾಣ ಭಾಗಕ್ಕೆ ಸಂವಿಧಾನ ಬದ್ಧವಾಗಿ ಸವಲತ್ತುಗಳು ಲಭಿಸುತ್ತಿರುವಾಗ ಆರಂಭಿಕ ಹಂತದಲ್ಲಿಯೇ 371(ಜೆ) ಕುರಿತು ವಿರೋಧಿಸುತ್ತಿರುವ ಮೂಲಕ ಕೀಳುಮಟ್ಟದ ಬುದ್ಧಿ ಪ್ರದರ್ಶನ ಮಾಡುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಜೂನ್ 1 ರಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ಬೆಳಿಗ್ಗೆ10 ಗಂಟೆಗೆ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ನಡೆಯುವ ಬೃಹತ್ ಹೋರಾಟದಲ್ಲಿ ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ಇರುವ ಸರಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳು, ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ಸಿಬ್ಬಂದಿ, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಮುಖಂಡರು ಹಾಗೂ ಎಲ್ಲ ರಾಜಕಿಯ ಪಕ್ಷಗಳ ಮುಖಂಡರು, ಆಯಾ ಕ್ಷೇತ್ರದ ಗಣ್ಯರು, ವಿವಿಧಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನಿಷ್ಪಕ್ಷಪಾತ ಮತ ಎಣಿಕೆಗೆ ʼಎದ್ದೇಳು ಕರ್ನಾಟಕʼ ಆಗ್ರಹ

ಪತ್ರಿಕಾಗೋಷ್ಠಿಯಲ್ಲಿ ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಕರ್ನಾಟಕ ಪೀಪಲ್ಸ್ ಶಿಕ್ಷಣ ಸಂಸ್ಥೆಯ ಶಾಂತಪ್ಪ ಸೂರನ್, ಶಿಕ್ಷಣ ತಜ್ಞರಾದ ಪ್ರತಾಪಸಿಂಗ್ ತಿವಾರಿ, ಡಾ.ಎಸ್.ಎ.ಖಾದ್ರಿ, ಡಾ. ಬಸವರಾಜ ಕುಮನೂರ, ಪ್ರೊ.ಆರ್.ಕೆ.ಹುಡಗಿ, ಡಾ.ಬಿ.ಸಿ.ಗುಳಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X