ಬಿಹಾರ: ತೀವ್ರ ಬಿಸಿಲಿನಿಂದ ನಾಲ್ವರು ಚುನಾವಣಾಧಿಕಾರಿಗಳು ಮೃತ

Date:

Advertisements

ಬಿಹಾರ ದ ಆರಾದಲ್ಲಿ ತೀವ್ರ ಬಿಸಿಲಿನ ತಾಪಕ್ಕೆ ನಾಲ್ವರು ಚುನಾವಣಾಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ಬೋಜ್‌ಪುರ್‌ ಜಿಲ್ಲಾಧಿಕಾರಿ ಮಹೇಂದ್ರ ಕುಮಾರ್‌ ತಿಳಿಸಿದ್ದಾರೆ.

ಸಾಕಷ್ಟು ಸೌಲಭ್ಯಗಳನ್ನು ಒದಗಿಸಿದ ಹೊರತಾಗಿಯೂ ಈ ಆಘಾತಕಾರಿ ಘಟನೆ ಸಂಭವಿಸಿದೆ ಎಂದು ಕುಮಾರ್ ಅವರು ತಿಳಿಸಿದ್ದಾರೆ.

“ಇಲ್ಲಿಯವರೆಗೂ, ನಾಲ್ವರು ಚುನಾವಣಾಧಿಕಾರಿಗಳು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು, ವಾಸ್ತವ್ಯ ಹಾಗೂ ಇತರ ಸೌಲಭ್ಯಗಳನ್ನು ಪ್ರತಿ ರವಾನೆ ಕೇಂದ್ರಗಳಲ್ಲಿ ಲಭ್ಯವಿರಿಸಲಾಗಿದೆ. ಆದರೂ ಅನಿರೀಕ್ಷಿತ ಘಟನೆ ಸಂಭವಿಸಿದೆ” ಎಂದು ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

ಉತ್ತರ ಭಾರತದ 37 ನಗರಗಳಲ್ಲಿ ಕಳೆದ 2 ದಿನಗಳಿಂದ ತೀವ್ರ ಬಿಸಿಲನ ತಾಪ ಸಂಭವಿಸಿದ್ದು,10 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನವದೆಹಲಿಯಲ್ಲಿ ಬುಧವಾರ ದಾಖಲೆ ಮಟ್ಟದಲ್ಲಿ 52.3 ಡಿಗ್ರಿ ಸೆಲ್ಷಿಯಸ್‌ ತಾಪಮಾನ ದಾಖಲಾಗಿತ್ತು.

ಜೂನ್‌ 1 ರಂದು ನಡೆಯುವ ಏಳನೇ ಹಾಗೂ ಅಂತಿಮ ಲೋಕಸಭಾ ಚುನಾವಣೆಯಲ್ಲಿ ಬಿಹಾರದ 8 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಇದರೊಂದಿಗೆ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 57 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X