ಮಹಿಳಾ ಅಧಿಕಾರಿಗಳಿಂದಲೇ ಪ್ರಜ್ವಲ್‌ ರೇವಣ್ಣ ಬಂಧನ, ಸಂತ್ರಸ್ತೆಯರಲ್ಲಿ ಧೈರ್ಯ ತುಂಬಲು ಈ ಕ್ರಮ

Date:

Advertisements

ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪದಡಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿರುವುದು ಮಹಿಳಾ ಅಧಿಕಾರಿಗಳು ಎಂಬುದು ವಿಶೇಷ.

ಪ್ರಜ್ವಲ್‌ ರೇವಣ್ಣಗೆ ಸ್ಪಷ್ಟ ಸಂದೇಶ ತಿಳಿಸಲೆಂದೇ ಎಸ್‌ಐಟಿ ಅಧಿಕಾರಿಗಳು ಮಹಿಳಾ ಪೊಲೀಸರನ್ನೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ರಾತ್ರಿ ಕಳುಹಿಸಿ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಿದ್ದಾರೆ.

ಪ್ರಜ್ವಲ್‌ ಬಂಧಿಸಲು ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ಸೇರಿದಂತೆ ಐದು ಮಂದಿ ಮಹಿಳಾ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಸಂತ್ರಸ್ತೆಯರಲ್ಲಿ ಧೈರ್ಯ ತುಂಬಲು ಈ ಕ್ರಮಕೈಗೊಳ್ಳಲಾಗಿದೆ ಎನ್ನಲಾಗಿದೆ.

Advertisements

ಎಪ್ರಿಲ್ 28ರಂದು ದೇಶಬಿಟ್ಟು ಪಲಾಯನಗೈದಿದ್ದ ಪ್ರಜ್ವಲ್ 35 ದಿನಗಳ ಬಳಿಕ ಜರ್ಮನಿಯಿಂದ ನಗರದ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗುರುವಾರ ತಡರಾತ್ರಿ 12.50 ಗಂಟೆಗೆ ಸುಮಾರಿಗೆ ಬಂದಿಳಿದಿದ್ದರು. ಕೂಡಲೇ ಇಮಿಗ್ರೇಶನ್ ಅಧಿಕಾರಿಗಳು ಮತ್ತು ಸಿಐಎಸ್‌ಎಫ್ ಪಡೆಗಳು ಆತನನ್ನು ಬಂಧಿಸಿ ವಿಶೇಷ ತನಿಖಾ ತಂಡಕ್ಕೆ ಒಪ್ಪಿಸಿದೆ.

ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೆ ಎಸ್‌ಐಟಿ ತಂಡದಲ್ಲಿರುವ ಐಪಿಎಸ್ ಅಧಿಕಾರಿಗಳಾದ ಸುಮನ್ ಪನ್ನೇಕರ್ ಹಾಗೂ ಸೀಮಾ ಲಾಟ್ಕರ್ ಅವರ ಮುಂದಾಳತ್ವದ ಮಹಿಳಾ ತಂಡ ಅರೆಸ್ಟ್ ವಾರೆಂಟ್ ನೀಡಿ ಬಂಧಿಸಿತು. ನಂತರ ಮಹಿಳಾ ಪೊಲೀಸರು ತಮ್ಮ ವಾಹನದಲ್ಲಿ ಎಸ್‌ಐಟಿ ಕಚೇರಿಗೆ ಪ್ರಜ್ವಲ್‌ ರೇವಣ್ಣ ಅವರನ್ನು ಕರೆತಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X