ರಾತ್ರಿ ಊಟ ನೀಡಲು ನಿರಾಕರಿಸಿದ್ದಕ್ಕೆ ಪತ್ನಿಯ ಶಿರಚ್ಛೇದ ಮಾಡಿದ್ದು, ಆಕೆಯ ದೇಹದ ಚರ್ಮ ಸುಲಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪತ್ನಿಯನ್ನು ಕೊಲೆ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ ಹುಲಿಯೂರುದುರ್ಗ ಗ್ರಾಮದ ಪುಷ್ಪಾ(35) ಅವರ ಮೃತದೇಹ ಅವರು ವಾಸಿಸುತ್ತಿದ್ದ ಮನೆಯ ಅಡುಗೆಮನೆಯಲ್ಲಿ ಪತ್ತೆಯಾಗಿದೆ. ಪುಷ್ಪಾ ಮತ್ತು ಶಿವರಾಮ್ ದಂಪತಿಗೆ ಮದುವೆಯಾಗಿ 10 ವರ್ಷಗಳಾಗಿದ್ದು, ಎಂಟು ವರ್ಷದ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
“ಮರಗೆಲಸದಲ್ಲಿ ಕೆಲಸ ಮಾಡುತ್ತಿದ್ದ ಶಿವರಾಮ್ ಸೋಮವಾರ ರಾತ್ರಿ ಕೆಲಸದಿಂದ ಮನೆಗೆ ಹಿಂದಿರುಗಿದಾಗ ಅವರಿಬ್ಬರ ನಡುವೆ ಜಗಳವಾಗಿದೆ. ಶಿವರಾಂ ಕೆಲಸದ ವಿಚಾರವಾಗಿ ದಂಪತಿ ಆಗಾಗ್ಗೆ ಜಗಳವಾಡುತ್ತಿದ್ದರೆಂದು ತಿಳಿದುಬಂದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
“ಜಗಳ ಹೆಚ್ಚಾಗುತ್ತಿದ್ದಂತೆ, ಪುಷ್ಪಾ ಅವನಿಗೆ ಊಟ ಬಡಿಸಲು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಶಿವರಾಮ್ ಆಕೆಯನ್ನು ಮಾರಕಾಸ್ತ್ರದಿಂದ ಇರಿದು ಶಿರಚ್ಛೇದ ಮಾಡಿದ್ದಾನೆ. ಬಳಿಕ ಆಕೆಯ ದೇಹದ ಚರ್ಮವನ್ನು ಸುಲಿದು ತುಂಡುತುಂಡಾಗಿ ಕತ್ತರಿಸುತ್ತಾ ರಾತ್ರಿ ಕಳೆದಿದ್ದಾನೆ. ಕೊಲೆಯ ಸಮಯದಲ್ಲಿ ಮನೆಯಲ್ಲಿದ್ದ ಮಗ ನಿದ್ರೆಯಲ್ಲಿದ್ದನು” ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವಾಟ್ಸಾಪ್ ಗ್ರೂಪ್‌ನಲ್ಲಿ ಸಿಎಂ ನಿಂದನೆ; ಬುದ್ದಿ ಹೇಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
“ವಿಚಾರಣೆ ವೇಳೆ ಆತ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಅವರು ಸಣ್ಣ ಪುಟ್ಟ ಜಗಳಗಳನ್ನು ಮಾಡಿಕೊಳ್ಳುತ್ತಿದ್ದರು. ಮಂಗಳವಾರ, ಅವರು ಅವನ ಕೆಲಸದ ಸಲುವಾಗಿ ಜಗಳವಾಡಿದರು. ಅವನು ತನ್ನ ಹೆಂಡತಿಯನ್ನು ಕೊಂದು ತನ್ನ ಸಹೋಯೋಗಿಗಳಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಅವರು ನಮಗೆ ಮಾಹಿತಿ ತಿಳಿಸಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ತಿಳಿಸಿದ್ದಾರೆ.
