ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನು ಹುದ್ದೆಯಿಂದ ಅನರ್ಹಗೊಳಿಸಿದ ಸರ್ಕಾರ

Date:

Advertisements

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯರನ್ನ ಅನರ್ಹಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ ಶಾಂತಾ ಎ ತಿಮ್ಮಯ್ಯ ಅವರ ಮೇಲಿತ್ತು. ಶುಕ್ರವಾರ ಈ ಸಂಬಂಧ ಅರಣ್ಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಿ.ಎನ್.ಪ್ರವೀಣ್ ಅವರು ಅಧಿಸೂಚನೆ ಹೊರಡಿಸಿದ್ದು, ಮುಂದಿನ ಆದೇಶದವರೆಗೆ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಪಿ.ರವಿ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ನಾಮನಿರ್ದೇಶನ ಮಾಡಿ ಆದೇಶ ಮಾಡಿದ್ದಾರೆ.

ಶಾಂತ್ ತಿಮ್ಮಯ್ಯ ಅವರ ಹುದ್ದೆಯ ಅವಧಿ 2022ರಲ್ಲೇ ಮುಗಿದಿದ್ದು, ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಬಳಿಕ ಕೆಎಸ್‍ಪಿಸಿಬಿ ಅಧ್ಯಕ್ಷ ಸ್ಥಾನದಿಂದ ತಮ್ಮ ಅಧಿಕಾರಾವಧಿ ಮೊಟಕುಗೊಳಿಸಿದ್ದ ಕ್ರಮವನ್ನು ಪ್ರಶ್ನಿಸಿ ಶಾಂತ್ ತಿಮ್ಮಯ್ಯ ಅವರು ಇತ್ತೀಚೆಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.

Advertisements

ಈ ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಸರ್ಕಾರದ ಅಧಿಸೂಚನೆಯನ್ನು ಅಮಾನತ್ತಿನಲ್ಲಿಟ್ಟು ಮಧ್ಯಂತರ ಆದೇಶ ಮಾಡಿ ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿತ್ತು.

Dr. Shanth A. Thimmaiah

ಜಾಗೃತಿ ಕಾರ್ಯಕ್ರಮಗಳ ಹೆಸರಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತಾ ಎ ತಿಮ್ಮಯ್ಯ ಅವರು ಕಾಯ್ದೆಗಳ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರ ನೇಮಿಸಿದ್ದ ತನಿಖಾ ಸಮಿತಿ ವರದಿಯಲ್ಲಿ ಬಯಲಾಗಿತ್ತು.

ಇದನ್ನು ಓದಿದ್ದೀರಾ? ಜೂ.1 | 57 ಲೋಕಸಭಾ ಕ್ಷೇತ್ರಗಳಿಗೆ ಕೊನೆಯ ಹಂತದ ಮತದಾನ; ಪ್ರಧಾನಿ ಮೋದಿ ಸೇರಿ 904 ಅಭ್ಯರ್ಥಿಗಳು ಕಣದಲ್ಲಿ

ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ ಶಾಂತಾ ಎ ತಿಮ್ಮಯ್ಯ ಅವರ ಮೇಲಿತ್ತು. ಕೆಎಸ್​​ಪಿಸಿಬಿಯ ಹಿಂದಿನ ಸದಸ್ಯ ಕಾರ್ಯದರ್ಶಿ ಸೂರಿ ಪಾಯಲ್ ಈ ಸಂಬಂಧ ಸರ್ಕಾರಕ್ಕೆ ದೂರು ನೀಡಿದ್ದರು. ದೂರಿನನ್ವಯ ಸರ್ಕಾರ ಸಮಿತಿ ರಚನೆ ಮಾಡಿ ತನಿಖೆಗೆ ಸೂಚಿಸಿತ್ತು. ತನಿಖೆಯ ವರದಿಯಲ್ಲಿ ಶಾಂತಾ ಎ ತಿಮ್ಮಯ್ಯ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X