ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಹಾಗೂ 185 ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬ್ರಹ್ಮಾಂಡ ಭ್ರಷ್ಟಚಾರ ನಡೆದಿರುವುದು ಅತ್ಯಂತ ಸ್ಪಷ್ಟವಾಗಿದ್ದರೂ ಸಚಿವ ಬಿ ನಾಗೇಂದ್ರ, ನಿಗಮದ ಅಧ್ಯಕ್ಷ ಹಾಗೂ ಭ್ರಷ್ಟ ಅಧಿಕಾರಿಗಳನ್ನು ರಕ್ಷಣೆ ಮಾಡಲು ಹೊರಟಿದೆ ಈ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.
ಎಕ್ಸ್ ತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, “ಸಿಎಂ ಸಿದ್ದರಾಮಯ್ಯ ನವರೇ, ಈ ಹಗರಣದಲ್ಲಿ ದಲಿತರ ದುಡ್ಡು ಲೂಟಿಯಾಗಿರುವುದು ಒಂದು ಕಡೆಯಾದರೆ, ಒಬ್ಬ ಅಮಾಯಕ ಹಾಗೂ ಪ್ರಾಮಾಣಿಕ ಅಧಿಕಾರಿಯ ಬಲಿಯಾಗಿದೆ” ಎಂದಿದ್ದಾರೆ.
“ಹತ್ತಾರು ಕಂಪನಿಗಳಿಗೆ ನೂರಾರು ಕೋಟಿ ಮೌಲ್ಯದ ಅಂತರರಾಜ್ಯ ಹಣ ವರ್ಗಾವಣೆ ನಡೆದರುವ ಈ ಪ್ರಕರಣದ ನ್ಯಾಯಯುತ ಇತ್ಯರ್ಥಕ್ಕೆ ಸಿಬಿಐ ತನಿಖೆಯೊಂದೇ ಮಾರ್ಗ. ಹಗರಣ ಇಷ್ಟು ಗಂಭೀರವಾಗಿದ್ದರೂ ಸಿಐಡಿ ತನಿಖೆ, ಎಸ್ಐಟಿ ತನಿಖೆ ಅಂತ ಕಾಲಹರಣ ಮಾಡಿ, ಕೊನೆಗೆ ಪ್ರಕರಣವನ್ನ ಮುಚ್ಚಿ ಹಾಕುವ ನಿಮ್ಮ ಹುನ್ನಾರವನ್ನ ಅರಿಯದಷ್ಟು ಅಮಾಯಕರಲ್ಲ ಕರ್ನಾಟಕದ ಜನತೆ” ಎಂದು ಕುಟುಕಿದ್ದಾರೆ.
“ನಿಮ್ಮ ನಾಟಕವನ್ನು ಸಾಕು ಮಾಡಿ ಈ ಕೂಡಲೇ ಈ ಪ್ರಕರಣವನ್ನ ಸಿಬಿಐಗೆ ವಹಿಸಿ. ಮೃತ ಅಧಿಕಾರಿಯ ಕುಟುಂಬಕ್ಕೆ, ಪರಿಶಿಷ್ಟ ಪಂಗಡ ಸುದಾಯಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿ. ಭ್ರಷ್ಟ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟದಿಂದ ಕಿತ್ತೊಗೆದು ನಿಮ್ಮ ಸರ್ಕಾರದ ಮರ್ಯಾದೆ ಉಳಿಸಿಕೊಳ್ಳಿ” ಎಂದು ಎಚ್ಚರಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಹಾಗು 185 ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬ್ರಹ್ಮಾಂಡ ಭ್ರಷ್ಟಚಾರ ನಡೆದಿರುವುದು ಅತ್ಯಂತ ಸ್ಪಷ್ಟವಾಗಿದ್ದರೂ ಸಚಿವ @BNagendraINC, ನಿಗಮದ ಅಧ್ಯಕ್ಷ ಹಾಗು ಭ್ರಷ್ಟ ಅಧಿಕಾರಿಗಳನ್ನು ರಕ್ಷಣೆ ಮಾಡಲು ಹೊರಟಿದೆ ಈ ಲಜ್ಜೆಗೆಟ್ಟ @INCKarnataka ಸರ್ಕಾರ.
ಸಿಎಂ @siddaramaiah ನವರೇ, ಈ… pic.twitter.com/Vi2ucTBUdv
— R. Ashoka (ಮೋದಿ ಅವರ ಕುಟುಂಬ) (@RAshokaBJP) June 1, 2024
