ರಾಹುಲ್ ಗಾಂಧಿ ಬಂದ ಕಡೆ ಕಾಂಗ್ರೆಸ್‌ ಗೆಲ್ಲದಿದ್ದರೆ ನನ್ನ ಹೆಸರು ಬದಲಾಯಿಸುವೆ: ನಲಪಾಡ್ ಸವಾಲ್

Date:

Advertisements

ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಎಲ್ಲೆಲ್ಲಿ ಬರುತ್ತಾರೋ ಅಲ್ಲಿ ದೊಡ್ಡಮಟ್ಟದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಒಂದು ವೇಳೆ ಗೆಲ್ಲದಿದ್ದರೆ ನನ್ನ ಹೆಸರು ಬದಲಾಯಿಸಿಕೊಳ್ಳುತ್ತೇನೆ ಎಂದು ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್‌ ಸವಾಲು ಹಾಕಿದರು.

ಗದಗನಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಕಾಲಿಟ್ಟಲ್ಲಿ ಬಿಜೆಪಿಗೆ ಗೆಲುವು ಎಂಬ ಲೇವಡಿ ವಿಚಾರವಾಗಿ ನರಗುಂದ ಶಾಸಕ ಸಿ ಸಿ ಪಾಟೀಲ್‌ಗೆ ತಿರುಗೇಟು ನೀಡಿದರು.

“ನಮ್ಮ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ಸಿನ ಶಕ್ತಿ. ಇದು ಸಚಿವ ಸಿ ಸಿ ಪಾಟೀಲ್ ಸಾಹೇಬರಿಗೆ ಗೊತ್ತಿಲ್ಲ ಅನಿಸುತ್ತದೆ. ನೂರಕ್ಕೆ ನೂರರಷ್ಟು ಈ ಬಾರಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ” ಎಂದರು.

Advertisements

ಯೂತ್ ಕಾಂಗ್ರೆಸ್​ನಿಂದ ಟಿಕೆಟ್ ಕೊಡಿಸುವಲ್ಲಿ ನಲಪಾಡ್ ವಿಫಲ ಎಂಬ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, “ವಿನೋದ್ ಅಸೂಟಿಗೆ ನಮ್ಮ ಸರ್ಕಾರದಲ್ಲಿ ಚೇರ್ಮನ್ ಸೀಟ್ ಕೊಡುವ ಭರವಸೆ ನೀಡಲಾಗಿದೆ. ಬೇರೆ ಕಡೆ ಗೆಲ್ಲುವ ಅವಕಾಶ ಇದ್ದಲ್ಲಿ ಯುವಕರಿಗೆ ಟಿಕೆಟ್ ಕೊಡಲಾಗಿದೆ” ಎಂದು ಹೇಳಿದರು.

“ಜಗದೀಶ್ ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಮತ್ತಷ್ಟು ಬಲ ಬಂದಿದೆ. 224 ಕ್ಷೇತ್ರಗಳಲ್ಲಿ ಒಬ್ಬ ಮುಸ್ಲಿಂರಿಗೂ ಬಿಜೆಪಿ ಟಿಕೆಟ್ ಕೊಟ್ಟಿಲ್ಲ. ಬಿಜೆಪಿಯಲ್ಲಿ ಯಾರೂ ಮುಸಲ್ಮಾನರು ಇಲ್ವಾ ಅಂತ ಪ್ರಶ್ನೆ ಮಾಡಿದ್ದು, ಈ ಬಗ್ಗೆ ಕಮಲ ಪಾಳಯದಲ್ಲಿ ಯಾರೂ ಮಾತನಾಡೋದಿಲ್ಲ” ಎಂದು ಕಿಡಿಕಾರದರು.

“ರಾಹುಲ್ ಗಾಂಧಿ ಬಂದು ಹೋಗುವುದರಿಂದ ನಮ್ಮ ಬಲ ಹೆಚ್ಚುತ್ತದೆ. ನಮ್ಮ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಬಂದು ಹೋದ ಮೇಲೆ ಹಲವಾರು ಗೆಲುವು ಆಗಿವೆ. ಈ ರೀತಿ ಅಪಪ್ರಚಾರ ಮಾಡುತ್ತಿರುವ ಕೆಲವು ಶಕ್ತಿಗಳು ಇವೆ. ಆ ಶಕ್ತಿಗಳಿಗೆ ಮುಂದಿನ ದಿನಗಳಲ್ಲಿ ನಿರಾಶೆ ಉಂಟಾಗುತ್ತದೆ” ಎಂದು ಗದಗ ಕಾಂಗ್ರೆಸ್ ಅಭ್ಯರ್ಥಿ ಎಚ್​ ಕೆ ಪಾಟೀಲ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X