ಬಿಜೆಪಿ ವಿರುದ್ಧ ಶೇ.40 ಕಮಿಷನ್ ಆರೋಪ: ಸಿಎಂ, ಡಿಸಿಎಂಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

Date:

Advertisements

ಬಿಜೆಪಿ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶನಿವಾರ ಜಾಮೀನು ಮಂಜೂರು ಮಾಡಿದೆ.

ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ ಎಸ್‌ ಕೇಶವ ಪ್ರಸಾದ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶರಾದ ಕೆ ಎನ್‌ ಶಿವಕುಮಾರ್‌ ವಿಚಾರಣೆ ನಡೆಸಿದರು.

Advertisements

ಕಳೆದ ವಿಚಾರಣೆಯಲ್ಲಿ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಇದರ ಭಾಗವಾಗಿ ಉಭಯ ನಾಯಕರು ಶನಿವಾರ(ಜೂನ್ 1) ನ್ಯಾಯಾಲಯದ ಮುಂದೆ ಖುದ್ದು ಹಾಜರಾದರು. ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ಹಾಜರಾತಿ ದಾಖಲಿಸಿಕೊಂಡ ನ್ಯಾಯಾಲಯವು, ತಲಾ ಐದು ಸಾವಿರ ರೂಪಾಯಿ ನಗದು ಬಾಂಡ್‌ ಪಡೆದು ಅವರಿಗೆ ಜಾಮೀನು ಮಂಜೂರು ಮಾಡಿತು.

ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರ ಅನುಪಸ್ಥಿತಿಗೆ ಸಂಬಂಧಿಸಿದಂತೆ ಅವರ ಪರವಾಗಿ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎಸ್‌ ಎ ಅಹ್ಮದ್‌, ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಮತ್ತು ವಕೀಲ ನಿಶಿತ್‌ ಕುಮಾರ್‌ ಶೆಟ್ಟಿ ಅವರು, “ಈ ಬಾರಿ ರಾಹುಲ್‌ ಗಾಂಧಿ ಅವರ ಹಾಜರಾತಿಗೆ ವಿನಾಯಿತಿ ನೀಡಬೇಕು. ಎರಡು ಬಾರಿ ವಿನಾಯಿತಿ ನೀಡಲು ಅವಕಾಶವಿದೆ. ಪ್ರಕರಣವನ್ನು ಜೂನ್‌ 7ಕ್ಕೆ ಮುಂದೂಡಬೇಕು” ಎಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ಬಿಜೆಪಿ ಪರ ವಕೀಲ ವಿನೋದ್‌ ಕುಮಾರ್‌, “ಒಮ್ಮೆ ಮಾತ್ರ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದಾಗ ಹಾಜರಾಗದಿದ್ದರೆ ವಿನಾಯಿತಿ ನೀಡಬಹುದು. ಸಿಆರ್‌ಪಿಸಿ ಸೆಕ್ಷನ್‌ 205ರ ಅಡಿ ಅದಕ್ಕೆ ಅವಕಾಶವಿದೆ. ಎರಡೆರಡು ಬಾರಿ ವಿನಾಯಿತಿ ಇರುವುದಿಲ್ಲ. ನ್ಯಾಯಾಲಯದ ಮುಂದೆ ಎಲ್ಲರೂ ಸಮಾನರು. ರಾಹುಲ್‌ ಅವರು ನ್ಯಾಯಾಲಯಕ್ಕೆ ಹಾಜರಾಗದೇ ಇರುವುದರಿಂದ ಅವರ ವಿರುದ್ಧ ಜಾಮೀನುರಹಿತ ವಾರೆಂಟ್‌ ಜಾರಿ ಮಾಡಬೇಕು” ಎಂದರು.

ಈ ಸಂಬಂಧ ವಿಸ್ತೃತ ವಾದ ಆಲಿಸಿ, ಆದೇಶ ಪ್ರಕಟಿಸುವುದಾಗಿ ಹೇಳಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿತು.

ಏನಿದು ಪ್ರಕರಣ?

ಕಳೆದ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಭ್ರಷ್ಟಾಚಾರವನ್ನು ಪ್ರಧಾನ ಅಸ್ತ್ರವಾಗಿಸಿದ್ದ ಕಾಂಗ್ರೆಸ್‌, 2023ರ ಮೇ 5ರಂದು ಎಲ್ಲ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ಭ್ರಷ್ಟಾಚಾರ ದರ ಪಟ್ಟಿ ಎಂಬ ಹೆಸರಿನ ಅಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿ ಜಾಹೀರಾತು ನೀಡಿತ್ತು.

ಅಲ್ಲದೇ, ಕೋವಿಡ್‌ ಸಾಮಗ್ರಿಗಳ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳಿಗೆ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ ಶೇ 25-30% ಕಮಿಷನ್‌ ಪಡೆಯಲಾಗುತ್ತಿದೆ. ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕೊನೆಯಲ್ಲಿ ಶೇ. 40 ಕಮಿಷನ್ ನ (ಬಿಜೆಪಿ) ಸರ್ಕಾರವು ರೂ.1.5 ಲಕ್ಷ ಕೋಟಿಯನ್ನು ಕಳೆದ ನಾಲ್ಕು ವರ್ಷಗಳಲ್ಲಿ ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಇದರ ವಿರುದ್ಧ ದೂರು ದಾಖಲಿಸಿದ್ದ ಬಿಜೆಪಿ ಮುಖಂಡ ಬಿ ಎಸ್‌ ಕೇಶವ ಪ್ರಸಾದ್‌ , “ಡಬಲ್‌ ಎಂಜಿನ್‌ ಸರ್ಕಾರಕ್ಕೆ ಬದಲಾಗಿ ಟ್ರಬಲ್‌ ಎಂಜಿನ್‌ ಸರ್ಕಾರ ಎಂದು ಹೇಳುವ ಮೂಲಕ ಬಿಜೆಪಿಯ ವರ್ಚಸ್ಸಿಗೆ ಕಾಂಗ್ರೆಸ್‌ ಹಾನಿ ಮಾಡಿದೆ. ಚುನಾವಣೆಯಲ್ಲಿ ಗೆಲುವಿಗೆ ಅಡ್ಡಿಪಡಿಸಲಾಗಿದೆ. ಕೊನೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ ಎಂದು ಆರೋಪಿಗಳು ಕೇಳಿದ್ದಾರೆ. ಸುಳ್ಳು ಜಾಹೀರಾತು ನೀಡಲು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಹಾಗೂ ರಾಹುಲ್‌ ಗಾಂಧಿ ಅವರು ನೇರ ಕಾರಣವಾಗಿದ್ದಾರೆ” ಎಂದು ಆರೋಪಿಸಿ, ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ವಾಲ್ಮೀಕಿ ನಿಗಮ ಅಕ್ರಮ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ರಾಹುಲ್‌ ಗಾಧಿ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ಸುಳ್ಳು ಜಾಹೀರಾತನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿಗೆ ಮಾನಹಾನಿ ಮಾಡುವ ಪ್ರಯತ್ನ ಮಾಡಲಾಗಿದೆ. ಹೀಗಾಗಿ, ಕಾಂಗ್ರೆಸ್‌, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಮತ್ತು ರಾಹುಲ್‌ ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿಯು ಖಾಸಗಿ ದೂರು ದಾಖಲಿಸಿತ್ತು. ಇದರ ಸಂಜ್ಞೆ ಪರಿಗಣಿಸಿದ್ದ ವಿಶೇಷ ನ್ಯಾಯಾಲಯವು ಫೆಬ್ರವರಿ 23ರಂದು ಮಾನಹಾನಿ ದಾವೆ ದಾಖಲಿಸಲು ಆದೇಶಿಸಿ, ಆರೋಪಿಗಳಿಗೆ ಸಮನ್ಸ್‌ ಜಾರಿ ಮಾಡಿತ್ತು. ಆದರೆ, ಸಮನ್ಸ್‌ ಅನ್ನು ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ಅವರಿಗೆ ತಲುಪಿಸದ ಹಿನ್ನೆಲೆಯಲ್ಲಿ ಮರು ಜಾರಿ ಮಾಡಲಾಗಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X