ಏಳನೇ ಮತ್ತು ಅಂತಿಮ ಹಂತದ ಮತದಾನ ಇಂದು ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ 49.68 ಶೇಕಡಾದಷ್ಟು ಮತದಾನ ನಡೆದಿರುವುದಾಗಿ ಚುನಾವಣಾ ಆಯೋಗವು ಮಾಹಿತಿ ನೀಡಿದೆ.
ಮಧ್ಯಾಹ್ನ 3 ಗಂಟೆಗೆ ಏಳು ರಾಜ್ಯಗಳು ಮತ್ತು ಚಂಡೀಗಢದಲ್ಲಿ 49.68% ಮತದಾನವಾಗಿದೆ. ಬಿಹಾರದಲ್ಲಿ 42.95ಕ್ಕಿಂತ ಕಡಿಮೆ ಮತದಾನವಾಗಿದ್ದರೆ, ಹಿಮಾಚಲ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಶೇ. 58% ರಷ್ಟು ಅತಿ ಹೆಚ್ಚು ಮತದಾನವಾಗಿರುವುದಾಗಿ ವರದಿಯಾಗಿದೆ.
ಉಳಿದಂತೆ ಒಡಿಶಾದಲ್ಲಿ 49.77 ಶೇ, ಪಂಜಾಬ್‌ನಲ್ಲಿ 43 ಶೇ. ಮತದಾನ ನಡೆದಿರುವುದಾಗಿ ವರದಿಯಾಗಿದೆ. ಅಂತಿಮ ಹಂತದಲ್ಲಿ ಒಟ್ಟು ಏಳು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಚಂಡೀಗಢ ಸೇರಿದಂತೆ 57 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಕೊನೆಯ ಹಂತದಲ್ಲಿ ಸ್ಪರ್ಧಿಸುತ್ತಿರುವ ಪ್ರಮುಖ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ.
ಪಂಜಾಬ್‌ನ 13 ಕ್ಷೇತ್ರ, ಹಿಮಾಚಲ ಪ್ರದೇಶದ 4, ಉತ್ತರ ಪ್ರದೇಶದ 13, ಪಶ್ಚಿಮ ಬಂಗಾಳದ 9, ಬಿಹಾರದ 8 ಹಾಗೂ ಒಡಿಶಾದ 6, ಜಾರ್ಖಂಡ್‌ನ 3 ಕ್ಷೇತ್ರಗಳಿಗೆ ಮತದಾನ ನಡೆಯುತ್ತಲಿದೆ.
ಇದನ್ನು ಓದಿದ್ದೀರಾ? 7ನೇ ಹಂತದ ಮತದಾನ | ಪಶ್ಚಿಮ ಬಂಗಾಳದ ಹಲವೆಡೆ ಹಿಂಸಾಚಾರ; ಇವಿಎಂಗಳನ್ನು ಕೆರೆಗೆ ಎಸೆದ ಗುಂಪು
ವಾರಣಾಸಿಯಿಂದ ಸ್ಪರ್ಧಿಸುತ್ತಿರುವ ಪ್ರಧಾನಿ ಮೋದಿಯ ಹೊರತಾಗಿ , ಹಿಮಾಚಲ ಪ್ರದೇಶದ ಹಮೀರ್‌ಪುರದಿಂದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಬಿಹಾರದ ಪಾಟ್ನಾ ಸಾಹಿಬ್‌ನಿಂದ ರವಿಶಂಕರ್ ಪ್ರಸಾದ್ ಮತ್ತು ಹಿಮಾಚಲ ಪ್ರದೇಶದ ಮಂಡಿಯಿಂದ ನಟಿ ಕಂಗನಾ ರಣಾವತ್ ಅಭ್ಯರ್ಥಿಗಳು ಸೇರಿದ್ದಾರೆ.
ಕಾಂಗ್ರೆಸ್‌ನ ಮನೀಶ್ ತಿವಾರಿ ಚಂಡೀಗಢದಿಂದ ಸ್ಪರ್ಧಿಸಿದ್ದರೆ, ವಿಕ್ರಮಾದಿತ್ಯ ಸಿಂಗ್ ಹಿಮಾಚಲ ಪ್ರದೇಶದ ಮಂಡಿಯಿಂದ ಮತ್ತು ಅಜಯ್ ರಾಯ್ ವಾರಣಾಸಿಯಿಂದ ಕಣದಲ್ಲಿದ್ದಾರೆ. ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಕೊನೆಯ ಹಂತದಲ್ಲಿ ಒಟ್ಟು 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೂನ್ 4ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
