ವಿಧಾನಸಭೆ ಚುನಾವಣೆ| ಅರುಣಾಚಲ ಪ್ರದೇಶ, ಸಿಕ್ಕಿಂನಲ್ಲಿ ಮತ ಎಣಿಕೆ ಆರಂಭ

Date:

Advertisements

ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭಾನುವಾರ (ಜೂನ್ 2) ಆರಂಭವಾಗಿದ್ದು, ಎರಡು ರಾಜ್ಯಗಳಲ್ಲಿ ಯಾವ ಪಕ್ಷ ಗದ್ದುಗೆ ಹಿಡಿಯಲಿದೆ ಎಂಬುವುದು ಇಂದು ತಿಳಿಯಲಿದೆ.

ಏಪ್ರಿಲ್ 19 ರಂದು ಅರುಣಾಚಲ ಪ್ರದೇಶದ 60 ವಿಧಾನಸಭೆ ಕ್ಷೇತ್ರಗಳಿಗೆ ಮತ್ತು ಸಿಕ್ಕಿಂನ 32 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆದಿದೆ. ಈ ಹಿಂದೆ ಎರಡು ರಾಜ್ಯಗಳ ಮತ ಎಣಿಕೆಯು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುವ ದಿನವಾದ ಜೂನ್ 4ರಂದು ನಡೆಯಬೇಕಿತ್ತು.

ಇದನ್ನು ಓದಿದ್ದೀರಾ?  ಅರುಣಾಚಲ ಪ್ರದೇಶ, ಸಿಕ್ಕಿಂ ಚುನಾವಣಾ ಫಲಿತಾಂಶ ದಿನಾಂಕ ಬದಲಾವಣೆ

Advertisements

ಆದರೆ ಶಾಸಕಾಂಗ ಸಭೆಗಳ ಅವಧಿ ಜೂನ್ 2ರಂದು ಕೊನೆಗೊಳ್ಳುವ ಕಾರಣದಿಂದಾಗಿ ಬಳಿಕ ಈ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆಯನ್ನು ಭಾನುವಾರವೇ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ.

ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದರೆ, ಸಿಕ್ಕಿಂನಲ್ಲಿ ಎಸ್‌ಕೆಎಂ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಅರುಣಾಚಲ ಪ್ರದೇಶದಲ್ಲಿ 50 ಸ್ಥಾನಗಳಿಗೆ ಇಂದು ಫಲಿತಾಂಶ ಪ್ರಕಟವಾಗಲಿದೆ. ಆಡಳಿತಾರೂಢ ಬಿಜೆಪಿ ಈಗಾಗಲೇ ಹತ್ತು ವಿಧಾನಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದೆ. ಅರುಣಾಚಲ ಪ್ರದೇಶ ವಿಧಾನಸಭೆಯ ಎಲ್ಲಾ 60 ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಕಣದಲ್ಲಿದ್ದು, ಕಾಂಗ್ರೆಸ್ 34 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

ಸಿಕ್ಕಿಂ 32 ವಿಧಾನಸಭೆ ಸ್ಥಾನಗಳನ್ನು ಹೊಂದಿದೆ. ಸರ್ಕಾರ ರಚಿಸಲು, ಪಕ್ಷ ಅಥವಾ ಒಕ್ಕೂಟಕ್ಕೆ ಕನಿಷ್ಠ 17 ಸ್ಥಾನಗಳು ಬೇಕಾಗುತ್ತವೆ. ಸಿಕ್ಕಿಂ ಜನತೆ ಪಕ್ಷಕ್ಕೆ ಮತ್ತೊಂದು ಅವಧಿ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಪಿಎಸ್ ತಮಾಂಗ್ ಹೇಳಿದ್ದಾರೆ.

ಸಿಕ್ಕಿಂನಲ್ಲಿ ವಿಧಾನಸಭೆ ಚುನಾವಣೆಯಲ್ಲಿ 4,64 ಲಕ್ಷ ಮತದಾರರ ಪೈಕಿ ಶೇಕಡ 79.77ರಷ್ಟು ಮತದಾರರು ಮತದಾನ ಮಾಡಿದ್ದಾರೆ. ಇದೇ ವೇಳೆ ನಡೆದ ಲೋಕಸಭೆ ಚುನಾವಣೆಯಲ್ಲಿ ಶೇಕಡ 80.03ರಷ್ಟು ಮತದಾನವಾಗಿದೆ. ಎಸ್‌ಕೆಎಂ ಮತ್ತು ಎಸ್‌ಡಿಎಫ್‌ ನಡುವೆ ಸಿಕ್ಕಿಂನಲ್ಲಿ ಸ್ಪರ್ಧೆಯಿದೆ. ಬಿಜೆಪಿ 31 ಮತ್ತು ಕಾಂಗ್ರೆಸ್ 12 ಸ್ಥಾನಗಳಲ್ಲಿ ಸ್ಪರ್ಧಿಸಿವೆ.

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ| ಅರುಣಾಚಲ ಬಿಜೆಪಿ ನಾಯಕನನ್ನು ಅಪಹರಿಸಿದ ಬಂಡುಕೋರರು!

ಅರುಣಾಚಲ ಪ್ರದೇಶದಲ್ಲಿ, 25 ಜಿಲ್ಲೆಗಳಲ್ಲಿ 24 ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಈ ಕೇಂದ್ರಗಳಲ್ಲಿ ಮತ್ತು ಸುತ್ತಮುತ್ತ ಮೂರು ಹಂತದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಮತ ಎಣಿಕೆಗೆ 2,000ಕ್ಕೂ ಹೆಚ್ಚು ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ಚುನಾವಣಾ ಆಯೋಗವು 27 ಎಣಿಕೆ ವೀಕ್ಷಕರನ್ನು ನೇಮಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X