ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 7 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದ್ದು ಇದರ ಆಧಾರದ ಮೇಲೆ ಒಟ್ಟು 11ರಲ್ಲಿ ಏಳು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವ ಅವಕಾಶವಿದ್ದು ಆ ಸ್ಥಾನಗಳಿಗೆ ಇದೀಗ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ಹೊರಗಿಟ್ಟು ಸಮಾನತೆ ಬಗ್ಗೆ ಮಾತನಾಡುವುದಕ್ಕೆ ಅರ್ಥವಿದೆಯೇ?
ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಇನ್ನು ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನ ಆಯ್ಕೆ ಮಾಡಿದೆ.
ಉಪಚುನಾವಣೆಗೂ ಅಭ್ಯರ್ಥಿ ಘೋಷಣೆ
ಕಾಂಗ್ರೆಸ್ ಏಳು ಪರಿಷತ್ ಸ್ಥಾನಗಳಿಗೆ ಮಾತ್ರವಲ್ಲದೇ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೂ ಅಭ್ಯರ್ಥಿಯನ್ನು ಘೋಷಿಸಿದೆ. ಮುಂಬರುವ ಉಪಚುನಾವಣೆಗೆ ಮಾಜಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಅವರನ್ನು ಆಯ್ಕೆ ಮಾಡಿದೆ.
