ಮತ ಎಣಿಕೆ ಮುನ್ನ ಚುನಾವಣಾ ಆಯೋಗಕ್ಕೆ ಡಾ. ಸಿ ಎನ್‌ ಮಂಜುನಾಥ್ ಪತ್ರ

Date:

Advertisements

ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜೂ.4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. ಇನ್ನು ಫಲಿತಾಂಶ ಪ್ರಕಟವಾಗುವ ಮೊದಲೇ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್​ ಮಂಜುನಾಥ್ ಚುನಾವಣಾ ಆಯೋಗಕ್ಕೆ ಒಂದು ಮಹತ್ವದ ಪತ್ರ ಬರೆದಿದ್ದು, ಮತ‌ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಹಾಲಿ ಸಂಸದ ಡಿ ಕೆ ಸುರೇಶ್‌ ಅವರನ್ನು ಸೋಲಿಸಲೇಬೇಕು ಎಂದು ಮೈತ್ರಿ ನಾಯಕರು ಹೃದ್ರೋಗ ತಜ್ಞ ವೈದ್ಯ ಡಾ. ಸಿ ಎನ್​​ ಮಂಜುನಾಥ್​ ಅವರನ್ನು ಕಣಕ್ಕಿಳಿಸಿದ್ದಾರೆ. ಹೀಗಾಗಿ ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಈಗಾಗಲೇ ಏಪ್ರಿಲ್ 26ರಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಚುನಾವಣೆ ನಡೆದಿದ್ದು, ಇದೀಗ ಯಾರು ಗೆಲ್ಲಲಿದ್ದಾರೆ ಎನ್ನುವ ಲೆಕ್ಕಾಚಾರಗಳು ಶುರುವಾಗಿವೆ.

ಇದರ ಮಧ್ಯ ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಹೊರಬಂದಿದ್ದು, ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ. ಅದರಲ್ಲೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ಹೊರಗಿಟ್ಟು ಸಮಾನತೆ ಬಗ್ಗೆ ಮಾತನಾಡುವುದಕ್ಕೆ ಅರ್ಥವಿದೆಯೇ?

ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಮಂಜುನಾಥ್ ಸೇರಿದಂತೆ ಬಿಜೆಪಿ, ಜೆಡಿಎಸ್​ ನಾಯಕರಲ್ಲಿನ ಸಂತಸ ಮನೆ ಮಾಡಿದ್ದು, ಫಲಿತಾಂಶಕ್ಕಾಗಿ ಕಾತರರಿಂದ ಕಾಯುತ್ತಿದ್ದಾರೆ. ಹೀಗಾಗಿ ಮತ ಎಣಿಕೆ ಕೇಂದ್ರದಲ್ಲಿ ಯಾವುದೇ ಗೊಂದಲ, ಗಲಾಟೆಗಳು ಆಗಬಾರದು ಎಂದು ಡಾ ಮಂಜುನಾಥ್​ ಅವರು ಮುಂಜಾಗ್ರತಾವಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಮತ‌ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಹೆಚ್ಚುವರಿ ಭದ್ರತಾ ಪಡೆಗಳ ನಿಯೋಜನೆ ಮಾಡಬೇಕು. ಎಣಿಕೆ ಕೇಂದ್ರದ ಸುತ್ತಲೂ ಹೆಚ್ಚುವರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳ ನಿಯೋಜನೆ ಮಾಡಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು. ಯಾವುದೇ ವ್ಯಕ್ತಿಯ ಅನಧಿಕೃತ ಪ್ರವೇಶ ಅಥವಾ ಉಲ್ಲಂಘನೆಯ ಪ್ರಯತ್ನಗಳನ್ನು ತಡೆಗಟ್ಟಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಪಕ್ಷದ ಏಜೆಂಟ್‌ಗಳು ಸೇರಿದಂತೆ ಮತ ಎಣಿಕೆ ಪ್ರದೇಶವನ್ನು ಪ್ರವೇಶಿಸುವ ಎಲ್ಲಾ ವ್ಯಕ್ತಿಗಳನ್ನು ಸಂಪೂರ್ಣವಾಗಿ ತಪಾಸಣೆ ಮಾಡಬೇಕು. ಅಧಿಕಾರಿಗಳು ಮತ್ತು ಮಾಧ್ಯಮ ಸಿಬ್ಬಂದಿ ಅವರ ಉಪಸ್ಥಿತಿಯು ಅತ್ಯಗತ್ಯವಾಗಿದ್ದು, ಅವರ ಪೂರ್ವ ಅನುಮತಿ ಪಡೆದ ವ್ಯಕ್ತಿಗಳಿಗೆ ಮಾತ್ರ ಅವಕಾಶ ಮಾಡಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇನ್ನು ಈ ಹಿಂದೆ ಏಪ್ರಿಲ್ 26ರಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾನ ನಡೆಯುವ ಮೊದಲು ಬಿಜೆಪಿ ಅಭ್ಯರ್ಥಿ ಡಾ ಸಿ ಎನ್ ಮಂಜುನಾಥ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಸಿಆರ್​ಪಿಎಫ್​ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X