ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು 7 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.
37 ಜನ ಪ್ರಯಾಣಿಕರಿದ್ದ ಖಾಸಗಿ ಬಸ್ ಕಲಬುರಗಿಯಿಂದ ಬೆಂಗಳೂರು ಕಡೆ ಸಾಗುತ್ತಿತ್ತು. ಹತ್ತಿಗುಡೂರು ಬಳಿಯ ಹಳ್ಳದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
ಇದನ್ನು ಓದಿದ್ದೀರಾ? ಬೆಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ
ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 7 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಕೆಲ ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿ ತಿಳಿದ ಕೂಡಲೇ ಸುರಪುರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.