ಬೆಂಗಳೂರು ಮಳೆ | ಅಹಿತಕರ ಘಟನೆಗಳಾಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಸೂಚನೆ

Date:

Advertisements

“ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲ ಇಲಾಖೆಗಳು ಸರ್ವ ಸನ್ನದ್ದರಾಗಿ ಕೆಲಸ ಮಾಡಬೇಕು. ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು. ಇದು ಅಧಿಕಾರಿಗಳ ಜವಾಬ್ದಾರಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸೂಚನೆ ನೀಡಿದ್ದಾರೆ.

ಮಳೆ ಹಾನಿ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “1533 ಗೆ ಸಾರ್ವಜನಿಕರು ಕರೆ ಮಾಡಿ ಮಳೆ ಹಾನಿ ಸಂಬಂಧಿಸಿದಂತೆ ತಕ್ಷಣ ದೂರು ನೀಡಬಹುದು. ಅಪಾಯಕಾರಿ ಮರ ತೆರವಿಗೆ ಅರಣ್ಯ ಇಲಾಖೆ ಮತ್ತು ಬಿಬಿಎಂಪಿ ಜಂಟಿಯಾಗಿ ಸಮೀಕ್ಷೆ ನಡೆಸಿ ಕಾರ್ಯ ನಿರ್ವಹಿಸಬೇಕು. ತಗ್ಗು ವಸತಿ ಪ್ರದೇಶಗಳಿಗೆ ನೀರು ನುಗ್ಗದಂತೆ ಉತ್ತಮ ಸಾಮರ್ಥ್ಯದ ಪಂಪ್ ಸೆಟ್, ಜನರೇಟರ್‌ಗಳು ಹಾಗೂ ಹೆಚ್ಚು ನೀರು ಹರಿಯುವ ರಾಜಕಾಲುವೆ ಬಳಿ ಜೆಸಿಬಿ, ಟಿಪ್ಪರ್‌ಗಳನ್ನು ಮುನ್ನೆಚರಿಕಾ ಕ್ರಮವಾಗಿ ಸಿದ್ದ ಮಾಡಿಕೊಂಡಿರಬೇಕು. ಎನ್‌ಡಿಆರ್ ಎಫ್ ತಂಡದೊಟ್ಟಿಗೂ ಸಂಪರ್ಕದಲ್ಲಿ ಇರಬೇಕೆಂದು ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

“ಬೆಸ್ಕಾಂ, ಕೆಪಿಟಿಸಿಎಲ್, ಬಿಬಿಎಂಪಿ, ಬಿಡ್ಬ್ಯೂಎಸ್‌ಎಸ್ ಬಿ, ಅರಣ್ಯ ಇಲಾಖೆ ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ಯಾವ ಇಲಾಖೆಯೂ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ಸೂಚನೆ ನೀಡಿದ್ದೇನೆ. ರಾಜಕಾಲುವೆಗೆ ಸಂಬಂಧಿಸಿದಂತೆ ಒಂದಷ್ಟು ಜನ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುತ್ತಾರೆ. ಇದನ್ನು ಮುಂದಿಟ್ಟುಕೊಂಡು ಮೈಗೆ ಎಣ್ಣೆ ಹಚ್ಚಿಕೊಂಡು ಅಧಿಕಾರಿಗಳು ಕೆಲಸದಿಂದ ನುಣುಚಿಕೊಳ್ಳುವಂತಿಲ್ಲ. ಒತ್ತುವರಿಯಾಗಿರುವ ಜಾಗಗಳು ಸರ್ಕಾರದ ಆಸ್ತಿಗಳು. ನೀರು ಹರಿಯಲು ತೊಂದರೆಯಾಗುವುದಾದರೆ ನಿರ್ದಾಕ್ಷಿಣ್ಯವಾಗಿ ಕೆಲಸ ಮಾಡಬೇಕು” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

Advertisements

“ಭಾನುವಾರ ರಾತ್ರಿ ಸುರಿದ ಮಳೆ ಸಾಕಷ್ಟು ಹಾನಿ ಉಂಟಾಗಿತ್ತು. ಉತ್ತಮ ರೀತಿಯಲಿ ಪರಿಸ್ಥಿತಿ ನಿಭಾಯಿಸಿರುವ ಅಧಿಕಾರಿಗಳಿಗೆ ಅಭಿನಂದನೆಗಳು. ಮರಗಳ ತೆರವು ಸೇರಿದಂತೆ ಜನರಿಗೆ ಆಗುತ್ತಿದ್ದ ತೊಂದರೆಗಳನ್ನು ತಕ್ಷಣ ತಪ್ಪಿಸಿದ್ದಾರೆ. ಟ್ರಾಫಿಕ್ ಆಗದಂತೆ ನೋಡಿಕೊಂಡಿದ್ದಾರೆ. ಮೆಟ್ರೋ ಹಳಿ ಮೇಲೂ ಮರ ಬಿದ್ದಿತ್ತು. ಇದನ್ನು ಆದಷ್ಟು ಬೇಗ ಇದನ್ನು ತೆರವುಗೊಳಿಸಿದ್ದಾರೆ. ಜೂನ್‌ನಲ್ಲಿ ಉತ್ತಮ ಮಳೆ ಬಿದ್ದಿರುವುದು ನನಗೆ ಸಾಕಷ್ಟು ಸಂತೋಷವಾಗಿದೆ. ಮೂರು ಜನರಿಗೆ ಗಾಯಗಳಾಗಿವೆ. ವಾಹನಗಳು ಜಖಂಗೊಂಡಿವೆ. 265 ಮರಗಳು ಬಿದ್ದಿವೆ. 96 ಮರಗಳನ್ನು ತೆರವುಗೊಳಿಸಲಾಗಿದೆ. 365 ಕೊಂಬೆಗಳು ಬಿದ್ದಿದ್ದವು. ಎಲ್ಲವನ್ನು ತೆರವುಗೊಳಿಸಲಾಗಿದೆ. 261 ವಿದ್ಯುತ್ ಕಂಬಗಳು ಬಿದ್ದಿದ್ದವು. ಇದನ್ನು ಸರಿಪಡಿಸಲಾಗುತ್ತಿದೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ ಕೆ ಶಿವಕುಮಾರ್ ಮಾಹಿತಿ ನೀಡಿದರು.

“694 ದೂರುಗಳನ್ನು ಬಿಬಿಎಂಪಿ ಕಂಟ್ರೋಲ್ ರೂಮ್‌ಗೆ ಬಂದಿದೆ. ಇದರಲ್ಲಿ 525 ದೂರುಗಳನ್ನು ಪರಿಶೀಲಿಸಲಾಗಿದೆ. 69 ದೂರುಗಳು ಉಳಿದುಕೊಂಡಿವೆ. ಇವನ್ನು ಶೀಘ್ರ ಪರಿಹರಿಸಲಾಗುವುದು. ಜನರ ಪ್ರಾಣ ಮುಖ್ಯ. ಆದ ಕಾರಣ ಮುಂಬೈ ರೀತಿ ಹಳೆ ಕಟ್ಟಡಗಳು ಕುಸಿಯುವ ಹಂತದಲ್ಲಿ ಇದ್ದರೆ ಕೂಡಲೇ ಅವುಗಳನ್ನು ಗುರುತಿಸಿ, ಅಲ್ಲಿದ್ದವರನ್ನು ಸ್ಥಳಾಂತರ ಮಾಡಬೇಕು. ಮಳೆ ಬಿದ್ದಾಗ ರಸ್ತೆಗುಂಡಿಗಳನ್ನು ಮುಚ್ಚಿದರೆ ಮತ್ತೆ ಕಿತ್ತು ಹೋಗುವ ಸಾಧ್ಯತೆ ಇರುವ ಕಾರಣ ಈ ಕೆಲಸ ತಡವಾಗಬಹುದು. ಇದೊಂದು ವಿಚಾರ ಹೊರತಾಗಿ ಮಿಕ್ಕ ವಿಚಾರಗಳಲ್ಲಿ ಎಚ್ಚರಿಕೆ ವಹಿಸಬೇಕು” ಎಂದು ಡಿಕೆಶಿ ತಿಳಿಸಿದರು.

ಮರಗಳು ಬಿದ್ದು ವಿದ್ಯುತ್ ಕಡಿತ ಉಂಟಾಗುತ್ತಿದೆ ಎಂದು ಕೇಳಿದಾಗ “ಮರ ಬಿದ್ದು ತಂತಿ ತುಂಡದಾಗ ಮತ್ತೆ ಜೋಡಿಸುವುದು ಅತ್ಯಂತ ಕಷ್ಟದ ಹಾಗೂ ಸೂಕ್ಷ್ಮ ಕೆಲಸ. ಇದರ ನಡುವೆಯೂ ಬೆಸ್ಕಾಂ ಅವರು ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇಂಧನ ಸಚಿವರು ಕಾರ್ಯಪ್ರವೃತ್ತರಾಗಿದ್ದಾರೆ. ಭಾನುವಾರ ರಾತ್ರಿ ಬಸವೇಶ್ವರ ವೃತ್ತದಲ್ಲಿ ತೆರವುಗೊಳಿಸುತ್ತಾ ಇದ್ದಿದ್ದನ್ನು ನಾನೇ ನೋಡಿದ್ದೇನೆ. ಮರಗಳ ಮದ್ಯೆ ಕಾರು ಸಿಲುಕಿಕೊಂಡಿತ್ತು. ಯಾರಿಗಾದರೂ ತೊಂದರೆಯಾಗಿದೆಯೇ ಎಂದು ನಾನೇ ಗಾಬರಿಗೊಂಡಿದ್ದೆ. ಅದೃಷ್ಟವಶಾತ್ ತೊಂದರೆಯಾಗಿಲ್ಲ” ಎಂದರು.

ಇದನ್ನು ಓದಿದ್ದೀರಾ? ಬೆಂಗಳೂರು: 133 ವರ್ಷಗಳ ದಾಖಲೆ ಮುರಿದ ಒಂದೇ ದಿನದ ಮಳೆ

ಎಲ್ಲ ವಾರ್ಡ್‌ಗಳಲ್ಲಿ ತೊಂದರೆಯಾಗುತ್ತಿದ್ದು ಸ್ಥಳೀಯ ಕಾರ್ಪೋರೇಟರ್‌ಗಳು ಇಲ್ಲದಿರುವುದು ತೊಂದರೆಯಾಗುತ್ತಿದೆಯೇ ಎಂದಾಗ, “ಕಾರ್ಪೋರೇಟರ್‌ಗಳು ಏನು ಮಾಡುತ್ತಾರೆ. ಅಧಿಕಾರ ಇರಲಿ ಇಲ್ಲದಿರಲಿ ಜನರ ಸೇವೆಗೆ ಯಾವಾಗಲೂ ಕೆಲಸ ಮಾಡಬೇಕು. ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಜನಪ್ರತಿನಿಧಿಗಳು ಇರಬೇಕು. ಲೋಕಸಭೆ ಚುನಾವಣೆ ಮುಗಿದಿದೆ. ಈಗ ಅದರ ಬಗ್ಗೆ ಯೋಚಿಸಲಾಗುವುದು” ಎಂದು ಹೇಳಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X