ಬೆಂಗಳೂರು | ಬಿಜೆಪಿ ಭದ್ರಕೋಟೆಗಳನ್ನು ಭೇದಿಸುವುದೇ ಕಾಂಗ್ರೆಸ್‌?

Date:

Advertisements

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಈ ಬಾರಿ ನಿರ್ಣಾಯಕವಾಗಲಿದೆ. ಮತಎಣಿಕೆ ಆರಂಭವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕಳೆದ 32 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜನತೆ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಗೆ ಒಲವು ತೋರುತ್ತಾರಾ ಕಾದು ನೋಡಬೇಕಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವು ಗೋವಿಂದರಾಜನಗರ, ವಿಜಯನಗರ, ಚಿಕ್ಕಪೇಟೆ, ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. 1977ರಿಂದ ಕ್ಷೇತ್ರ ವಿಂಗಡಣೆಯಾದಾಗ ಈ ಕ್ಷೇತ್ರ ಅಸ್ತಿತ್ವಕ್ಕೆ ಬಂದಿದೆ. ಇಲ್ಲಿಯವರೆಗೂ 12 ಚುನಾವಣೆಗಳಲ್ಲಿ 3 ಬಾರಿ ಜನತಾ ಪಕ್ಷ, ಒಂದು ಬಾರಿ ಕಾಂಗ್ರೆಸ್‌ ಪಕ್ಷ ಮತ್ತು 8 ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. 1991ರಿಂದ ಕ್ಷೇತ್ರವನ್ನು ಬಿಜೆಪಿ ತನ್ನ ಭದ್ರಕೋಟೆ ಮಾಡಿಕೊಂಡಿದೆ.

2019ರಲ್ಲಿ ತೇಜಸ್ವಿ ಸೂರ್ಯ ಅವರು ಈ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ 2024ರ ಲೋಕಸಭಾ ಚುನಾವಣೆಯಲ್ಲಿಯೂ ಅವರೇ ಕಣದಲ್ಲಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

Advertisements

ಈ ಬಾರಿ ಬಿಜೆಪಿ ಹಾಲಿ ಸಂಸದ ತೇಜಸ್ವಿ ಸೂರ್ಯ ಮತ್ತೊಮ್ಮೆ ಜಯ ಸಾಧಿಸುತ್ತಾರಾ ಅಥವಾ ಮೊದಲ ಮಹಿಳಾ ಸಂಸದರಾಗಿ ಸೌಮ್ಯ ರೆಡ್ಡಿ ಅವರು ಗೆದ್ದು ದಾಖಲೆ ಮಾಡುತ್ತಾರಾ ಎಂಬುದು ಕುತೂಹಲ ಕೆರಳಿಸಿದೆ.

‘ಗೋ ಬ್ಯಾಕ್‌ ಶೋಭಕ್ಕ’ ಗೆಲುವು-ಸೋಲು ಪ್ರಶ್ನೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಉಡುಪಿ-ಚಿಕ್ಕಮಗಳೂರು ಹಾಲಿ ಸಂಸದೆ ಆಗಿರುವ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್​ ನೀಡಿದೆ. ಇತ್ತ ಕಾಂಗ್ರೆಸ್​ ಹೊಸ ಅಭ್ಯರ್ಥಿಗೆ ಮಣೆ ಹಾಕಿದ್ದು, ಎಂ ವಿ ರಾಜೀವ್​ ಗೌಡ ಅವರು ಸ್ಪರ್ಧೆ ಮಾಡಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ 1951ರಿಂದ ಲೋಕಸಭಾ ಚುನಾವಣೆ ಆರಂಭವಾಗಿ 2004ರವರೆಗೆ ಕಾಂಗ್ರೆಸ್​ ಭದ್ರಕೋಟೆಯಾಗಿತ್ತು. ಕಳೆದ ಬಾರಿ ಒಲ್ಲದ ಮನಸ್ಸಿನಲ್ಲಿ ಕೃಷ್ಣಬೈರೇಗೌಡರು ನಿಂತು, ಸದಾನಂದಗೌಡರ ವಿರುದ್ದ ಸೋಲುಂಡಿದ್ದರು. ಈ ಕ್ಷೇತ್ರದಲ್ಲಿ 2004ರಿಂದ ನಿವೃತ್ತ ಪೊಲೀಸ್​ ಅಧಿಕಾರಿಯಾಗಿದ್ದ ಎಚ್​ಟಿ ಸಾಂಗ್ಲಿಯಾನ ಅವರು ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದರು. ಇದಾದ ಬಳಿಕ ಹಾಲಿ ಸಂಸದ ಸದಾನಂದ ಗೌಡರು ಎರಡು ಬಾರಿ ಗೆದ್ದಿದ್ದರು.

ಉಡುಪಿ-ಚಿಕ್ಕಮಗಳೂರು ಹಾಲಿ ಸಂಸದೆ ಆಗಿರುವ ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಘೋಷಣೆ ಕೂಗಿದ್ದರು. ಬಳಿಕ, ಅವರನ್ನು ಬೆಂಗಳೂರಿನ ಉತ್ತರ ವರ್ಗಾಯಿಸಲಾಗಿದೆ. ಇಲ್ಲಿಯೂ ಕೂಡ ಗೋ ಬ್ಯಾಕ್ ಶೋಭಕ್ಕ ಅಭಿಯಾನ ನಡೆದಿದ್ದು, ವಿರೋಧದ ನಡುವೆಯೂ ಶೋಭ ಸ್ಪರ್ಧೆಯಲ್ಲಿದ್ದಾರೆ. ಉಡುಪಿ-ಚಿಕ್ಕಮಗಳೂರಿನಲ್ಲಿ ಸಲ್ಲದವರು, ಬೆಂಗಳೂರು ಉತ್ತರದಲ್ಲಿ ಸಲ್ಲುವರೇ ಅಥವಾ ತಿರಸ್ಕೃತವಾಗುವರೇ ಇಂದು ಗೊತ್ತಾಗಲಿದೆ.

ಈ ಸುದ್ದಿ ಓದಿದ್ದೀರಾ? ‌ಲೋಕಸಭಾ ಚುನಾವಣೆ | ಮತ ಎಣಿಕೆಗೆ ಕ್ಷಣಗಣನೆ; ಮತ ಎಣಿಕೆ ಕೇಂದ್ರಗಳ ಬಾಗಿಲು ಓಪನ್

ಮತ್ತೆ ಗೆಲುವಿನ ನಗೆ ಬೀರಲಿದ್ದಾರಾ ಪಿ.ಸಿ.ಮೋಹನ್?

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಮತ್ತು ಕಾಂಗ್ರೆಸ್​ನಿಂದ ಮನ್ಸೂರ್ ಅಲಿ ಖಾನ್ ಪ್ರಮುಖ ಅಭ್ಯರ್ಥಿಗಳಾಗಿ ಕಣದಲ್ಲಿದ್ದಾರೆ.

ಬಿಜೆಪಿಯ ಭದ್ರಕೋಟೆಯಾಗಿದ್ದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಈ ಬಾರಿ ಕಾಂಗ್ರೆಸ್‌ನ ಹಿಡಿತಕ್ಕೆ ಸಿಗಲಿದೆಯಾ ಕಾದು ನೋಡಬೇಕಿದೆ. ಈ ಕ್ಷೇತ್ರದಲ್ಲಿ ಏಪ್ರಿಲ್ 26ರಂದು ಶೇ.54.06 ಮತದಾನವಾಗಿತ್ತು.

2008ರಲ್ಲಿ ಈ ಕ್ಷೇತ್ರವನ್ನು ವಿಂಗಡಣೆ ಮಾಡಿ ರಚಿಸಲಾಯಿತು. ಅಂದಿನಿಂದ ಇಂದಿನವರೆಗೂ ಈ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಪಿಸಿ ಮೋಹನ್ ಗೆಲುವು ಸಾಧಿಸುತ್ತಾ ಬಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X